ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ ಹಾಗೂ ಹೆಬ್ರಿ ತಾಲೂಕು ಘಟಕದ ಜಂಟಿ ಆಶ್ರಯದಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ‘ಗುರು ಗೌರವಾರ್ಪಣೆ–2026’ ಕಾರ್ಯಕ್ರಮ ಶನಿವಾರ ಹೆಬ್ರಿಯ

ಕಾರ್ಕಳ: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ ಹಾಗೂ ಹೆಬ್ರಿ ತಾಲೂಕು ಘಟಕದ ಜಂಟಿ ಆಶ್ರಯದಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ‘ಗುರು ಗೌರವಾರ್ಪಣೆ–2026’ ಕಾರ್ಯಕ್ರಮ ಶನಿವಾರ ಹೆಬ್ರಿಯ ಅನಂತ ನಗರದಲ್ಲಿ ನಡೆಯಿತು.

ಸಮಾಜಕ್ಕೆ ಶೈಕ್ಷಣಿಕ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಅನುಪಮ ಸೇವೆ ಸಲ್ಲಿಸಿದ ಉಡುಪಿ ಜಿಲ್ಲೆಯ ನಿವೃತ್ತ ದೈಹಿಕ ಶಿಕ್ಷಣಾಧಿಕಾರಿ ಸೀತಾನದಿ ವಿಠಲ ಶೆಟ್ಟಿ ಹಾಗೂ ಹೆಬ್ರಿಯ ನಿವೃತ್ತ ಶಿಕ್ಷಕಿ ಶ್ಯಾಮಲಾ ವಿ. ಶೆಟ್ಟಿ ದಂಪತಿಯನ್ನು ಸನ್ಮಾನಿಸಿ ಗೌರವಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹೆಬ್ರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಶ್ರೀನಿವಾಸ ಭಂಡಾರಿ ವಹಿಸಿದ್ದರು. ಉಡುಪಿ ಜಿಲ್ಲಾ ಕಸಾಪ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಆಶಯ ನುಡಿಗಳನ್ನಾಡಿ, ಶೈಕ್ಷಣಿಕ ಕ್ಷೇತ್ರಕ್ಕೆ ಸೇವೆ ಸಲ್ಲಿಸಿದ ಮಹನೀಯರನ್ನು ಗೌರವಿಸುವ ಇಂತಹ ಕಾರ್ಯಕ್ರಮಗಳು ಮಾದರಿಯಾಗಿವೆ ಎಂದರು.ಸನ್ಮಾನ ಸ್ವೀಕರಿಸಿ ಮಾತನಾಡಿದ ಸೀತಾನದಿ ವಿಠಲ ಶೆಟ್ಟಿ, ಕಸಾಪ ಹಾಗೂ ಸಮಾಜ ನೀಡಿದ ಗೌರವಕ್ಕೆ ಕೃತಜ್ಞತೆ ಸಲ್ಲಿಸಿ, ತಮ್ಮ ಶೈಕ್ಷಣಿಕ ಮತ್ತು ವೃತ್ತಿ ಜೀವನದ ನೆನಪುಗಳನ್ನು ಹಂಚಿಕೊಂಡರು.ನಿವೃತ್ತ ಅಧ್ಯಾಪಕ ಶಿವರಾಮ ಶೆಟ್ಟಿ ಹಾಗೂ ಉದ್ಯಮಿ ಹರ್ಷ ಶೆಟ್ಟಿ ಸನ್ಮಾನಿತ ದಂಪತಿಯ ಸೇವಾ ನಿಷ್ಠೆ ಮತ್ತು ವ್ಯಕ್ತಿತ್ವವನ್ನು ಸ್ಮರಿಸಿ ಅಭಿನಂದಿಸಿದರು.ಉದ್ಯಮಿ ಯೋಗೀಶ ಭಟ್, ಕಸಾಪ ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ, ಕೋಶಾಧ್ಯಕ್ಷ ಪಿ. ಮನೋಹರ್, ನರಸಿಂಹಮೂರ್ತಿ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.ಶೈಲಜಾ ಶಿವಪುರ ಅವರ ಪ್ರಾರ್ಥನೆಯೊಂದಿಗೆ ಆರಂಭಗೊಂಡ ಕಾರ್ಯಕ್ರಮದಲ್ಲಿ ಬಾಲಚಂದ್ರ ಹೆಬ್ಬಾರ್ ಸ್ವಾಗತಿಸಿದರು. ಮಹೇಶ ಹೈಕಾಡಿ ಸನ್ಮಾನ ಪತ್ರ ವಾಚಿಸಿದರು. ಮಂಜುನಾಥ ಕೆ. ಶಿವಪುರ ನಿರೂಪಿಸಿದರು. ಪ್ರೀತೇಶ ಕುಮಾರ್ ವಂದಿಸಿದರು. ಹೆಬ್ರಿಯ ಪ್ರಮುಖರು, ವಿವಿಧ ಸಂಘಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಅಭಿಮಾನಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.