ಶಾಸಕ ಎನ್.ಶ್ರೀನಿವಾಸ್ ಮಾತನಾಡಿ, ಜ್ಞಾನಕ್ಕೆ ಮಿಗಿಲಾದ ಸಿರಿವಂತಿಕೆ ಯಾವುದೂ ಇಲ್ಲ. ಶಿಕ್ಷಕ ವೃತ್ತಿಯನ್ನು ಅಲಂಕರಿಸಿರುವ ಶಿಕ್ಷಕ ಸಮುದಾಯ ಕೋಟ್ಯಾಂತರ ಸಂಖ್ಯೆಯ ವಿದ್ಯಾರ್ಥಿಗಳನ್ನು ಜ್ಞಾನಿಗಳಾಗಿ ಮಾಡುತ್ತಿದೆ. ದೇಶದ ಭವಿಷ್ಯವನ್ನು ರೂಪಿಸುತ್ತಿದ್ದಾರೆ. ಪೋಷಕರು ಜೀವ ಕೊಟ್ಟರೆ ವಿದ್ಯಾರ್ಥಿಗಳಿಗೆ ಜೀವನವನ್ನು ಶಿಕ್ಷಕರು ಕೊಡುತ್ತಾರೆ. ಶಿಕ್ಷಕರಿಲ್ಲದೇ ಈ ಸಮಾಜವನ್ನು ಊಹಿಸಿಕೊಳ್ಳಲು ಸಾಧ್ಯವಾಗಲ್ಲ ಎಂದು ಹೇಳಿದರು.
ಕನ್ನಡಪ್ರಭ ವಾರ್ತೆ ನೆಲಮಂಗಲ
ಭಾರತೀಯ ಸಂಸ್ಕೃತಿಯಲ್ಲಿ ಶಿಕ್ಷಕರಿಗೆ ಅತ್ಯಂತ ಪೂಜ್ಯನೀಯ ಸ್ಥಾನವಿದ್ದು, ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಕರ ಕೊಡುಗೆ ಅಪಾರ ಎಂದುತುಮಕೂರು ಸಿದ್ಧಗಂಗಾ ಮಠದ ಶ್ರೀ ಸಿದ್ಧಲಿಂಗ ಮಹಾಸ್ವಾಮೀಜಿ ತಿಳಿಸಿದರು.
ನಗರದ ಪವಾಡ ಶ್ರೀ ಬಸವಣ್ಣ ದೇವರ ಮಠದಲ್ಲಿ ಗುರುವಾರ ಆಯೋಜಿಸಿದ್ದ ಲಿಂಗೈಕ್ಯ ಸದಾಶಿವ ಸ್ವಾಮೀಜಿಗಳ 24ನೇ ಸಂಸ್ಮರಣೋತ್ಸವ ಪ್ರಯುಕ್ತ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಹಾಗೂ ಸದಾಶಿವ ಗುರುಶ್ರೀ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು.ಕರ್ನಾಟಕದಲ್ಲಿ ಮಾತ್ರ ಮಠಮಾನ್ಯ, ಗುರು ಪರಂಪರೆಯನ್ನು ಕಾಣಬಹುದಾಗಿದೆ. ಅನಾದಿಕಾಲದಲ್ಲೇ ಇದ್ದ ಸಹಸ್ರ ಸಂಖ್ಯೆಯ ಮಠಗಳು ಬಸವಾದಿ ಪ್ರಥಮರ ತತ್ವಾದರ್ಶಗಳನ್ನು ಜನಸಾಮಾನ್ಯರಲ್ಲಿ ತಿಳಿಸಿದ ಪರಿಶ್ರಮದ ಫಲವಾಗಿ ಸಾಕ್ಷರತೆ, ಸಂಸ್ಕಾರಯುತ ನಿರ್ಮಾಣವಾಗಿದೆ. ನಿತ್ಯ ಇಷ್ಟ ಲಿಂಗ ಪೂಜೆಯಲ್ಲಿ ನಿಷ್ಠರಾಗಿದ್ದ ಸದಾಶಿವ ಸ್ವಾಮೀಜಿ ಸಂಸ್ಕೃತ ಪಾಠಶಾಲೆ ಆರಂಭ ಮಾಡಿದವರು, ಸುತ್ತಮುತ್ತಲ ಗ್ರಾಮದ ಭಕ್ತರಿಗೆ ಗುರುಲಿಂಗ ಜಂಗಮದ ಮಹತ್ವವನ್ನು ತಿಳಿಸಿಕೊಟ್ಟವರು. ಶ್ರೀ ಸದಾಶಿವ ಸ್ವಾಮೀಜಿಗಳು ಲಿಂಗೈಕ್ಯರಾಗಿದ್ದರೂ ಅವರ ಚಿಂತನೆಗಳನ್ನು ಸಾಕಾರಗೊಳಿಸುವ ಕೆಲಸವನ್ನು ಈಗಿನ ಶ್ರೀ ಸಿದ್ದಲಿಂಗ ಸ್ವಾಮೀಜಿ ಮಾಡುತ್ತಿದ್ದಾರೆ ಎಂದರು.
