ಸಾರಾಂಶ
ಕನ್ನಡಪ್ರಭ ವಾರ್ತೆಚಿಕ್ಕಬಳ್ಳಾಪುರ: ಗೌರಿಬಿದನೂರು ನಗರದ ಮಧುಗಿರಿ ರಸ್ತೆಯಲ್ಲಿರುವ ಶೃಂಗೇರಿ ಶ್ರೀ ಸರಸ್ವತಿ ವಿದ್ಯಾಪೀಠ ಶಾಲೆಯಲ್ಲಿ 2023-24 ನೇ ಸಾಲಿನ ಶಾಲಾ ವಾರ್ಷಿಕೋತ್ಸವ ''''''''ಹೊಂಗಿರಣ - 3'''''''' ಕಾರ್ಯಕ್ರಮವನ್ನು ಮಾಜಿ ಸಚಿವ ಎನ್.ಎಚ್.ಶಿವಶಂಕರರೆಡ್ಡಿ ಉದ್ಘಾಟನೆ ಮಾಡಿದರು. ಈ ವೇಳೆ ಮಾಜಿ ಸಚಿವ ಎನ್.ಎಚ್.ಶಿವಶಂಕರರೆಡ್ಡಿ ಮಾತನಾಡಿ, ಮಕ್ಕಳ ಕಲಿಕೆಗೆ ಅಗತ್ಯ ವಾತಾವರಣವನ್ನು ನಿರ್ಮಿಸಿ ಪೋಷಕರ ಕನಸನ್ನು ನನಸು ಮಾಡುವ ಪ್ರಾಮಾಣಿಕ ಕಾರ್ಯವನ್ನು ಶಾಲೆಯಲ್ಲಿ ಶಿಕ್ಷಕರು ಮಾಡಬೇಕೆಂದರು.
ಪೋಷಕರ ಸಹಕಾರವೂ ಅಗತ್ಯಮಕ್ಕಳ ಸರ್ವಾಂಗೀಣ ಅಭಿವೃದ್ದಿಗೆ ಸಹಕಾರಿಯಾಗಬಲ್ಲ ಶಿಕ್ಷಣವನ್ನು ಶಾಲೆಗಳಲ್ಲಿ ಕಲಿಸುವ ಪ್ರಯತ್ನ ಮಾಡಿದಲ್ಲಿ ವಿದ್ಯಾರ್ಥಿಗಳು ಶಿಕ್ಷಣದ ಜತೆಗೆ ಸಂಸ್ಕಾರವನ್ನು ಕಲಿತು ಸಮಾಜದಲ್ಲಿ ಸತ್ಪ್ರಜೆಗಳಾಗಿ ಬಾಳಲು ಸಹಕಾರಿಯಾಗುತ್ತದೆ. ಶಾಲೆಯ ಶೈಕ್ಷಣಿಕ ಪ್ರಗತಿಗೆ ಪೋಷಕರ ಸಹಕಾರ ಅತ್ಯಗತ್ಯವಾಗಿದೆ ಎಂದು ಹೇಳಿದರು. ಮಧುಗಿರಿ ಶಾಸಕ ಎಚ್.ವಿ.ವೆಂಕಟೇಶ್ ಮಾತನಾಡಿ, ನಗರದಲ್ಲಿನ ಪ್ರತಿಷ್ಠಿತ ಖಾಸಗೀ ಶಾಲೆಗಳ ಸಾಲಿನಲ್ಲಿ ಪ್ರಥಮ ಸ್ಥಾನ ಪಡೆದಿರುವ ಶೃಂಗೇರಿ ಶ್ರೀಸರಸ್ವತಿ ವಿದ್ಯಾಪೀಠ ಶಾಲೆಯಲ್ಲಿ ಮಕ್ಕಳಿಗೆ ಪಠ್ಯ ವಿಷಯಗಳ ಜತೆಗೆ ಪಠ್ಯೇತರ ಮತ್ತು ಸಾಂಸ್ಕೃತಿಕ ಕಲೆಯನ್ನು ಅದ್ಭುತವಾಗಿ ಕಲಿಸುವ ಪ್ರಯತ್ನ ನಿಜಕ್ಕೂ ಅಭಿನಂಧನಾರ್ಹ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಮಧುಗಿರಿ ಉಪ ವಿಭಾಗದ ಡಿವೈಎಸ್ಪಿ ಎನ್.ಬಿ.ರಾಮಚಂದ್ರಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಇಂದ್ರಾಣಮ್ಮ, ನಿವೃತ್ತ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಪ್ರಕಾಶ್,ಪಾವಗಡ ಹೆಲ್ತ್ ಸೊಸೈಟಿ ಅಧ್ಯಕ್ಷ ಮಾನಮ್ ಶಶಿಕಿರಣ್ ,ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಜಿ.ಟಿ.ಗಿರೀಶ್ ,ಕಾರ್ಯದರ್ಶಿ ಶ್ರೀರಾಮ್ ಗೌರವಾಧ್ಯಕ್ಷ ರಾಮಕೃಷ್ಣಪ್ಪ, ಮತ್ತಿತರರು ಇದ್ದರು.