ಸಾರಾಂಶ
ತೊಟ್ಟಂ ಸಂತ ಅನ್ನಮ್ಮ ಚರ್ಚಿನಲ್ಲಿ ಶುಕ್ರವಾರ ಡಾ. ಸರ್ವಪಲ್ಲಿ ರಾಧಾಕೃಷ್ಣ ಅವರು ಜನ್ಮದಿನಾಚರಣೆಯ ಅಂಗವಾಗಿ ಶಿಕ್ಷಕರ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು.
ಉಡುಪಿ: ಇಲ್ಲಿನ ಮಲ್ಪೆ ಸಮೀಪದ ತೊಟ್ಟಂ ಸಂತ ಅನ್ನಮ್ಮ ಚರ್ಚಿನಲ್ಲಿ ಶುಕ್ರವಾರ ಡಾ. ಸರ್ವಪಲ್ಲಿ ರಾಧಾಕೃಷ್ಣ ಅವರು ಜನ್ಮದಿನಾಚರಣೆಯ ಅಂಗವಾಗಿ ಶಿಕ್ಷಕರ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು.
ಬಲಿಪೂಜೆ ಬಳಿಕ ಚರ್ಚ್ ವ್ಯಾಪ್ತಿಯಲ್ಲಿರುವ ವಿವಿಧ ಶಾಲಾ ಕಾಲೇಜಗಳಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರನ್ನು ಹೂಗುಚ್ಚ ನೀಡ ಶಾಲು ಹೊದೆಸಿ ಸನ್ಮಾನಿಸಲಾಯಿತು.ಶಿಕ್ಷಕರನ್ನು ಸನ್ಮಾನಿಸಿ ಮಾತನಾಡಿದ ಚರ್ಚಿನ ಧರ್ಮಗುರು ವಂ. ಡೆನಿಸ್ ಡೆಸಾ ಅವರು, ಶಿಕ್ಷಕ ಉತ್ತಮ ಸಮಾಜದ ನಿರ್ಮಾಪಕರಾಗಿದ್ದು ಮೌಲ್ಯಯುತ ಶಿಕ್ಷಣದ ಮೂಲಕ ಮಕ್ಕಳನ್ನು ಆದರ್ಶ ನಾಗರಿಕರನ್ನಾಗಿಸುವ ಜವಾಬ್ದಾರಿ ಅವರ ಮೇಲಿದೆ. ಒಂದು ಆರೋಗ್ಯಕರ ಸಮಾಜ ನಿರ್ಮಾಣದ ಹಿಂದ ಶಿಕ್ಷಕರ ಪಾತ್ರ ಪ್ರಮುಖವಾದುದು. ಮುಗ್ದ ಮಗುವಿನ ಮನಸ್ಸು ಅರ್ಥ ಮಾಡಿಕೊಂಡು ಆತನಿಗೆ ಶಿಕ್ಷಣ ನೀಡುವ ಹೊಣೆಗಾರಿಕೆ ಶಿಕ್ಷಕರ ಮೇಲಿದೆ ಎಂದರು.
ಈ ವೇಳೆ ಚರ್ಚ್ ಪಾಲನಾ ಸಮಿತಿ ಉಪಾಧ್ಯಕ್ಷ ಲೆಸ್ಲಿ ಆರೋಜಾ, ಸ್ಥಳೀಯ ಕಾನ್ವೆಂಟಿನ ಧರ್ಮಭಗಿನಿಯರು ಮತ್ತು ಚರ್ಚಿನ ಪ್ರಮುಖರು ಉಪಸ್ಥಿತರಿದ್ದರು.