ಗುಣಾತ್ಮಕ ಶಿಕ್ಷಣ ನೀಡುವಲ್ಲಿ ಶಿಕ್ಷಕರು ಶ್ರಮಿಸಿ: ಟಿ.ಪ್ರಭುದೇವ್

| Published : Jan 16 2024, 01:48 AM IST

ಗುಣಾತ್ಮಕ ಶಿಕ್ಷಣ ನೀಡುವಲ್ಲಿ ಶಿಕ್ಷಕರು ಶ್ರಮಿಸಿ: ಟಿ.ಪ್ರಭುದೇವ್
Share this Article
  • FB
  • TW
  • Linkdin
  • Email

ಸಾರಾಂಶ

ಎಲ್ಲಾ ವಿದ್ಯಾರ್ಥಿಗಳಿಗೆ ಗುಣಾತ್ಮಕ ಶಿಕ್ಷಣ ನೀಡುವ ಜವಾಬ್ದಾರಿ ಶಿಕ್ಷಕರದು ಎಂದು ಮುಖಂಡ ಟಿ.ಪ್ರಭುದೇವ್ ಅಭಿಪ್ರಾಯಪಟ್ಟರು.

ಕನ್ನಡಪ್ರಭ ವಾರ್ತೆ

ಚಳ್ಳಕೆರೆ-೧೩ ಖಾಸಗಿ ವಿದ್ಯಾಸಂಸ್ಥೆಗಳು ಸಹ ತಾಲ್ಲೂಕಿನ ಶೈಕ್ಷಣಿಕ ಪ್ರಗತಿಗೆ ಪ್ರೇರಕವಾಗಿ ಕಾರ್ಯನಿರ್ವಹಿಸುತ್ತಿವೆ. ಶಾಲೆಗೆ ಬರುವ ಎಲ್ಲಾ ವಿದ್ಯಾರ್ಥಿಗಳಿಗೆ ಗುಣಾತ್ಮಕ ಶಿಕ್ಷಣ ನೀಡುವ ಜವಾಬ್ದಾರಿ ಶಿಕ್ಷಕರು ಮತ್ತು ಆಡಳಿತ ಮಂಡಳಿಯ ಮೇಲಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿ ತಮ್ಮ ಗುರಿಯಾಗಬೇಕೆಂದು ವೀರಶೈವ ಸಮಾಜದ ಹಿರಿಯ ಮುಖಂಡ ಟಿ.ಪ್ರಭುದೇವ್ ತಿಳಿಸಿದರು.

ಅವರು, ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಬಸವೇಶ್ವರ ಆಂಗ್ಲ ಮಾಧ್ಯಮ ಶಾಲೆಯ ೨೦೨೩-೨೪ನೇ ವರ್ಷದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ವನ್ನು ಉದ್ಘಾಟಿಸಿ ಮಾತನಾಡಿ, ಕಳೆದ ಹಲವಾರು ವರ್ಷಗಳಿಂದ ಸಾವಿರಾರು ವಿದ್ಯಾರ್ಥಿಗಳಿಗೆ ಉತ್ತಮ ಬೋಧನೆ ಮಾಡಿರುವ ಈ ವಿದ್ಯಾಸಂಸ್ಥೆ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಅಭಿವೃದ್ಧಿ ಹೊಂದಲಿ ಎಂದು ಆಶಿಸುವುದಾಗಿ ತಿಳಿಸಿದರು.

ಸಂಸ್ಥೆಯ ಕಾರ್ಯದರ್ಶಿ ಕೋಟೆಜಯಣ್ಣ ಮಾತನಾಡಿ, ಖಾಸಗಿ ಶಿಕ್ಷಣ ಸಂಸ್ಥೆಗಳು ತಮಗೆ ಬರುವ ಅಲ್ಪ ಆದಾಯದಲ್ಲೇ ಚಟುವಟಿಕೆಗಳನ್ನು ನಡೆಸಬೇಕಿದೆ. ವಿದ್ಯಾಸಂಸ್ಥೆಗಳ ಅಭಿವೃದ್ಧಿಗೆ ಪೋಷಕರು ನೀಡುವ ಆರ್ಥಿಕ ಸಹಾಯವೇ ಮುಖ್ಯವಾಗುತ್ತದೆ. ನಮ್ಮ ವಿದ್ಯಾಸಂಸ್ಥೆಯಲ್ಲಿ ಯಾವುದೇ ರೀತಿಯ ನಿಯಂತ್ರಣವನ್ನು ಪೋಷಕರ ಮೇಲೆ ಮತ್ತು ಮಕ್ಕಳ ಮೇಲೆ ಏರದೆ ಶೈಕ್ಷಣಿಕ ಅಭಿವೃದ್ಧಿಗಾಗಿ ಕಾರ್ಯನಿರ್ವಹಿಸಲಾಗುತ್ತಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿದ್ಯಾಸಂಸ್ಥೆ ಅಧ್ಯಕ್ಷ ಮಂಜುನಾಥ ವಹಿಸಿದ್ದರು. ಉಪಕಾರ್ಯದರ್ಶಿ ಬಸವರಾಜು, ಖಜಾಂಚಿ ಶಂಕರಲಿAಗಯ್ಯ, ಸಂಸ್ಥೆಯ ನಿರ್ದೇಶಕರಾದ ಪ್ರಸನ್ನಕುಮಾರ್, ನಾಗಭೂಷಣ್, ಗುರುಸಿದ್ದಮೂರ್ತಿ, ಅನ್ನಪೂರ್ಣಪ್ರಕಾಶ್, ಕೆ.ಎಂ.ಪುಪ್ಪಲತಾ, ವಿಜಯ್, ಮುಖ್ಯ ಶಿಕ್ಷಕಿ ಮಧುರ ಮುಂತಾ ದವರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ಮನೋರಂಜನಾ ಕಾರ್ಯಕ್ರಮ ನಡೆಸಿದರು. ಪೋಟೋ೧೩ಸಿಎಲ್‌ಕೆ೪: ಚಳ್ಳಕೆರೆ ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಬಸವೇಶ್ವರ ಆಂಗ್ಲಮಾಧ್ಯಮ ಶಾಲೆಯ ೨೦೨೩-೨೪ನೇ ವರ್ಷದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು.