ಖಾಸಗಿ ಶಾಲೆಗಳಲ್ಲಿ ಕಡಿಮೆ ವೇತನಕ್ಕೆ ಹೆಚ್ಚು ಮಕ್ಕಳು ಇದ್ದರೆ, ಸರ್ಕಾರಿ ಶಾಲೆಗಳಲ್ಲಿ ಹೆಚ್ಚು ವೇತನ ಇದ್ದರೂ ಮಕ್ಕಳ ಸಂಖ್ಯೆ ಕಡಿಮೆಯಾಗಿದೆ. ಇಂಗ್ಲಿಷ್ ವ್ಯಾಮೋಹ ಇದ್ದರೂ, ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ದೊರೆತರೆ ಪೋಷಕರು ಮಕ್ಕಳನ್ನು ಸರ್ಕಾರಿ ಶಾಲೆಗಳಿಗೇ ಕಳುಹಿಸುತ್ತಾರೆ ಎಂದರು. ವಿಕಲಚೇತನ ಶಿಕ್ಷಕಿಯೊಬ್ಬರು ಕಡಿಮೆ ಮಕ್ಕಳಿದ್ದ ಶಾಲೆಯನ್ನು ಉತ್ತಮವಾಗಿ ಅಭಿವೃದ್ಧಿಪಡಿಸಿರುವ ಉದಾಹರಣೆ ನೀಡಿದ ಅವರು, ಇಂತಹ ಸಾಧನೆಗಳನ್ನು ಎಲ್ಲಾ ಶಿಕ್ಷಕರಿಂದ ನಾವು ನಿರೀಕ್ಷಿಸುತ್ತೇವೆ ಎಂದು ಹೇಳಿದರು.

ಕನ್ನಡಪ್ರಭ ವಾರ್ತೆ ಅರಸೀಕೆರೆ

ವರ್ಷದಿಂದ ವರ್ಷಕ್ಕೆ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಕುಸಿಯುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದ್ದು, ಶಿಕ್ಷಕರು ಕರ್ತವ್ಯನಿಷ್ಠೆಯಿಂದ ಕೆಲಸ ಮಾಡಿದರೆ ಮಾತ್ರ ಸರ್ಕಾರಿ ಶಾಲೆಗಳು ಉಳಿಯಲು ಸಾಧ್ಯ ಎಂದು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಹಾಗೂ ತಾಲೂಕು ಶಿಕ್ಷಣ ಸಮಿತಿ ಸದಸ್ಯ ಸ್ವಾಮಿ ಅಭಿಪ್ರಾಯಪಟ್ಟರು.ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ವರ್ಗಾವಣೆಗೊಂಡಿರುವ ಶಿಕ್ಷಣ ಸಂಯೋಜಕ ಚಿದಾನಂದ್ ಹಾಗೂ ಕಚೇರಿ ಸಿಬ್ಬಂದಿ ಬೈರೇಶ್ ಅವರಿಗೆ ಏರ್ಪಡಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದ ಅವರು, ಸರ್ಕಾರ ಶಿಕ್ಷಣಕ್ಕಾಗಿ ಅಪಾರ ಹಣವನ್ನು ವೆಚ್ಚ ಮಾಡುತ್ತಿದ್ದು, ಗ್ರಾಮೀಣ ಪ್ರದೇಶದ ರೈತಾಪಿ ವರ್ಗ ಆರ್ಥಿಕ ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದು ಹೇಳಿದರು.

