ಕನ್ನಡಪ್ರಭವಾರ್ತೆ ನಾಪೋಕ್ಲು

ಇಲ್ಲಿಗೆ ಸಮೀಪದ ಮೂರ್ನಾಡು ಅನುದಾನಿತ ಪ್ರೌಢಶಾಲೆಯ ಹಳೆ ವಿದ್ಯಾರ್ಥಿಗಳಿಂದ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಯಿತು. ಮೂರ್ನಾಡು ಅನುದಾನಿತ ಪ್ರೌಢಶಾಲೆಯ 1999-2002 ಸಾಲಿನಲ್ಲಿ ವ್ಯಾಸಂಗ ಮಾಡಿದ ಹಳೆಯ ವಿದ್ಯಾರ್ಥಿಗಳು ತಮಗೆ ಅಧ್ಯಾಪಕರಾಗಿದ್ದ ಎಸ್. ಡಿ. ಪ್ರಶಾಂತ್, ಕೃಷ್ಣಪ್ಪ, ಗೀತಾ ಹಾಗೂ ಸುಜಾತ ಅವರಿಗೆ ಸನ್ಮಾನ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ತಮ್ಮ ಶಾಲಾ ದಿನದ ಘಟನೆಗಳನ್ನು ಮೆಲುಕು ಹಾಕುತ್ತಾ ಭಾವುಕರಾದ ಹಳೆಯ ವಿದ್ಯಾರ್ಥಿಗಳು, ಗುರುಗಳ ಸ್ಫೂರ್ತಿದಾಯಕ ಮಾತುಗಳಿಗೆ ಕಿವಿಯಾದರು. ಶಾಲಾ ಮಕ್ಕಳಿಗೆ ಸಿಹಿವಿತರಿಸಿ ಸಂಭ್ರಮಿಸಿ ಗುರುಗಳ‌ ಆಶೀರ್ವಾದ ಪಡೆದು ಧನ್ಯರಾದರು. ಈ ಸಂದರ್ಭ ಶಿಕ್ಷಕ ವರ್ಗ, ಸಿಬ್ಬಂದಿ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.