ಸಾರಾಂಶ
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಕರು ತಮ್ಮ ಜವಾಬ್ದಾರಿ ಸಮರ್ಪಕವಾಗಿ ನಿಭಾಯಿಸಿ ವಿದ್ಯಾರ್ಥಿಗಳಿಗೆ ಭವ್ಯ ಭವಿಷ್ಯ ರೂಪಿಸಬೇಕು.
ಶಿಗ್ಗಾಂವಿ: ದೇಶದ ಸಮಗ್ರ ಬದಲಾವಣೆಗೆ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ ಎಂದು ಶಾಸಕ ಯಾಸೀರ ಅಹ್ಮದ ಖಾನ್ ಪಠಾಣ ತಿಳಿಸಿದರು.ಪಟ್ಟಣದ ವಿರಕ್ತಮಠದ ಸಂಗನಬಸವ ಕಲ್ಯಾಣಮಂಟಪದಲ್ಲಿ ಶಾಲಾ ಶಿಕ್ಷಣ, ತಾಪಂ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಶಿಕ್ಷಕರ ದಿನಾಚರಣೆ ಸಮಿತಿ ಆಶ್ರಯದಲ್ಲಿ ಶನಿವಾರ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಹಾಗೂ ನಿವೃತ್ತ ಶಿಕ್ಷಕರ ಸನ್ಮಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಕರು ತಮ್ಮ ಜವಾಬ್ದಾರಿ ಸಮರ್ಪಕವಾಗಿ ನಿಭಾಯಿಸಿ ವಿದ್ಯಾರ್ಥಿಗಳಿಗೆ ಭವ್ಯ ಭವಿಷ್ಯ ರೂಪಿಸಬೇಕು. ಶಿಕ್ಷಣದಲ್ಲಿ ಹೆಚ್ಚಿನ ಕ್ರಾಂತಿಯನ್ನು ಮಾಡಬೇಕು. ಇದಕ್ಕೆ ಸಹಕಾರ ಅವಶ್ಯ. ಪಠ್ಯದ ಶಿಕ್ಷಣದ ಜತೆಗೆ ನೈತಿಕ ಶಿಕ್ಷಣವನ್ನು ನೀಡಬೇಕಾಗಿದೆ ಎಂದರು.ಸಾನ್ನಿಧ್ಯ ವಹಿಸಿದ್ದ ವಿರಕ್ತ ಮಠದ ಸಂಗನಬಸವ ಸ್ವಾಮೀಜಿ ಮಾತನಾಡಿ, ವಿದ್ಯಾರ್ಥಿಗಳಿಗೆ ಶಿಕ್ಷಕರು ಪಠ್ಯ ಶಿಕ್ಷಣ ಜತೆಗೆ ನೈತಿಕತೆ ಬೋಧನೆ ಮಾಡಬೇಕು ಎಂದರು.
ಹಾನಗಲ್ಲ ಸಾಹಿತಿ ಹಾಗೂ ಶಿಕ್ಷಕ ಶ್ರೀಕಾಂತ ಹುಲ್ಮನಿ ಉಪನ್ಯಾಸ ನೀಡಿದರು. ಎಂ.ಬಿ. ಅಂಬಿಗೇರ ಪ್ರಾಸ್ತಾವಿಕವಾಗಿ ಮಾತನಾಡಿದರು. ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಶಿಕ್ಷಕರನ್ನು ಮತ್ತು ನಿವೃತ್ತ ತಾಲೂಕಿನ ಹಿರಿಯ ಶಿಕ್ಷಕರನ್ನು ಸನ್ಮಾನಿಸಲಾಯಿತು. ತಹಸೀಲ್ದಾರ್ ಯಲ್ಲಪ್ಪ ಗೋಣೆಣ್ಣವರ, ತಾಪಂ ಇಒ ಮಂಜುನಾಥ ಸಾಳೊಂಕಿ, ಜಿಲ್ಲಾ ಗ್ಯಾರಂಟಿ ಯೋಜನೆ ಸಮಿತಿಯ ಉಪಾಧ್ಯಕ್ಷ ಗುಡ್ಡಪ್ಪ ಜಲದಿ, ಗ್ಯಾರಂಟಿ ಸಮಿತಿ ತಾಲೂಕಾಧ್ಯಕ್ಷ ಶೇಖಪ್ಪ ಮಣಕಟ್ಟಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಸಂಘದ ಅಧ್ಯಕ್ಷ ಬಿ. ಶ್ರೀನಿವಾಸ, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಅರುಣ ಹುಡೇದಗೌಡ್ರ, ಕ್ಷೇತ್ರ ಸಮನ್ವಯಾಧಿಕಾರಿ ಗೀತಾಂಜಲಿ ತೆಪ್ಪದ, ಬಾಬರ್ ಬುವಾಜಿ, ಮಲ್ಲಮ್ಮ, ಸುಧೀರ, (ಲಮಾಣಿ)ಅಂಗಡಿ, ಅಣ್ಣಪ್ಪ ಲಮಾಣಿ, ಶಬ್ಬಿರ್ ಮನಿಯಾರ, ಎಫ್.ಸಿ. ಕಾಡಪ್ಪಗೌಡ್ರ, ಬಿ.ವೈ. ಉಪ್ಪಾರ, ಮಂಜುನಾಥ ಮನ್ನಣ್ಣವರ, ಮಾಲತೇಶ ಸಾಲಿ ಸೇರಿದಂತೆ ಇತರರಿದ್ದರು. ಕಸಾಪ ತಾಲೂಕು ಅಧ್ಯಕ್ಷ ನಾಗಪ್ಪ ಬೆಂತೂರ, ಅದುದುಲ್ಲಾ ರಟ್ಟಿಹಳ್ಳಿ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.