ವೀವಿ ಸಂಘದಿಂದ ಶಿಕ್ಷಕರ ದಿನ: ನಿವೃತ್ತ ಶಿಕ್ಷಕರಿಗೆ ಸನ್ಮಾನ

| Published : Oct 01 2024, 01:31 AM IST

ವೀವಿ ಸಂಘದಿಂದ ಶಿಕ್ಷಕರ ದಿನ: ನಿವೃತ್ತ ಶಿಕ್ಷಕರಿಗೆ ಸನ್ಮಾನ
Share this Article
  • FB
  • TW
  • Linkdin
  • Email

ಸಾರಾಂಶ

ಶಿಕ್ಷಕರು ಸಮಾಜದ ಶಿಲ್ಪಿಗಳು ಎಂದೇ ನಂಬಲಾಗಿದೆ. ವಿದ್ಯಾರ್ಥಿಗಳ ಭವಿಷ್ಯ ಶಿಕ್ಷಕರನ್ನು ಅವಲಂಬಿಸಿದೆ.

ಬಳ್ಳಾರಿ: ವೀರಶೈವ ವಿದ್ಯಾವರ್ಧಕ ಸಂಘದಿಂದ ನಗರದ ಅಲ್ಲಂ ಸುಮಂಗಳಮ್ಮ ಮಹಾವಿದ್ಯಾಲಯ ಸಭಾಂಗಣದಲ್ಲಿ ಶಿಕ್ಷಕ ದಿನಾಚರಣೆ ಹಾಗೂ ನಿವೃತ್ತ ಶಿಕ್ಷಕರಿಗೆ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಪ್ರಕಾಶ್ ಟ್ಯೂಟೋರಿಯಲ್ ನ ಮುಖ್ಯಸ್ಥ ಪ್ರಕಾಶ್ ಕುಲಕರ್ಣಿ, ಶಿಕ್ಷಕರು ಹಾಗೂ ವಿದ್ಯಾರ್ಥಿ ನಡುವಿನ ಸಂಬಂಧ, ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ದಿಸೆಯಲ್ಲಿ ಶಿಕ್ಷಕರು ವಹಿಸಬೇಕಾದ ಪಾತ್ರ, ಹೊಸ ಹೊಸ ಸಂತ್ರಜ್ಞಾನಗಳನ್ನು ಮಕ್ಕಳಿಗೆ ತಿಳಿಸಿ ಕೊಡುವುದರಿಂದಾಗುವ ಪ್ರಯೋಜನೆಗಳು ಕುರಿತು ತಿಳಿಸಿದರು.

ಶಿಕ್ಷಕರು ಸಮಾಜದ ಶಿಲ್ಪಿಗಳು ಎಂದೇ ನಂಬಲಾಗಿದೆ. ವಿದ್ಯಾರ್ಥಿಗಳ ಭವಿಷ್ಯ ಶಿಕ್ಷಕರನ್ನು ಅವಲಂಬಿಸಿದೆ. ಹೀಗಾಗಿ ಶಿಕ್ಷಕರಾದವರು ಮಕ್ಕಳಿಗೆ ಬದುಕಿನ ಬಗ್ಗೆ ಭರವಸೆ ಮೂಡಿಸಬೇಕು. ಪಠ್ಯವಷ್ಟೇ ಶಿಕ್ಷಣ ಅಲ್ಲ; ಪಠ್ಯಪುಸ್ತಕ ವಿಷಯಗಳು ಹೊರತಾಗಿಯೂ ಜ್ಞಾನಾರ್ಜನೆಗೆ ಅನೇಕ ಅವಕಾಶಗಳಿವೆ ಎಂಬುದನ್ನು ತಿಳಿಸಿಕೊಡಬೇಕು. ಮಾತೃಭಾಷೆಯಲ್ಲಿ ಪ್ರಭುತ್ವ ಸಾಧಿಸುವುದರಿಂದಾಗುವ ಅನುಕೂಲಗಳ ಕುರಿತು ಮನವರಿಕೆ ಮಾಡಿಕೊಡಬೇಕು ಎಂದರು.