ಖಾಸಗಿ ಶಾಲೆಗಳಲ್ಲಿ ಕಡಿಮೆ ವೇತನಕ್ಕೆ ಹೆಚ್ಚು ಮಕ್ಕಳು ಇದ್ದರೆ, ಸರ್ಕಾರಿ ಶಾಲೆಗಳಲ್ಲಿ ಹೆಚ್ಚು ವೇತನ ಇದ್ದರೂ ಮಕ್ಕಳ ಸಂಖ್ಯೆ ಕಡಿಮೆಯಾಗಿದೆ. ಇಂಗ್ಲಿಷ್ ವ್ಯಾಮೋಹ ಇದ್ದರೂ, ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ದೊರೆತರೆ ಪೋಷಕರು ಮಕ್ಕಳನ್ನು ಸರ್ಕಾರಿ ಶಾಲೆಗಳಿಗೇ ಕಳುಹಿಸುತ್ತಾರೆ ಎಂದರು. ವಿಕಲಚೇತನ ಶಿಕ್ಷಕಿಯೊಬ್ಬರು ಕಡಿಮೆ ಮಕ್ಕಳಿದ್ದ ಶಾಲೆಯನ್ನು ಉತ್ತಮವಾಗಿ ಅಭಿವೃದ್ಧಿಪಡಿಸಿರುವ ಉದಾಹರಣೆ ನೀಡಿದ ಅವರು, ಇಂತಹ ಸಾಧನೆಗಳನ್ನು ಎಲ್ಲಾ ಶಿಕ್ಷಕರಿಂದ ನಾವು ನಿರೀಕ್ಷಿಸುತ್ತೇವೆ ಎಂದು ಹೇಳಿದರು.ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ್ ಕುಮಾರ್‌ ಮಾತನಾಡಿ, ಚಿದಾನಂದ್ ಮತ್ತು ಬೈರೇಶ್ ಅವರು ಪರೀಕ್ಷೆ ಹಾಗೂ ಚುನಾವಣೆ ಸಂದರ್ಭಗಳಲ್ಲಿ ಹೆಚ್ಚಿನ ಒತ್ತಡದ ನಡುವೆಯೂ ಶ್ರಮಪಟ್ಟು ಕಾರ್ಯನಿರ್ವಹಿಸಿದ್ದಾರೆ. ಆ ಸಂದರ್ಭಗಳಲ್ಲಿ ಕೆಲಸದ ಒತ್ತಡದಿಂದ ಕೆಲವೊಮ್ಮೆ ಕಠಿಣವಾಗಿ ವರ್ತಿಸಿದ್ದರೂ, ಅದನ್ನು ಕೆಲಸ ಕಲಿಸುವ ಮನೋಭಾವದಿಂದ ಸ್ವೀಕರಿಸಿದ್ದರಿಂದ ಉತ್ತಮ ಸಾಧನೆ ಸಾಧ್ಯವಾಯಿತು ಎಂದು ಹೇಳಿದರು. ಚಿದಾನಂದ್ ಅವರು ನಗರದ ಪ್ರೌಢಶಾಲೆಗೆ ಹಾಗೂ ಬೈರೇಶ್ ಅವರು ಚನ್ನರಾಯಪಟ್ಟಣಕ್ಕೆ ವರ್ಗಾವಣೆಗೊಂಡಿದ್ದು, ಅಲ್ಲಿ ಸಹ ಯಶಸ್ವಿಯಾಗಿ ಕಾರ್ಯನಿರ್ವಹಿಸುವರೆಂಬ ವಿಶ್ವಾಸ ವ್ಯಕ್ತಪಡಿಸಿದರು.ವರ್ಗಾವಣೆಗೊಂಡ ಸಿಬ್ಬಂದಿಗಳಾದ ಚಿದಾನಂದ್ ಮತ್ತು ಬೈರೇಶ್ ಅವರು ತಮ್ಮ ಸೇವಾ ಅವಧಿಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಕಚೇರಿ ಸಿಬ್ಬಂದಿಯಿಂದ ಉತ್ತಮ ಸಹಕಾರ ದೊರೆತಿದೆ ಎಂದು ಕೃತಜ್ಞತೆ ಸಲ್ಲಿಸಿದರು.ಕಾರ್ಯಕ್ರಮದಲ್ಲಿ ಕ್ಷೇತ್ರ ಸಮನ್ವಯಾಧಿಕಾರಿ ಶಂಕರ್, ಸಂಯೋಜಕರಾದ ಮಲ್ಲೇಶ್, ಸಚಿನ್ ಸೇರಿದಂತೆ ಕಚೇರಿ ಸಿಬ್ಬಂದಿ ಹಾಗೂ ಇತರರು ಉಪಸ್ಥಿತರಿದ್ದರು.