ದೇಶದ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ತರ: ಶಾಸಕ ರಾಜೇಗೌಡ

| Published : Sep 06 2025, 01:00 AM IST

ದೇಶದ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ತರ: ಶಾಸಕ ರಾಜೇಗೌಡ
Share this Article
  • FB
  • TW
  • Linkdin
  • Email

ಸಾರಾಂಶ

ಶೃಂಗೇರಿ, ಮಕ್ಕಳ ಭವಿಷ್ಯ ರೂಪಿಸುವ ಶಿಕ್ಷಕರು ದೇಶದ ಭವಿಷ್ಯ ರೂಪಿಸುವಲ್ಲಿ ಮಹತ್ತರ ವಹಿಸುತ್ತಾರೆ ಎಂದ ಶಾಸಕ ಟಿ.ಡಿ.ರಾಜೇಗೌಡ ಹೇಳಿದರು.

- ಡಾ.ಸರ್ವಪಲ್ಲಿ ರಾದಾಕೃಷ್ಣನ್ ರವರ 138 ನೇ ಜನ್ಮ ದಿನೋತ್ಸವ, ಶಿಕ್ಷಕರ ದಿನಾಚರಣೆ ಉದ್ಘಾಟನೆ

ಕನ್ನಡಪ್ರಭ ವಾರ್ತೆ ಶೃಂಗೇರಿ

ಮಕ್ಕಳ ಭವಿಷ್ಯ ರೂಪಿಸುವ ಶಿಕ್ಷಕರು ದೇಶದ ಭವಿಷ್ಯ ರೂಪಿಸುವಲ್ಲಿ ಮಹತ್ತರ ವಹಿಸುತ್ತಾರೆ ಎಂದ ಶಾಸಕ ಟಿ.ಡಿ.ರಾಜೇಗೌಡ ಹೇಳಿದರು.

ಪಟ್ಟಣದ ಈಡಿಗರ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಡಾ.ಸರ್ವಪಲ್ಲಿ ರಾದಾಕೃಷ್ಣನ್ ರವರ 138 ನೇ ಜನ್ಮ ದಿನೋತ್ಸವ ಹಾಗೂ ಶಿಕ್ಷಕರ ದಿನಾಚರಣೆ ಉದ್ಘಾಟಿಸಿ ಮಾತನಾಡಿ ದೇಶದ ಭವಿಷ್ಯ ಮಕ್ಕಳ ಕೈಯಲ್ಲಿದ್ದರೆ,ಮಕ್ಕಳ ಭವಿಷ್ಯ ಶಿಕ್ಷಕರ ಕೈಯಲ್ಲಿದೆ. ಮಕ್ಕಳು ದೇಶದ ಭವಿಷ್ಯದ ರೂವಾರಿಗಳು ಎಂದರು.

ಡಾ.ರಾದಾಕೃಷ್ಣನ್ ಮಹಾನ್ ಚಿಂತಕ, ಶಿಕ್ಷಣ ತಜ್ಞ, ತತ್ವಜ್ಞಾನಿಯಾಗಿದ್ದು ಭಾರತದ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದ್ದರು. ಶಿಕ್ಷಣ ಕ್ಷೇತ್ರಕ್ಕೆ ಮಹತ್ತರ ಕೊಡುಗೆ ನೀಡಿದ್ದಾರೆ. ಶಿಕ್ಷಕರಾಗಿದ್ದ ಇವರು ತನ್ನ ಜನ್ಮದಿನಾಚರಣೆಯನ್ನು ಶಿಕ್ಷಕರ ದಿನವನ್ನಾಗಿ ಆಚರಿಸಬೇಕೆಂದು ಹೇಳಿದ್ದರಿಂದ ಪ್ರತೀ ವರ್ಷ ಸೆ. 5 ರಂದು ಆಚರಿಸಲಾಗುತ್ತಿದೆ ಎಂದು ಹೇಳಿದರು.

ಮನುಷ್ಯನಿಗೆ ಗುರಿ ಇರಬೇಕು. ಗುರಿಯ ಹಿಂದೆ ಗುರು ಇರಬೇಕು. ಶಿಕ್ಷಕರು ದೀಪ ವಿದ್ದಂತೆ. ಅಜ್ಞಾನವೆಂಬ ಕತ್ತಲೆಯಿಂದ ಸುಜ್ಞಾನವೆಂಬ ಬೆಳಕಿಗೆ ಕೊಂಡೊಯ್ಯುವ ಶಕ್ತಿ ಹೊಂದಿದ್ದಾರೆ. ಉತ್ತಮ ಶಿಕ್ಷಣವೆಂದರೆ ಕೇವಲ ಪಾಠ ಮಾಡುವುದಲ್ಲ. ಮಕ್ಕಳಲ್ಲಿ ಜೀವನ ಮೌಲ್ಯಗಳನ್ನು, ಶಿಸ್ತು, ಉತ್ತಮ ಸಂಸ್ಕಾರಗಳನ್ನು ಬೆಳೆಸಬೇಕು ಎಂದರು.

