ಶಿಕ್ಷಕರು ಮಕ್ಕಳಲ್ಲಿ ಕೌಶಲ್ಯಾಭಿವೃದ್ಧಿಗೆ ಒತ್ತು ನೀಡಬೇಕು: ಬ್ರಿ. ಡಾ. ಸುರ್ಜಿತ್ ಸಿಂಗ್ ಪಾಬ್ಲಾ

| Published : Jul 31 2025, 12:51 AM IST

ಶಿಕ್ಷಕರು ಮಕ್ಕಳಲ್ಲಿ ಕೌಶಲ್ಯಾಭಿವೃದ್ಧಿಗೆ ಒತ್ತು ನೀಡಬೇಕು: ಬ್ರಿ. ಡಾ. ಸುರ್ಜಿತ್ ಸಿಂಗ್ ಪಾಬ್ಲಾ
Share this Article
  • FB
  • TW
  • Linkdin
  • Email

ಸಾರಾಂಶ

ಕಕ್ಕುಂಜೆ ಅನುಗ್ರಹ ಪಾಲನಾ ಕೇಂದ್ರದಲ್ಲಿ ಮಣಿಪಾಲ ಕೌಶಲ್ಯ ಅಭಿವೃದ್ಧಿ ಕೇಂದ್ರ, ಉಡುಪಿ ಧರ್ಮಪ್ರಾಂತ್ಯದ ಕೆಥೋಲಿಕ್‌ ಎಜ್ಯುಕೇಶನ್ ಸೊಸೈಟಿ ಆಶ್ರಯದಲ್ಲಿ ಇನ್ಫೋಸಿಸ್‌ ಸ್ಪ್ರಿಂಗ್‌ಬೋರ್ಡ್ ಸಹಯೋಗದೊಂದಿಗೆ ಶಾಲೆಯ ಶಿಕ್ಷಕರಿಗೆ ಸಾಮರ್ಥ್ಯ ವೃದ‍್ಧಿ ಕಾರ್ಯಾಗಾರ ನಡೆಯಿತು.

ಕನ್ನಡಪ್ರಭ ವಾರ್ತೆ ಉಡುಪಿ

ಪ್ರಸ್ತುತ ಆಧುನಿಕ ಜಗತ್ತಿನಲ್ಲಿ ಶಾಲಾ ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ಜೊತೆಗೆ ತಂತ್ರಜ್ಞಾನದ ಕೌಶಲ್ಯದ ಬೆಳೆಸಿಕೊಳ್ಳಲು ಶಿಕ್ಷಕರು ಮಾರ್ಗದರ್ಶನ ನೀಡಬೇಕಾಗಿದ್ದು, ಅದರ ಕುರಿತು ಸೂಕ್ತ ಅರಿವು ಅಗತ್ಯವಿದೆ. ತಂತ್ರಜ್ಞಾನದ ಕೌಶಲ್ಯವು ಉನ್ನತ ವ್ಯಾಸಂಗ ಮಾಡಲು ಹಾಗೂ ಸಂಶೋಧನೆಗೆ ಬೇಕಾದ ಮಾಹಿತಿ ಸಂಗ್ರಹಿಸಲು ಅನುಕೂಲವಾಗುತ್ತದೆ ಎಂದು ಮಣಿಪಾಲ ಕೌಶಲ್ಯ ಅಭಿವೃದ್ಧಿ ಕೇಂದ್ರ ಮುಖ್ಯಸ್ಥ ಬ್ರಿಗೇಡಿಯರ್ ಡಾ. ಸುರ್ಜಿತ್ ಸಿಂಗ್ ಪಾಬ್ಲಾ ಹೇಳಿದರು.