ಶಾಸಕ ಎನ್.ಶ್ರೀನಿವಾಸ್ ಮಾತನಾಡಿ, ಜ್ಞಾನಕ್ಕೆ ಮಿಗಿಲಾದ ಸಿರಿವಂತಿಕೆ ಯಾವುದೂ ಇಲ್ಲ. ಶಿಕ್ಷಕ ವೃತ್ತಿಯನ್ನು ಅಲಂಕರಿಸಿರುವ ಶಿಕ್ಷಕ ಸಮುದಾಯ ಕೋಟ್ಯಾಂತರ ಸಂಖ್ಯೆಯ ವಿದ್ಯಾರ್ಥಿಗಳನ್ನು ಜ್ಞಾನಿಗಳಾಗಿ ಮಾಡುತ್ತಿದೆ. ದೇಶದ ಭವಿಷ್ಯವನ್ನು ರೂಪಿಸುತ್ತಿದ್ದಾರೆ. ಪೋಷಕರು ಜೀವ ಕೊಟ್ಟರೆ ವಿದ್ಯಾರ್ಥಿಗಳಿಗೆ ಜೀವನವನ್ನು ಶಿಕ್ಷಕರು ಕೊಡುತ್ತಾರೆ. ಶಿಕ್ಷಕರಿಲ್ಲದೇ ಈ ಸಮಾಜವನ್ನು ಊಹಿಸಿಕೊಳ್ಳಲು ಸಾಧ್ಯವಾಗಲ್ಲ ಎಂದು ಹೇಳಿದರು.ಸದಾಶಿವಗುರು ಶ್ರೀ ಪ್ರಶಸ್ತಿ:
ಶಿಕ್ಷಕರ ದಿನದ ಅಂಗವಾಗಿ ಸುಮಾರು 40ಕ್ಕೂ ಹೆಚ್ಚು ಮಂದಿ ಶಿಕ್ಷಕರಿಗೆ ಸದಾಶಿವ ಗುರು ಶ್ರೀ ಪ್ರಶಸ್ತಿ ನೀಡಿ ಅಭಿನಂದಿಸಲಾಯಿತು.ಪವಾಡ ಶ್ರೀ ಬಸವಣ್ಣ ದೇವರ ಮಠದ ಶ್ರೀ ಸಿದ್ಧಲಿಂಗಸ್ವಾಮೀಜಿ, ಗದ್ದುಗೆ ಮಠದ ಶ್ರೀ ಮಹಾಂತ ಸ್ವಾಮೀಜಿ, ಬೆಟ್ಟಹಳ್ಳಿ ಮಠದ ಶ್ರೀಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ವನಕಲ್ಲು ಮಠದ ಶ್ರೀ ಬಸವರಮಾನಂದ ಸ್ವಾಮೀಜಿ, ಫ.ಗು.ಹಳಕಟ್ಟಿ ಸಂಶೋಧನ ಕೇಂದ್ರದ ಕಾರ್ಯದರ್ಶಿ ಡಾ.ಮಹಾಂತೇಶ್ ಬಿರಾದಾರ್, ನಿವೃತ್ತ ಕುಲಪತಿ ಪ್ರೊ.ಮಲ್ಲೇಶ್ವರಂ.ಜಿ.ವೆಂಕಟೇಶ್, ಸಂಸ್ಕೃತ ಶಿಕ್ಷಣ ನಿರ್ದೇಶನಾಲಯದ ನಿರ್ದೇಶಕ ಸಿ.ಪಾಲಯ್ಯ, ಮರಾಠ ಅಭಿವೃದ್ಧಿ ನಿಗಮ ವ್ಯವಸ್ಥಾಪಕ ನಿರ್ದೇಶಕ ಡಾ.ಪ್ರಕಾಶ್.ಆರ್.ಪಾಗೋಜಿ, ಹಿರಿಯ ನ್ಯಾಯವಾದಿ ಲಕ್ಷ್ಮೀನಾರಾಯಣಪ್ಪ, ನಗರಸಭೆ ಅಧ್ಯಕ್ಷ ಗಣೇಶ್, ಮೂಡ್, ಸಿ.ಪ್ರದೀಪ್, ನೆ.ಯೋ.ಪ್ರಾಧಿಕಾರ ಅಧ್ಯಕ್ಷ ನಾಗರಾಜು, ಕನ್ನಡ ವಿಚಾರ ವೇದಿಕೆ ಅಧ್ಯಕ್ಷ ಪಾಲನೇತ್ರ, ವೀರಶೈವ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಬಿ.ಪರಮೇಶ್, ವೀರಶೈವ ಲಿಂಗಾಯತ ನಿವೃತ್ತ ನೌಕರರ ಸಂಘದ ಅಧ್ಯಕ್ಷ ನಾಗರಾಜು, ವೀರಶೈವ ಮಹಾಸಭಾ ಜಿಲ್ಲಾಧ್ಯಕ್ಷ ರೇವಣ್ಣಸಿದ್ದಯ್ಯ, ತಾಲೂಕು ಅಧ್ಯಕ್ಷ ರಾಜಶೇಖರ್ ಮತ್ತಿತರರು ಉಪಸ್ಥಿತರಿದ್ದರು.