ಚಾರಿತ್ರ್ಯ ನಿರ್ಮಾಣ ಶಿಕ್ಷಣದ ಮುಖ್ಯ ಗುರಿಯಾಗಬೇಕು. ಶಿಕ್ಷಕ ವೃತ್ತಿ ಎಂದು ಪರಿಗಣಿಸದೇ ಸೇವೆ ಎಂದು ಪರಿಗಣಿಸಬೇಕು. ಗುರು ಎಂದರೆ ಕೇವಲ ವ್ಯಕ್ತಿಯಲ್ಲ. ಒಂದು ಶಕ್ತಿ, ಗುರು ಹಿರಿಯರಿಗೆ ಗೌರವ, ಭಕ್ತಿ ತೋರಬೇಕು. ಮಕ್ಕಳಲ್ಲಿ ದ್ವೇಷ,ಜಾತೀಯ ವಿಷಬೀಜ ಬಿತ್ತಬಾರದು. ನೌತಿಕ, ಮಾನವೀಯ ಮೌಲ್ಯಗಳ ಶಿಕ್ಷಣ ನೀಡಬೇಕು. ಶಿಕ್ಷಣದ ಜೊತೆಗೆ ಭವಿಷ್ಯಕ್ಕೆ ಪೂರಕ ಚಟುವಟಿಕೆಗಳಲ್ಲಿ ತೊಡಗಿಸಬೇಕು ಎಂದು ತಿಳಿಸಿದರು.

ಸರ್ಕಾರಗಳು ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವ ನೀಡುತ್ತಿದೆ. ಶಿಕ್ಷಕರ ಬೇಡಕೆಗಳ ಬಗ್ಗೆ ಸರ್ಕಾರದ ಗಮನಕ್ಕೆ ತರುವ ಪ್ರಯತ್ನ ಮಾಡುತ್ತೇನೆ ಎಂದರು. ಇದೇ ಸಂದರ್ಭದಲ್ಲಿ ನಿವೃತ್ತ ಶಿಕ್ಷಕರು, ಎಸ್ಎಸ್ಎಲ್ ಸಿಯಲ್ಲಿ ಅತಿಹೆಚ್ಚು ಅಂಕಗಳಿಸಿದ ವಿದ್ಯಾರ್ಥಿ ಗಳನ್ನು ಸನ್ಮಾನಿಸಲಾಯಿತು.

ವಿದ್ಯಾರಣ್ಯಪುರ ಗ್ರಾಪಂ ಅಧ್ಯಕ್ಷ ಪ್ರವೀಣಪೂಜಾರಿ, ತಾಪಂ ಇಒ ಸುದೀಪ್, ಸುನಿತಾ, ರಮೇಶ್ ಭಟ್, ಮಮತಾ ಉದಯ್‌, ಬಿಇಒ ವರಲಕ್ಷ್ಮಿ, ಕ್ಷೇತ್ರ ಸಮನ್ವಾಯಾಧಿಕಾರಿ ಬಿ.ಆರ್.ಗಂಗಾಧರಪ್ಪ, ಶಿಕ್ಷಣ ಇಲಾಖೆ ಉಪನಿರ್ದೇಶಕ ತಿಮ್ಮರಾಜು, ಪಪಂ ಅಧ್ಯಕ್ಷ ವೇಣುಗೋಪಾಲ್, ಕೆ.ಎಸ್.ರಮೇಶ್ ಮತ್ತಿತರರು ಉಪಸ್ಥಿತರಿದ್ದರು.

5 ಶ್ರೀ ಚಿತ್ರ 1-

ಶೃಂಗೇರಿಯಲ್ಲಿ ನಡೆದ ಶಿಕ್ಷಕರ ದಿನಾಚಾರಣೆ ಕಾರ್ಯಕ್ರಮವನ್ನು ಶಾಸಕ ಟಿ.ಡಿ.ರಾಜೇಗೌಡ ಉದ್ಘಾಟಿಸಿದರು,