ಅವರು ಬುಧವಾರ ಕಕ್ಕುಂಜೆ ಅನುಗ್ರಹ ಪಾಲನಾ ಕೇಂದ್ರದಲ್ಲಿ ಮಣಿಪಾಲ ಕೌಶಲ್ಯ ಅಭಿವೃದ್ಧಿ ಕೇಂದ್ರ, ಉಡುಪಿ ಧರ್ಮಪ್ರಾಂತ್ಯದ ಕೆಥೋಲಿಕ್‌ ಎಜ್ಯುಕೇಶನ್ ಸೊಸೈಟಿ ಆಶ್ರಯದಲ್ಲಿ ಇನ್ಫೋಸಿಸ್‌ ಸ್ಪ್ರಿಂಗ್‌ಬೋರ್ಡ್ ಸಹಯೋಗದೊಂದಿಗೆ ಶಾಲೆಯ ಶಿಕ್ಷಕರಿಗೆ ಸಾಮರ್ಥ್ಯ ವೃದ‍್ಧಿ ಕಾರ್ಯಾಗಾರದ ಉದ್ಘಾಟಿಸಿ ಮಾತನಾಡಿದರು.ಇಂದು ಮಾಹಿತಿ ತಂತ್ರಜ್ಞಾನದ ಉಪಯೋಗ ಪ್ರತಿಯೊಂದು ಕ್ಷೇತ್ರದಲ್ಲಿ ಪ್ರಮುಖವಾಗಿದ್ದು, ಶಿಕ್ಷಣ ವ್ಯವಸ್ಥೆಯಲ್ಲಿ ಕೂಡ ಅತೀ ಹೆಚ್ಚು ಉಪಯೋಗವಾಗುತ್ತಿದೆ. ಸರ್ಕಾರ ಕೂಡ ಪಠ್ಯದಲ್ಲಿ ಮಾಹಿತಿ ತಂತ್ರಜ್ಞಾನದೊಂದಿಗೆ ಕೌಶಲ್ಯ ಅಭಿವೃದ್ಧಿಗೆ ಹೆಚ್ಚಿನ ಒತ್ತನ್ನು ನೀಡುತ್ತಿದೆ. ಮಾಹಿತಿ ತಂತ್ರಜ್ಞಾನವು ವ್ಯಾಪಕವಾಗಿ ಬೆಳೆದಿದ್ದು, ಅದರ ಸದುಪಯೋಗವನ್ನು ಇಂದಿನ ವಿದ್ಯಾರ್ಥಿಗಳಿಗೆ ನೀಡಬೇಕಾಗಿದ್ದರೆ ಶಿಕ್ಷಕರು ಕೂಡ ಅದರ ಕುರಿತು ಪರಿಣತಿಯನ್ನು ಹೊಂದಿರಬೇಕು. ಮಾಹಿತಿ ಸಂವಹನ ತಂತ್ರಜ್ಞಾನ ಕೌಶಲ್ಯದ ಮೂಲಕ ಬೇರೆ ಬೇರೆ ಕ್ಷೇತ್ರಗಳಲ್ಲಿ ದೊರೆಯುವ ಸಂಪನ್ಮೂಲಗಳನ್ನು ಸಂಗ್ರಹಿಸಿ ಸ್ಮರ್ಧಾತ್ಮಕ ಜಗತ್ತಿನಲ್ಲಿ ತಂತ್ರಜ್ಞಾನ ಕೌಶಲ ಬಳಕೆ ಮಾಡಿಕೊಂಡರೆ ಶಿಕ್ಷಣದ ಬಳಿಕ ಉತ್ತಮ ಉದ್ಯೋಗ ಪಡೆಯಲು ಸಾಧ್ಯವಾಗುತ್ತದೆ ಎಂದರು.ಉದ್ಘಾಟನಾ ಕಾರ್ಯಕ್ರಮದಲ್ಲಿ ಮಣಿಪಾಲ ಕೌಶಲ್ಯ ಅಭಿವೃದ್ಧಿ ಕೇಂದ್ರದ ರಿಜಿಸ್ಟ್ರಾರ್ ಡಾ. ಅಂಜಯ್ಯ ದೇವಿನೇನಿ, ಕಾರ್ಯಕ್ರಮ ಸಂಯೋಜಕಿ ರಾಜಲಕ್ಷ್ಮೀ ಆನಂದನ್, ಸಂಪನ್ಮೂಲ ವ್ಯಕ್ತಿಗಳಾದ ಐಶ್ವರ್ಯ ರಾಜೀವ್, ದೀಪ್ತ ಪದ್ಮನಾಭನ್ ಉಪಸ್ಥಿತರಿದ್ದರು.ಉಡುಪಿ ಧರ್ಮಪ್ರಾಂತ್ಯದ ಕೆಥೋಲಿಕ್‌ ಎಜುಕೇಶನ್ ಸೊಸೈಟಿಯ ಕಾರ್ಯದರ್ಶಿ ವಿನ್ಸೆಂಟ್ ಕ್ರಾಸ್ತಾ, ಸ್ವಾಗತಿಸಿದರು. ಸಿಂತಿಯಾ ಮಿನೇಜಸ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.ಕಾರ್ಯಾಗಾರದಲ್ಲಿ ಜಿಲ್ಲೆಯ ವಿವಿಧ ಶಾಲೆಗಳ ಸುಮಾರು 70ಕ್ಕೂ ಅಧಿಕ ಶಿಕ್ಷಕ ಶಿಕ್ಷಕಿಯರು ಭಾಗವಹಿಸಿ, ಶಾಲೆಯ ಪಠ್ಯದಲ್ಲಿ ಕೃತಕ ಬುದ್ಧಿಮತ್ತೆ ಬಳಕೆ, ಕೌಶಲ್ಯ ಅಭಿವೃದ್ಧಿ ಕುರಿತ ವಿಷಯಗಳಲ್ಲಿ ಮಾಹಿತಿಯನ್ನು ಪಡೆದುಕೊಂಡರು.