ಶಿಕ್ಷಕರು ವೃತ್ತಿಧರ್ಮ ಪಾಲನೆ ಮಾಡಬೇಕು

| Published : Feb 06 2025, 11:48 PM IST

ಶಿಕ್ಷಕರು ವೃತ್ತಿಧರ್ಮ ಪಾಲನೆ ಮಾಡಬೇಕು
Share this Article
  • FB
  • TW
  • Linkdin
  • Email

ಸಾರಾಂಶ

ನಂಗಲಿ ಗ್ರಾ.ಪಂ ಆಗಿದ್ದು ಹೆಚ್ಚಿನ ಜನಸಂಖ್ಯೆ ಹೊಂದಿರುವುದರಿಂದ ಶೀಘ್ರದಲ್ಲೇ ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೆ ಏರಿಸಲು ಸರ್ಕಾರದಲ್ಲಿ ಅನುಮೋದನೆ ನೀಡಲಾಗಿದೆ. ಈ ಹಿಂದೆ ಕೋಲಾರ ಜಿಲ್ಲೆಯಲ್ಲಿ ಕೆಎಎಸ್, ಐಎಎಸ್ ಹೆಚ್ಚಿನ ಸಂಖ್ಯೆಯಲ್ಲಿ ಉತೀರ್ಣರಾಗುತ್ತಿದ್ದರು. ಇತ್ತೀಚಿನ ದಿನಗಳಲ್ಲಿ ಕಡಿಮೆಯಾಗುತ್ತಿದೆ

ಕನ್ನಡಪ್ರಭ ವಾರ್ತೆ ಮುಳಬಾಗಿಲುಶಿಕ್ಷಕರ ವೃತ್ತಿ ಅತ್ಯಂತ ಪವಿತ್ರವಾದದ್ದು ಶಿಕ್ಷಕರು ಯಾವುದೇ ಕಾರಣಕ್ಕೂ ವೃತ್ತಿ ಧರ್ಮವನ್ನು ಪಾಲನೆ ಮಾಡುವುದನ್ನು ಮರೆಯಬಾರದು ಎಂದರಲ್ಲದೆ ರಾಜಕೀಯದಲ್ಲಿ ಮೂಗು ದೂರಿಸಬಾರದೆಂದು ಶಾಸಕ ಸಮೃದ್ದಿ ಮಂಜುನಾಥ್ ಮನವಿ ಮಾಡಿದರು.

ತಾಲೂಕಿನ ನಂಗಲಿಯಲ್ಲಿ ೮ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ತಾಲೂಕಿನಲ್ಲಿ ಹಲವಾರು ಸರ್ಕಾರಿ ಶಾಲೆಗಳನ್ನು ಮುಚ್ಚಲಾಗುತ್ತಿದ್ದು ಇದರಿಂದ ಶೈಕ್ಷಣಿಕ ಪ್ರಗತಿಗೆ ಧಕ್ಕೆಯಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರಲ್ಲದೆ, ಕನ್ನಡ ಶಾಲೆಗಳನ್ನು ಮತ್ತೆ ಪ್ರಾರಂಭಿಸಲು ಈಗಾಗಲೇ ಸದನದಲ್ಲಿ ಪ್ರಸ್ತಾಪ ಮಾಡಿರುವುದಾಗಿ ತಿಳಿಸಿದರು.

ಗ್ರಾಪಂ ಪಪಂ ಆಗಿ ಮೇಲ್ದರ್ಜೆಗೆ

ನಂಗಲಿ ಗ್ರಾ.ಪಂ ಆಗಿದ್ದು ಹೆಚ್ಚಿನ ಜನಸಂಖ್ಯೆ ಹೊಂದಿರುವುದರಿಂದ ಶೀಘ್ರದಲ್ಲೇ ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೆ ಏರಿಸಲು ಸರ್ಕಾರದಲ್ಲಿ ಅನುಮೋದನೆ ಆಗಿದೆ ಎಂದರಲ್ಲದೆ ಗ್ರಾಮೀಣ ಭಾಗದಲ್ಲಿ ಕನ್ನಡ ಸಾಹಿತ್ಯ ತಾಲೂಕು ಸಮ್ಮೇಳನ ನಡೆಸುವ ಮೂಲಕ ಕನ್ನಡದ ಕಂಪನ್ನು ಹರಡಿಸಲಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಸಮ್ಮೇಳನದಲ್ಲಿ ತೆಗೆದುಕೊಳ್ಳುವ ನಿರ್ಣಯಗಳನ್ನು ಸರ್ಕಾರಕ್ಕೆ ತಲುಪಿಸುವ ಕೆಲಸವನ್ನು ನಾನು ಮಾಡುತ್ತೇನೆ ಎಂದರಲ್ಲದೆ ಕನ್ನಡ ಕಾರ್ಯಕ್ರಮಗಳಲ್ಲಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಮನವಿ ಮಾಡಿದರು.ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಿ

