ಶಿಕ್ಷಕರು ಸಮಾಜದ ನಿರ್ಮಾಪಕರು ಉತ್ತಮ ಸಮಾಜ ನಿರ್ಮಾಣ ಮಾಡುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ

ಕೊಪ್ಪಳ: ಶಿಕ್ಷಕರ ನ್ಯಾಯ ಸಮ್ಮತ ಬೇಕು ಬೇಡಿಕೆ ಈಡೇರಿಕೆಗೆ ಎಲ್ಲ ಶಿಕ್ಷಕರು ಸಂಘಟಿತರಾಗಿ ಹೋರಾಡಲು ಮತ್ತು ಅವರ ಬೇಕು ಬೇಡಿಕೆ ಸಂಘ ಈಡೇರಿಸಲಿ ಎಂದು ಕೊಪ್ಪಳ ನಗರಸಭೆ ಮಾಜಿ ಅಧ್ಯಕ್ಷ ಅಮ್ಜದ್ ಪಟೇಲ್ ಹೇಳಿದರು.

ಅವರು ನಗರದ ಸರ್ಕಾರಿ ನೌಕರರ ಸಾಂಸ್ಕೃತಿಕ ಭವನದ ಸಭಾಂಗಣದಲ್ಲಿ ಏರ್ಪಡಿಸಿದ ಕರ್ನಾಟಕ ರಾಜ್ಯ ಪ್ರೌಢ ಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾ ಕಾರ್ಯಕಾರಿ ಸಮಿತಿಯ ಸಭೆ ಹಾಗೂ ಸಂಘಕ್ಕೆ ನಾಮಕರಣಗೊಂಡ ಪದಾಧಿಕಾರಿಗಳಿಗೆ ಸನ್ಮಾನ ಮತ್ತು ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

ಶಿಕ್ಷಕರು ಸಮಾಜದ ನಿರ್ಮಾಪಕರು ಉತ್ತಮ ಸಮಾಜ ನಿರ್ಮಾಣ ಮಾಡುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ, ಆದರೆ ಅವರಿಗೆ ಏನಾದರೂ ಸಮಸ್ಯೆ ಎದುರು ಬಂದಾಗ ಅದಕ್ಕೆ ನೇರ ವಂದನೆ ನೀಡಿ ಸಮಸ್ಯೆ ಇತ್ಯರ್ಥಕ್ಕಾಗಿ ಸಂಘಟನೆ ರಚನೆ ಮಾಡಿಕೊಳ್ಳುವುದು ಅನಿವಾರ್ಯ ಅದರ ಜತೆಗೆ ಆರ್ಥಿಕ ಸಮಸ್ಯೆಗಳು ಎದುರಾದಾಗ ನಮ್ಮದೇ ಆದ ಪತ್ತಿನ ಸಹಕಾರಿ ಸಂಘದಿಂದ ಅದನ್ನು ಕೂಡ ಸರಿಪಡಿಸಿಕೊಳ್ಳಬಹುದು ಅದಕ್ಕೆ ಸಂಘಟನೆ ಬಹಳ ಮುಖ್ಯ ಈ ದಿಶೆಯಲ್ಲಿ ಇಲ್ಲಿನ ಪ್ರೌಢಶಾಲಾ ಸಹ ಶಿಕ್ಷಕರ ಪತ್ತಿನ ಸಹಕಾರಿ ಸಂಘ ಉತ್ತಮ ಹೆಜ್ಜೆ ಇಟ್ಟು ಶ್ರಮಿಸುತ್ತ ಬಂದಿದೆ. ಒಳ್ಳೆಯ ಸಾಮಾಜಿಕ ಕಾರ್ಯ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಸಂಘಟನೆ ಮೂಲಕ ಉತ್ತಮ ಕೆಲಸ ಮಾಡುತ್ತಾ ಬಂದಿದೆ ಇದು ಒಳ್ಳೆಯ ಬೆಳವಣಿಗೆ ಕೂಡ ಹೌದು ಇಂತಹ ಸಂಘಟನೆಗಳಿಗೆ ಪ್ರತಿಯೊಬ್ಬರ ಸಹಕಾರ ಇದ್ದೇ ಇರುತ್ತದೆ ಎಂದು ಹೇಳಿದರು.

ಸಭೆಯ ಅಧ್ಯಕ್ಷತೆಯನ್ನು ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ರಾಜ್ಯ ಉಪಾಧ್ಯಕ್ಷ ಜಾಕೀರ್ ಹುಸೇನ್ ಕುಕುನೂರ್ ವಹಿಸಿದ್ದರು. ಉಪ ನಿರ್ದೇಶಕ ಎಲ್.ಡಿ. ಜೋಷಿ ಸಂಘದ ನೂತನ ಕ್ಯಾಲೆಂಡರ್ ಬಿಡುಗಡೆಗೊಳಿಸಿದರು, ಜ್ಞಾನ ಬಂದು ಶಾಲೆಯ ಶರತ್ ಕುಮಾರ್ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ಮಾರ್ತಂಡ ರಾವ್ ದೇಸಾಯಿ ಶಿಕ್ಷಕ ಈರಣ್ಣ ಕುಂಬಾರ್ ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕಿನ ಸಂಘದ ಅಧ್ಯಕ್ಷರು ಕಾರ್ಯದರ್ಶಿಗಳು ಇತರ ಪದಾಧಿಕಾರಿಗಳು ಸದಸ್ಯ ಶಿಕ್ಷಕರು ಸಭೆಯಲ್ಲಿ ಪಾಲ್ಗೊಂಡಿದ್ದರು.