ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ರೂವಾರಿಗಳು: ಎ.ಎಸ್.ನಯನಾ

| Published : Sep 06 2024, 01:08 AM IST / Updated: Sep 06 2024, 01:09 AM IST

ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ರೂವಾರಿಗಳು: ಎ.ಎಸ್.ನಯನಾ
Share this Article
  • FB
  • TW
  • Linkdin
  • Email

ಸಾರಾಂಶ

ಶೃಂಗೇರಿ, ದೇಶದ ಭವಿಷ್ಯ ವಿದ್ಯಾರ್ಥಿಗಳ ಕೈಯಲ್ಲಿದೆ. ವಿದ್ಯಾರ್ಥಿಗಳ ಭವಿಷ್ಯ ಶಿಕ್ಷಕರ ಕೈಯಲ್ಲಿದೆ. ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ರೂವಾರಿಗಳು ಎಂದು ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷೆ ಎ.ಎಸ್.ನಯನಾ ಹೇಳಿದರು.

ಬಿಆರ್ ವಿ ಶ್ರೀ ರಾಮಕೃಷ್ಣ ಆಂಗ್ಲಮಾದ್ಯಮ ಶಾಲೆಯಲ್ಲಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ

ಕನ್ನಡಪ್ರಭ ವಾರ್ತೆ, ಶೃಂಗೇರಿ

ದೇಶದ ಭವಿಷ್ಯ ವಿದ್ಯಾರ್ಥಿಗಳ ಕೈಯಲ್ಲಿದೆ. ವಿದ್ಯಾರ್ಥಿಗಳ ಭವಿಷ್ಯ ಶಿಕ್ಷಕರ ಕೈಯಲ್ಲಿದೆ. ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ರೂವಾರಿಗಳು ಎಂದು ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷೆ ಎ.ಎಸ್.ನಯನಾ ಹೇಳಿದರು.

ಪಟ್ಟಣದ ಬಿಆರ್ ವಿ ಶ್ರೀ ರಾಮಕೃಷ್ಣ ಆಂಗ್ಲಮಾದ್ಯಮ ಶಾಲೆಯಲ್ಲಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು. ಇಂದಿನ ಮಕ್ಕಳು ದೇಶದ ಮುಂದಿನ ಪ್ರಜೆಗಳು. ಮಕ್ಕಳು ತಪ್ಪು ಮಾಡಿದರೆ ಶಿಕ್ಷೆಯೊಂದೆ ಮಾನದಂಡವಲ್ಲ. ಅವರಲ್ಲಿರುವ ತಪ್ಪು, ಲೋಪದೋಷಗಳನ್ನು ತಿದ್ದಿ ಸರಿಪಡಿಸಿ ಅವರನ್ನು ಸರಿದಾರಿಗೆ ತರುವುದು ಶಿಕ್ಷಕರ ಕರ್ತವ್ಯ ಹಾಗೂ ಬಹುದೊಡ್ಡ ಜವಾಬ್ದಾರಿಯಾಗಿದೆ.

ಇತ್ತೀಚಿನ ದಿನಗಳಲ್ಲಿ ಮಾನವೀಯ, ನೈತಿಕ ಮೌಲ್ಯಗಳು ಕುಸಿಯುತ್ತಿವೆ. ಅವರಲ್ಲಿ ಉತ್ತಮ ಸಂಸ್ಕಾರ, ಮೌಲ್ಯ, ಉದಾತ್ತ ಚಿಂತನೆಗಳನ್ನು ಬೆಳೆಸಬೇಕಿದೆ. ಮಕ್ಕಳು ಮನುಕುಲದ ಮೊಳಕೆಗಳು. ಅವರಲ್ಲಿರುವ ಪ್ರತಿಭೆಗಳನ್ನು ಗುರುತಿಸಿ ಹೊರತಂದು ಬೆಳೆಸುವ ಕೆಲಸ ನಡೆಯಬೇಕು. ಶಿಕ್ಷಣವೆಂದರೆ ಕೇವಲ ಓದು, ಅಂಕಗಳಿಕೆ, ಪಲಿತಾಂಶ ಇವುಗಳಿಗೆ ಮಾತ್ರ ಸೀಮಿತ ವಾಗಿರದೇ ಭವಿಷ್ಯದ ಜೀವನಕ್ಕೆ ಬುನಾದಿಯಾಗುವಂತಿರಬೇಕು.

ಸರ್ವಪಲ್ಲಿ ರಾದಾಕೃಷ್ಣನ್ ಒರ್ವ ಮಹಾನ್ ಶಿಕ್ಷಣ ತಜ್ಞರಾಗಿದ್ದು ಮಕ್ಕಳ ಅಚ್ಚುಮೆಚ್ಚಿನ ಶಿಕ್ಷರಾಗಿದ್ದರು. ಶಿಕ್ಷಕರಾಗಿ ರಾಷ್ಟ್ರದ ಅತ್ಯುನ್ನದ ಹುದ್ದೆ ಅಲಂಕರಿಸಿದ್ದ ಹೆಗ್ಗಳಿಕೆ ಅವರದ್ದಾಗಿದೆ.ವಿದ್ಯಾರ್ಥಿಗಳು ಅವರ ತತ್ವಾದರ್ಶಗಳನ್ನು ಜೀವನದಲ್ಲಿ ಮೈಗೂಡಿಸಿ ಕೊಳ್ಳಬೇಕು ಎಂದರು. ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿಯ ರಾಮೇಶ್ವರರಾವ್, ಅಂಬಳಮನೆ ಸುಬ್ರಮಣ್ಯ,ಶಾಲಾ ಮುಖ್ಯಶಿಕ್ಷಕ ಮಹೇಶ್ವರಪ್ಪ, ಶಿಕ್ಷಕ ಶಿಕ್ಷಕಿಯರು ಮತ್ತಿತರರು ಉಪಸ್ಥಿತರಿದ್ದರು.

5 ಶ್ರೀ ಚಿತ್ರ 1-

ಶೃಂಗೇರಿ ಪಟ್ಟಣದ ಬಿಆರ್ ವಿ ಶ್ರೀ ರಾಮಕೃಷ್ಣ ಆಂಗ್ಲ ಮಾದ್ಯಮ ಶಾಲೆಯಲ್ಲಿ ಶಿಕ್ಛಕರ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳು ಶಿಕ್ಷಕರನ್ನು ಸ್ವಾಗತ ನೀಡುತ್ತಿರುವುದು.