ಸಾರಾಂಶ
ಪಟ್ಟಣದ ವೀರಶೈವ ಕಲ್ಯಾಣ ಮಂಟಪದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ಶಿಕ್ಷಕರ ದಿನಾಚರಣೆ ಸಮಿತಿ ವತಿಯಿಂದ ಏರ್ಪಡಿಸಲಾಗಿದ್ದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರವರು ಜನ್ಮ ದಿನಾಚರಣೆ ಹಾಗೂ ಶಿಕ್ಷಕರ ದಿನಾಚರಣೆಯನ್ನು ಶಾಸಕ ಸಿಮೆಂಟ್ ಮಂಜು ಉದ್ಘಾಟಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಎ.ಜೆ. ಕೃಷ್ಣೇಗೌಡರವರು, ಶಿಕ್ಷಕರು ತಮ್ಮ ವೃತ್ತಿ ಮತ್ತು ಜೀವನದಲ್ಲಿ ಕಪ್ಪು ಚುಕ್ಕೆಗಳು ಎದುರಾಗದಂತೆ ಸೇವೆ ಮಾಡಬೇಕು ಎಂದರು. ಪ್ರಾಥಮಿಕ, ಪ್ರೌಢಶಾಲೆ ಮತ್ತು ಶಿಕ್ಷಣ ಇಲಾಖೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಮತ್ತು ಮರಣ ಹೊಂದಿದ ನೌಕರರ ಕುಟುಂಬಗಳಿಗೆ ಸನ್ಮಾನಿಸಲಾಯಿತು.
ಕನ್ನಡಪ್ರಭ ವಾರ್ತೆ ಆಲೂರು
ಪಟ್ಟಣದ ವೀರಶೈವ ಕಲ್ಯಾಣ ಮಂಟಪದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ಶಿಕ್ಷಕರ ದಿನಾಚರಣೆ ಸಮಿತಿ ವತಿಯಿಂದ ಏರ್ಪಡಿಸಲಾಗಿದ್ದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರವರು ಜನ್ಮ ದಿನಾಚರಣೆ ಹಾಗೂ ಶಿಕ್ಷಕರ ದಿನಾಚರಣೆಯನ್ನು ಶಾಸಕ ಸಿಮೆಂಟ್ ಮಂಜು ಉದ್ಘಾಟಿಸಿದರು.ಕ್ಷೇತ್ರ ಶಿಕ್ಷಣಾಧಿಕಾರಿ ಎ.ಜೆ. ಕೃಷ್ಣೇಗೌಡರವರು, ಶಿಕ್ಷಕರು ತಮ್ಮ ವೃತ್ತಿ ಮತ್ತು ಜೀವನದಲ್ಲಿ ಕಪ್ಪು ಚುಕ್ಕೆಗಳು ಎದುರಾಗದಂತೆ ಸೇವೆ ಮಾಡಬೇಕು ಎಂದರು. ಪ್ರಾಥಮಿಕ, ಪ್ರೌಢಶಾಲೆ ಮತ್ತು ಶಿಕ್ಷಣ ಇಲಾಖೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಮತ್ತು ಮರಣ ಹೊಂದಿದ ನೌಕರರ ಕುಟುಂಬಗಳಿಗೆ ಸನ್ಮಾನಿಸಲಾಯಿತು.
ಉಪನ್ಯಾಸಕಿ ಜಯಶೀಲ ಪ್ರಧಾನ ಭಾಷಣ ಮಾಡಿದರು. ಸಮಾರಂಭದಲ್ಲಿ ಉಪ ತಹಸೀಲ್ದಾರ್ ಪೂರ್ಣಿಮ, ರಾಧಮ್ಮ ಜನಸ್ಪಂದನ ವೇದಿಕೆ ಅಧ್ಯಕ್ಷ ಹೇಮಂತ ಕುಮಾರ್, ಪ. ಪಂ. ಮುಖ್ಯಾಧಿಕಾರಿ ಸ್ಟೀಫನ್ ಪ್ರಕಾಶ್, ಜೆಡಿಎಸ್ ತಾ. ಅಧ್ಯಕ್ಷ ಕೆ. ಎಸ್. ಮಂಜೇಗೌಡ, ಬಿಜೆಪಿ ಅಧ್ಯಕ್ಷೆ ಉಮಾ ರವಿಪ್ರಕಾಶ್, ಕಾಂಗ್ರೆಸ್ ಅಧ್ಯಕ್ಷ ಎಸ್. ಎಸ್. ಶಿವಮೂರ್ತಿ, ಕಸಾಪ ಅಧ್ಯಕ್ಷ ಗೋಪಾಲಕೃಷ್ಣ, ಪ್ರಾ. ಶಾ. ಶ. ಸಂಘದ ಅಧ್ಯಕ್ಷ ಅಮೃತೇಶ್, ತಾ. ನೌಕರರ ಸಂಘದ ಅಧ್ಯಕ್ಷ ನಯನ, ಪ್ರೌಢಶಾಲೆ ಶಿಕ್ಷಕರ ಸಂಘದ ಅಧ್ಯಕ್ಷ ಕೆ. ಎನ್. ಬಸವರಾಜು, ಸಹ ಕಾರ್ಯದರ್ಶಿ ವರದರಾಜು, ಡಿ. ವಾಸುದೇವ್, ಭೂಪಾಲಯ್ಯ, ಎಚ್. ಡಿ. ಸೋಮೇಶ್, ರಾಮಚಂದ್ರ, ರಂಗೇಗೌಡ, ಪರಮೇಶ್ ಉಪಸ್ಥಿತರಿದ್ದರು.ಫೋಟೋ ಶೀರ್ಷಿಕೆ: ಪಟ್ಟಣದ ವೀರಶೈವ ಕಲ್ಯಾಣ ಮಂಟಪದಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಶಾಸಕ ಸಿಮೆಂಟ್ ಮಂಜು ಉದ್ಘಾಟಿಸಿದರು. ಪ. ಪಂ. ಅಧ್ಯಕ್ಷೆ ತಾಹಿರಾಬೇಗಂ, ಬಿಇಒ ಎ. ಜೆ. ಕೃಷ್ಣೇಗೌಡ ಇತರರು ಹಾಜರಿದ್ದರು.