ವೀವಿ ಸಂಘದ ಕಾಲೇಜಿನ ವಿದ್ಯಾರ್ಥಿ ಎಂಬ ನನಗಿದೆ. ಬಡತನದ ನಡುವೆ ಓದಿ ಚಿನ್ನದ ಪದಕ ಪಡೆದುಕೊಂಡೆ ಎಂದು ಕಾಲೇಜು ದಿನಗಳನ್ನು ನೆನಪಿಸಿಕೊಂಡರು.

ಪ್ರಾಸ್ತಾವಿಕ ಮಾತನಾಡಿದ ವೀವಿ ಸಂಘದ ಕಾರ್ಯದರ್ಶಿ ಡಾ.ಅರವಿಂದ ಪಾಟೀಲ್ ಅವರು, ಎಲ್ಲ ಸಮುದಾಯಗಳ ಶೈಕ್ಷಣಿಕ ಬೆಳವಣಿಗೆಗೆ ಶ್ರಮಿಸಿದ ವೀವಿ ಸಂಘದ ಕೊಡುಗೆಯನ್ನು ತಿಳಿಸಿದರು. ವೀ ವಿ ಸಂಘದ ವಿವಿಧ ಶಾಲಾ-ಕಾಲೇಜುಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ 28 ಶಿಕ್ಷಕರನ್ನು ಸಮಾರಂಭದಲ್ಲಿ ಸನ್ಮಾನಿಸಲಾಯಿತು.

ಅಲ್ಲಂ ಸುಮಂಗಳಮ್ಮ ಕಾಲೇಜಿನ ಪ್ರಾಧ್ಯಾಪಕಿ ಡಾ.ಜಲಜಾಕ್ಷಿ ಅವರು ಸನ್ಮಾನಿತರ ಪರವಾಗಿ ಮಾತನಾಡಿದರು.ವೀವಿ ಸಂಘದ ಅಧ್ಯಕ್ಷ ಅಲ್ಲಂ ಗುರುಬಸವರಾಜ್ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು.

ವೀವಿ ಸಂಘದ ಕೋಶಾಧಿಕಾರಿ ಬೈಲುವದ್ದಿಗೇರಿ ಎರಿಸ್ವಾಮಿ, ವೀವಿ ಸಂಘದ ಮಾಜಿ ಕಾರ್ಯದರ್ಶಿ ಚೋರನೂರು ಕೊಟ್ರಪ್ಪ, ಆಡಳಿತ ಮಂಡಳಿಯ ಸದಸ್ಯರಾದ ಹಚ್ಚೊಳ್ಳಿ ಎಂ. ಶರಣಬಸವನಗೌಡ ,ಕೋರಿ ವಿರುಪಾಕ್ಷಪ್ಪ,ಕಾತ್ಯಾಯನಿ ಮರಿದೇವಯ್ಯ, ಟಿ.ನರೇಂದ್ರಬಾಬು, ಎ.ಡಿಬಿ ಕಾಲೇಜಿನ ಪ್ರಾಧ್ಯಾಪಕ ಡಾ.ಜಿ.ಬಿ.ನಾಗನಗೌಡ, ಎಸ್.ಜಿ ಕಾಲೇಜಿನ ನಿವೃತ್ತ ಉಪನ್ಯಾಸಕ ಲಿಂಗರಾಜ ಉಪಸ್ಥಿತರಿದ್ದರು.

ಗಂಧರ್ವ ಶಾಲೆಯ ಮಕ್ಕಳು ವಚನಗಾಯನ ಮಾಡಿದರು. ಎ.ಎಸ್.ಎಂ. ಕಾಲೇಜಿನ ಪ್ರಾಚಾರ್ಯ ಡಾ.ಗೋವಿಂದರಾಜು, ಉಪನ್ಯಾಸಕ ಡಾ.ಗಂಗಾಧರ ಕಾರ್ಯಕ್ರಮ ನಿರ್ವಹಿಸಿದರು. ವೀವಿ ಸಂಘದ ವಿವಿಧ ಶಾಲಾ ಕಾಲೇಜಿನ ಸಿಬ್ಬಂದಿ