ಶಿಕ್ಷಕರು ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಳ್ಳಿ

| Published : Mar 13 2025, 12:45 AM IST

ಸಾರಾಂಶ

ದೊಡ್ಡಬಳ್ಳಾಪುರ: ಎಲ್ಲಾ ವೃತ್ತಿಗಳಲ್ಲಿ ಅತ್ಯಂತ ಶ್ರೇಷ್ಠವಾದದ್ದು ಶಿಕ್ಷಕ ವೃತ್ತಿ. ತಾವು ಶಿಕ್ಷಕರು ಎಂದು ಕರೆಸಿಕೊಳ್ಳುವುದು ಹೆಮ್ಮೆಯ ವಿಷಯವಾಗಬೇಕು ಎಂದು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಕುಲಪತಿ ಡಾ.ನಿರಂಜನ ವಾನಳ್ಳಿ ಹೇಳಿದರು.

ದೊಡ್ಡಬಳ್ಳಾಪುರ: ಎಲ್ಲಾ ವೃತ್ತಿಗಳಲ್ಲಿ ಅತ್ಯಂತ ಶ್ರೇಷ್ಠವಾದದ್ದು ಶಿಕ್ಷಕ ವೃತ್ತಿ. ತಾವು ಶಿಕ್ಷಕರು ಎಂದು ಕರೆಸಿಕೊಳ್ಳುವುದು ಹೆಮ್ಮೆಯ ವಿಷಯವಾಗಬೇಕು ಎಂದು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಕುಲಪತಿ ಡಾ.ನಿರಂಜನ ವಾನಳ್ಳಿ ಹೇಳಿದರು.

ಇಲ್ಲಿನ ಕೊಂಗಾಡಿಯಪ್ಪ ಶಿಕ್ಷಣ ಮಹಾವಿದ್ಯಾಲಯದಲ್ಲಿ ಏರ್ಪಡಿಸಿದ್ದ ಬಿಎಡ್‌ ಪದವೀಧರರ ಪದವಿ ಪ್ರದಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಕರು ರಾಷ್ಟ್ರದ ಭವಿಷ್ಯವನ್ನು ರೂಪಿಸುವವರು. ಶ್ರದ್ಧೆ, ಪ್ರಾಮಾಣಿಕತೆ, ನೈತಿಕತೆ ಮತ್ತು ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಳ್ಳಬೇಕು. ಉತ್ತಮ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಮಹತ್ತರವಾದದ್ದು. ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಕೊಂಗಾಡಿಯಪ್ಪ ಶಿಕ್ಷಣ ಮಹಾವಿದ್ಯಾಲಯವು ವಿಶ್ವವಿದ್ಯಾಲಯದ ಮಟ್ಟದಲ್ಲಿ ಹಲವು ರ್ಯಾಂಕ್‌ಗಳನ್ನು ಪಡೆದಿರುವುದು ಶ್ಲಾಘನೀಯ ಎಂದರು.

ಶಿಕ್ಷಣ ತಜ್ಞ ಡಾ.ಗುರುರಾಜ ಕರ್ಜಗಿ ಮಾತನಾಡಿ, ಶಿಕ್ಷಕರು ದೇಶದ ಆಸ್ತಿ. ಆಡಳಿತ ಮಂಡಳಿಯವರು ಮತ್ತು ಸರ್ಕಾರ ಶಿಕ್ಷಕರನ್ನು ಗೌರವದಿಂದ ನಡೆಸಿಕೊಳ್ಳಬೇಕು. ಶಿಕ್ಷಕರು ತಮ್ಮ ವೃತ್ತಿಗೆ ಧಕ್ಕೆ ಬಾರದಂತೆ ನುಡಿದಂತೆ ನಡೆಯಬೇಕು. ವಿದ್ಯಾರ್ಥಿಗಳು ಶಿಕ್ಷಕರನ್ನು ಅನುಸರಿಸುತ್ತಾರೆ. ಆದ್ದರಿಂದ ಶಿಕ್ಷಕರು ಉತ್ತಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು ಮತ್ತು ಸದಾ ಅಧ್ಯಯನಶೀಲರಾಗಿರಬೇಕು ಎಂದು ತಿಳಿಸಿದರು.

ಪದವೀಧರ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ನಡೆಯಿತು. ಸಂಸ್ಥೆಯ ಅಧ್ಯಕ್ಷ ಎ.ರಾಮಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಗೌರವ ಕಾರ್ಯದರ್ಶಿ ಎಸ್.ಪ್ರಕಾಶ್, ಸಹಕಾರ್ಯದರ್ಶಿ ಎ.ಆರ್. ರಾಜಶೇಖರ್‌, ಖಜಾಂಚಿ ಸಿ, ಎಸ್.ಜಗದೀಶ್ ಬಾಬು, ಪ್ರಾಂಶುಪಾಲ ಡಾ.ಬಿ.ಕೆ.ಮಂಜುನಾಥ್ ಮತ್ತು ಆಡಳಿತ ಮಂಡಳಿಯ ನಿರ್ದೇಶಕರು ಉಪಸ್ಥಿತರಿದ್ದರು.

12ಕೆಡಿಬಿಪಿ7- ದೊಡ್ಡಬಳ್ಳಾಪುರದ ಕೊಂಗಾಡಿಯಪ್ಪ ಶಿಕ್ಷಣ ಮಹಾವಿದ್ಯಾಲಯದಲ್ಲಿ ನಡೆದ ಬಿಎಡ್‌ ವಿದ್ಯಾರ್ಥಿಗಳ ಪದವಿ ಪ್ರದಾನ ಕಾರ್ಯಕ್ರಮಕ್ಕೆ ಬೆಂಗಳೂರು ಉತ್ತರ ವಿವಿ ಕುಲಪತಿ ಡಾ.ನಿರಂಜನ ಚಾಲನೆ ನೀಡಿದರು.