ಕೆಲವು ಮಕ್ಕಳು ಮನೆಯಲ್ಲಿ ತಂದೆ-ತಾಯಿಯ ಮಾತು ಕೇಳುವುದಿಲ್ಲ. ಆದರೆ, ಶಾಲೆಯಲ್ಲಿ ಶಿಕ್ಷಕರ ಮಾತನ್ನು ಚಾಚೂ ತಪ್ಪದೇ ಕೇಳುತ್ತಾರೆ. ಹೀಗಾಗಿ, ಶಿಕ್ಷಕರು ಮಕ್ಕಳಿಗೆ ಪಠ್ಯದ ಜತೆಗೆ ನೈತಿಕ ಶಿಕ್ಷಣ ಬೋಧಿಸಬೇಕು.
ಹುಬ್ಬಳ್ಳಿ:
ಶಿಕ್ಷಕರು ಮಕ್ಕಳಿಗೆ ನೈತಿಗೆ ಶಿಕ್ಷಣ ಬೋಧಿಸಬೇಕೆಂದು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಪೂರ್ಣಿಮಾ ಚೂರಿ ಹೇಳಿದರು.ತಾಲೂಕಿನ ಅಂಚಟಗೇರಿ ಗ್ರಾಮದ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆಯಲ್ಲಿ ಏರ್ಪಡಿಸಿದ್ದ ಶಿಕ್ಷಣ ಸೇವಾ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕೆಲವು ಮಕ್ಕಳು ಮನೆಯಲ್ಲಿ ತಂದೆ-ತಾಯಿಯ ಮಾತು ಕೇಳುವುದಿಲ್ಲ. ಆದರೆ, ಶಾಲೆಯಲ್ಲಿ ಶಿಕ್ಷಕರ ಮಾತನ್ನು ಚಾಚೂ ತಪ್ಪದೇ ಕೇಳುತ್ತಾರೆ. ಹೀಗಾಗಿ, ಶಿಕ್ಷಕರು ಮಕ್ಕಳಿಗೆ ಪಠ್ಯದ ಜತೆಗೆ ನೈತಿಕ ಶಿಕ್ಷಣ ಬೋಧಿಸಬೇಕು. ಇಲಾಖೆಯಿಂದ ಶಿಕ್ಷಕರಿಗೆ ಜವಾಬ್ದಾರಿ ನೀಡುವ ಜತೆಗೆ ಅವರ ಕೆಲಸವನ್ನು ಗೌರವಿಸುವ ಉದ್ದೇಶದಿಂದ ಶಿಕ್ಷಣ ಸನ್ಮಾನ ಕಾರ್ಯಕ್ರಮದ ಮೂಲಕ ಅವರನ್ನು ಗೌರವಿಸಲಾಗುತ್ತಿದೆ ಎಂದರು.ವಸತಿ ಶಾಲೆ ಪ್ರಾಚಾರ್ಯ ವಿಶ್ವನಾಥ ಹುಲಸದಾರ ಮಾತನಾಡಿದರು. ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಡಿ ಜಿಲ್ಲೆಯ ವಿವಿಧ ವಸತಿ ಶಾಲೆಗಳ ಉತ್ತಮ ಶಿಕ್ಷಕರು, ಪ್ರಾಚಾರ್ಯರು ಮತ್ತು ಸಿಬ್ಬಂದಿಯನ್ನು ಸನ್ಮಾನಿಸಲಾಯಿತು.
ಶಿಕ್ಷಕರ ದಿನಾಚರಣೆ ನಿಮಿತ್ತ ಶಿಕ್ಷಕರಿಗಾಗಿ ಶಾಲೆಯಲ್ಲಿ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ನೀಡಿ ಗೌರವಿಸಲಾಯಿತು. ಅಂಚಟಗೇರಿ ಮೊರಾರ್ಜಿ ದೇಸಾಯಿ ವಸತಿ ಪ್ರೌಢಶಾಲೆ ನಂ. 2 ಮುಖ್ಯ ಶಿಕ್ಷಕಿ ಪವಿತ್ರಾ ನಾಗನಗೌಡ್ರ, ಶಿಕ್ಷಕ ಆನಂದ ಅಜ್ಜೊಡಿಮಠ, ಶಿಕ್ಷಕಿ ಕವಿತಾ ಕೊರಟಕರ ನಿರ್ವಹಿಸಿದರು.