ವಿದ್ಯಾರ್ಥಿಗಳ ಭವಿಷ್ಯ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಅನನ್ಯ: ಶೋಭಾ ಕೆ. ಎಸ್.

| Published : Sep 17 2025, 01:08 AM IST

ಸಾರಾಂಶ

ವಿದ್ಯಾರ್ಥಿಗಳ ಭವಿಷ್ಯ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು ಎಂದು ಶಿಕ್ಷಕಿ ಶೋಭಾ ಕೆ.ಎಸ್‌. ಹೇಳಿದರು.

ಕನ್ನಡಪ್ರಭ ವಾರ್ತೆ ನಾಪೋಕ್ಲು

ವಿದ್ಯಾರ್ಥಿಗಳ ಭವಿಷ್ಯ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು ಎಂದು ಶಿಕ್ಷಕಿ ಶೋಭಾ ಕೆ. ಎಸ್ ಹೇಳಿದರು.

ಇಲ್ಲಿನ ಶ್ರೀ ರಾಮ ಟ್ರಸ್ಟ್ ವಿದ್ಯಾಸಂಸ್ಥೆ ವತಿಯಿಂದ ಶಾಲಾ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು.

ನಿವೃತ್ತ ಪ್ರಾಂಶುಪಾಲ ಹಾಗೂ ಸಂಸ್ಥೆಯ ಹಿರಿಯ ನಿರ್ದೇಶಕ ಪ್ರೊ ಕಲ್ಯಾಟಂಡ ಪೂಣಚ್ಚ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಡಾ ರಾಧಾಕೃಷ್ಣನ್ ಆಳವಾದ ಜ್ಞಾನವನ್ನು ಹೊಂದಿದ್ದರು. ದೇಶದ ರಾಷ್ಟ್ರಪತಿಗಳಾಗಿ ರಾಯಭಾರಿಯಾಗಿ ಸೇವೆ ಸಲ್ಲಿಸಿದ್ದರು ಎಂಬುದನ್ನು ಸ್ಮರಿಸಿದರು. ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿ ವತಿಯಿಂದ ಶಿಕ್ಷಕ ವೃಂದದವರಿಗೆ ನೆನಪಿನ ಕಾಣಿಕೆಯನ್ನು ನೀಡಲಾಯಿತು.

ವೇದಿಕೆಯಲ್ಲಿ ಪ್ರಾಂಶುಪಾಲರಾದ ಶಾರದಾ ಬಿ.ಎಂ. ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ಸಿಂಚನ ಪೂವಯ್ಯ ಮತ್ತು ಗಾನವಿ ಬಿ.ಎಂ.ಪ್ರಾರ್ಥಿಸಿದ ಕಾರ್ಯಕ್ರಮವನ್ನು ಮುತ್ತಮ್ಮ ಎನ್ ಎಂ, ಮತ್ತು ಲೀಷ್ಮ ಎಂ.ಬಿ ನಿರೂಪಿಸಿದರು. ಆಯಿಲ್ ಜೋಸೆಫ್ ಎಂ.ಪಿ. ವಂದಿಸಿದರು.