ಶಿಕ್ಷಕರ ದೈನಂದಿನ ಪಾಠ ಪ್ರವಚನ ಒತ್ತಡಗಳಿಂದ ಸ್ವಲ್ಪ ಮಟ್ಟಿಗೆ ಒತ್ತಡವನ್ನು ದೂರ ಮಾಡಲು ಸಹ ಪಠ್ಯ ಚಟುವಟಿಕೆ ಸ್ಪರ್ಧೆಗಳು ಉತ್ತಮ ವೇದಿಕೆಯಾಗಿವೆ.
ಹೊಸಪೇಟೆ: ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಬೆಂಗಳೂರು ಹಾಗೂ ಉಪನಿರ್ದೇಶಕರ ಕಾರ್ಯಾಲಯ ವಿಜಯನಗರ ಜಿಲ್ಲೆ, ಹೊಸಪೇಟೆ ವತಿಯಿಂದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರಿಗಾಗಿ ಜಿಲ್ಲಾ ಮಟ್ಟದ ಶಿಕ್ಷಕರ ಸಹಪಠ್ಯ ಚಟುವಟಿಕೆ ಸ್ಪರ್ಧೆಗಳನ್ನು ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿತ್ತು.ಡಿಡಿಪಿಐ ವೆಂಕಟೇಶ್ ರಾಮಚಂದ್ರಪ್ಪ ಉದ್ಘಾಟಿಸಿ ಮಾತನಾಡಿ, ಶಿಕ್ಷಕರ ದೈನಂದಿನ ಪಾಠ ಪ್ರವಚನ ಒತ್ತಡಗಳಿಂದ ಸ್ವಲ್ಪ ಮಟ್ಟಿಗೆ ಒತ್ತಡವನ್ನು ದೂರ ಮಾಡಲು ಸಹ ಪಠ್ಯ ಚಟುವಟಿಕೆ ಸ್ಪರ್ಧೆಗಳು ಉತ್ತಮ ವೇದಿಕೆಯಾಗಿವೆ. ಶಿಕ್ಷಕರಲ್ಲಿ ಹಲವಾರು ಪ್ರತಿಭೆಗಳಿರುತ್ತವೆ. ಶಿಕ್ಷಕರು ತಮ್ಮಲ್ಲಿರುವ ಪ್ರತಿಭೆಯನ್ನು ಅನಾವರಣಗೊಳಿಸಲು ಇಲಾಖೆ ಒಳ್ಳೆಯ ಅವಕಾಶವನ್ನು ನೀಡಿದ್ದು, ಇದರ ಸದುಪಯೋಗ ಪಡೆಸಿಕೊಂಡು ರಾಜ್ಯ ಹಂತದಲ್ಲಿ ಭಾಗವಹಿಸಿ ಜಿಲ್ಲೆಯ ಶಿಕ್ಷಣ ಇಲಾಖೆಗೆ ಕೀರ್ತಿ ತರಬೇಕು ಎಂದರು.
ಕಾರ್ಯಕ್ರಮದ ನೋಡಲ್ ಅಧಿಕಾರಿ ರಾಜಶೇಖರ್ ಪ್ರಾಸ್ತಾವಿಕವಾಗಿ ಮಾತನಾಡಿದರು.ಪ್ರಭಾರ ಪ್ರಾಚಾರ್ಯೆ ವೀಣಾಕುಮಾರಿ ಅಧ್ಯಕ್ಷತೆ ವಹಿಸಿದ್ದರು. ವಿಷಯ ಪರಿವೀಕ್ಷಕರಾದ ಎಚ್.ಎಂ.ವಿಶ್ವನಾಥ, ಬಸವಂತಯ್ಯ ಹಿರೇಮಠ, ಪ್ರೌಢ ಶಾಲಾ ಮುಖ್ಯೋಪಾಧ್ಯಾಯರಾದ ವೆಂಕಟೇಶ್ ಕುಲಕರ್ಣಿ, ಪ್ರವೀಣಾ ಬಿ. ಹಲಗಣಿ, ಸಂಘದ ಪದಾಧಿಕಾರಿಗಳಾದ ಸಿದ್ಧರಾಧ್ಯ, ಬಸವರಾಜ ಕೆ.,ಆರ್.ಬಿ. ಬಸವರಾಜ, ಟಿ.ವಿಶ್ವನಾಥ, ಕೆ.ಬಿ.ತಿಮ್ಮಪ್ಪ ಮತ್ತಿತರರಿದ್ದರು. ಶಿಕ್ಷಕಿಯರಾದ ಯೋಗಿಶ್ವರಿ, ರಾಜೇಶ್ವರಿ ನಿರ್ವಹಿಸಿದರು.
ಹೊಸಪೇಟೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರಿಗಾಗಿ ಜಿಲ್ಲಾ ಮಟ್ಟದ ಶಿಕ್ಷಕರ ಸಹಪಠ್ಯ ಚಟುವಟಿಕೆ ಸ್ಪರ್ಧೆಗಳ ಕಾರ್ಯಕ್ರಮವನ್ನು ಡಿಡಿಪಿಐ ವೆಂಕಟೇಶ್ ರಾಮಚಂದ್ರಪ್ಪ ಉದ್ಘಾಟಿಸಿದರು.