ತಹಸೀಲ್ದಾರ್ ವಿ.ಗೀತಾ ಮಾತನಾಡಿ, ಕನ್ನಡ ಮಾಧ್ಯಮದಲ್ಲಿ ಓದಿರುವ ವಿದ್ಯಾರ್ಥಿಗಳೇ ಕೆಎಎಸ್, ಐಎಎಸ್ ಅಂತಹ ಉನ್ನತ ಹುದ್ದೆಗಳನ್ನು ಅಲಂಕರಿಸುತ್ತಿದ್ದಾರೆ ಎಂದರಲ್ಲದೆ, ಈ ಹಿಂದೆ ಕೋಲಾರ ಜಿಲ್ಲೆಯಲ್ಲಿ ಕೆಎಎಸ್, ಐಎಎಸ್ ಹೆಚ್ಚಿನ ಸಂಖ್ಯೆಯಲ್ಲಿ ಉತೀರ್ಣರಾಗುತ್ತಿದ್ದರು. ಇತ್ತೀಚಿನ ದಿನಗಳಲ್ಲಿ ಕಡಿಮೆಯಾಗುತ್ತಿದೆ. ಇದನ್ನು ಹೋಗಲಾಡಿಸಲು ವಿದ್ಯಾರ್ಥಿಗಳು ಉನ್ನತ ವ್ಯಾಸಂಗ ಮಾಡಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಬೇಕೆಂದು ಕಿವಿಮಾತು ಹೇಳಿದರು.ಸಮ್ಮೇಳನಾಧ್ಯಕ್ಷ ವಿ.ಆರ್. ಪ್ರಭಾಕರ್ ಗುಪ್ತ ತಮ್ಮ ಆಶಯ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ನಂಗಲಿ ಗ್ರಾ.ಪಂ ಅಧ್ಯಕ್ಷ ಎನ್.ಸಿ. ಶ್ರೀಧರ್, ಕಸಾಪ ಜಿಲ್ಲಾಧ್ಯಕ್ಷ ಎನ್.ಬಿ. ಗೋಪಾಲಗೌಡ, ಸಾಹಿತಿ ಡಾ. ಚಂದ್ರಶೇಖರ್ ನಂಗಲಿ, ತಾಲೂಕು ಕಸಾಪ ಅಧ್ಯಕ್ಷ ಎನ್. ಜಗದೀಶ್, ಕನ್ನಡಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಶಂಕರ್ ಕೇಸರಿ, ನಗವಾರ ಎನ್.ಆರ್. ಸತ್ಯಣ್ಣ, ಗೊಲ್ಲಹಳ್ಳಿ ಪ್ರಭಾಕರ್, ಬಿಜೆಪಿ ಗ್ರಾಮಾಂತರ ಅಧ್ಯಕ್ಷ ಮೈಸೂರು ಸುರೇಶ್‌ರಾಜು, ಬಿಜೆಪಿ ರೈತಮೋರ್ಚ ಜಿಲ್ಲಾಧ್ಯಕ್ಷ ನಂಗಲಿ ವಿಶ್ವನಾಥ್‌ರೆಡ್ಡಿ, ನಿಕಠಪೂರ್ವ ಕಸಾಪ ಅಧ್ಯಕ್ಷರಾದ ಹೆಚ್.ಎಸ್. ಹರೀಶ್, ಎಂ.ವಿ. ಜನಾರ್ಧನ್, ಚಾಂದ್‌ಪಾಷ, ಎನ್.ಎಸ್. ಶೇಷಾದ್ರಿ, ಎಂ.ಎಸ್. ಶ್ರೀನಿವಾಸರೆಡ್ಡಿ, ಬಿ.ಆರ್.ಸಿ. ಪಿ. ಸೋಮೇಶ್ ಇದ್ದರು.