ಎಸ್‌ಎಸ್‌ಎಲ್‌ಸಿ ಉತ್ತಮ ಫಲಿತಾಂಶಕ್ಕೆ ಶಿಕ್ಷಕರು ವಿಶೇಷ ಕಾಳಜಿ ವಹಿಸಬೇಕು : ಡಿಸಿ ಮೀನಾ

| Published : Sep 21 2024, 01:53 AM IST

ಎಸ್‌ಎಸ್‌ಎಲ್‌ಸಿ ಉತ್ತಮ ಫಲಿತಾಂಶಕ್ಕೆ ಶಿಕ್ಷಕರು ವಿಶೇಷ ಕಾಳಜಿ ವಹಿಸಬೇಕು : ಡಿಸಿ ಮೀನಾ
Share this Article
  • FB
  • TW
  • Linkdin
  • Email

ಸಾರಾಂಶ

ಚಿಕ್ಕಮಗಳೂರು, ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಉತ್ತಮ ಫಲಿತಾಂಶ ಬರಲು ಶಿಕ್ಷಕರ ಹಾಗೂ ಉಪನ್ಯಾಸಕರ ಪಾತ್ರ ಪ್ರಮುಖವಾಗಿದ್ದು, ಶಿಕ್ಷಕರು ಮತ್ತು ಉಪನ್ಯಾಸಕರು ವಿಶೇಷ ಕಾಳಜಿ ವಹಿಸಿ ಅಗತ್ಯ ಕಾರ್ಯ ಯೋಜನೆ ರೂಪಿಸಬೇಕು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

- ಪ್ರೌಢ ಶಾಲಾ ಶಿಕ್ಷಕರ ಪೂರ್ವ ಸಿದ್ಧತಾ ಸಭೆ । ಶೇಕಡವಾರು ಫಲಿತಾಂಶ ಹೆಚ್ಚಳದ ಹಿನ್ನಲೆಯಲ್ಲಿ ಸಭ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಉತ್ತಮ ಫಲಿತಾಂಶ ಬರಲು ಶಿಕ್ಷಕರ ಹಾಗೂ ಉಪನ್ಯಾಸಕರ ಪಾತ್ರ ಪ್ರಮುಖವಾಗಿದ್ದು, ಶಿಕ್ಷಕರು ಮತ್ತು ಉಪನ್ಯಾಸಕರು ವಿಶೇಷ ಕಾಳಜಿ ವಹಿಸಿ ಅಗತ್ಯ ಕಾರ್ಯ ಯೋಜನೆ ರೂಪಿಸಬೇಕು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಗುಣಮಟ್ಟದಿಂದ ಕೂಡಿದ ಶೇಕಡವಾರು 100 ರಷ್ಟು ಫಲಿತಾಂಶ ಬರಲು ಕಾರ್ಯಯೋಜನೆ ರೂಪಿಸಿಸುವ ಪ್ರೌಢ ಶಾಲಾ ಶಿಕ್ಷಕರ ಪೂರ್ವ ಸಿದ್ಧತಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಶಾಲೆಯ ಒಟ್ಟು ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ವಿಭಾಗಿಸಿ ಎಲ್ಲಾ ಶಿಕ್ಷಕರಿಗೂ ಇಂತಿಷ್ಟು ವಿದ್ಯಾರ್ಥಿಗಳೆಂದು ದತ್ತು ನೀಡುವ ವ್ಯವಸ್ಥೆ ಜಾರಿಗೊಳಿಸಿ ಆಯಾ ಶಿಕ್ಷಕರು ಅವರ ಶೈಕ್ಷಣಿಕ ಪ್ರಗತಿ ಬಗ್ಗೆ ಮೇಲುಸ್ತುವಾರಿ ನೋಡಿಕೊಳ್ಳಬೇಕು. ಇದೇ ರೀತಿ ಉತ್ತಮವಾಗಿ ಓದುವ ವಿದ್ಯಾರ್ಥಿಗಳ ಜೊತೆ ಸಾಧಾರಣ ಮತ್ತು ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳ ಜೊತೆ ಓದಲು ಬಿಡಬೇಕು. ಇದರಿಂದ ಸಾಧಾರಣ ವಿದ್ಯಾರ್ಥಿ ಗಳು ಹಾಗೂ ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳು ಉತ್ತೀರ್ಣರಾಗಲು ಸಹಕಾರಿಯಾಗುತ್ತದೆ. ಇವೆಲ್ಲವೂ ಶಿಕ್ಷಕರ ಮಾರ್ಗದರ್ಶನದಲ್ಲಿಯೇ ನಡೆಯಬೇಕು. ಎಲ್ಲಾ ಮಕ್ಕಳನ್ನು ಶಿಕ್ಷಕರು ದತ್ತು ತೆಗೆದುಕೊಂಡು ಕಲಿಕೆಗೆ ಪ್ರೋತ್ಸಾಹ ನೀಡಬೇಕೆಂದು ತಿಳಿಸಿದರು.ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ವಿಶೇಷ ತರಗತಿ ವಿಷಯವಾರು ರಸಪ್ರಶ್ನೆ ಕಾರ್ಯಕ್ರಮ ಮುಂತಾದ ಪಠ್ಯೇತರ ಚಟುವಟಿಕೆ ಏರ್ಪಡಿಸುವ ಮೂಲಕ ವಿದ್ಯಾರ್ಥಿಗಳು ಭಯ ಬಿಟ್ಟು ಧೈರ್ಯವಾಗಿ ಪರೀಕ್ಷೆಯಲ್ಲಿ ಪಾಲ್ಗೊಳ್ಳುವಂತೆ ಮಾಡಬೇಕು. ಶಾಲೆ ಮುಖ್ಯ ಶಿಕ್ಷಕರು ಎಸ್‌ಎಸ್‌ ಎಲ್‌ಸಿಯ ಎಲ್ಲಾ ವಿದ್ಯಾರ್ಥಿಗಳ ಸಂಪೂರ್ಣ ಮಾಹಿತಿ ಹೊಂದಿರಬೇಕು. ಆಯಾ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್ಚಿನ ನಿಗಾ ವಹಿಸಬೇಕು. ಜಿಲ್ಲೆ ಕಳೆದ ಸಾಲಿನ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ 10ನೇ ಸ್ಥಾನದಲ್ಲಿತ್ತು. ಈ ಬಾರಿ ಮೊದಲ ಸ್ಥಾನಕ್ಕೆ ಬರಲು ಕ್ರಮ ವಹಿಸಬೇಕು ಎಂದು ಹೇಳಿದರು.ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಚ್.ಎಸ್. ಕೀರ್ತನಾ ಮಾತನಾಡಿ, ಎಸ್‌ಎಸ್‌ಎಲ್‌ಸಿ ಫಲಿತಾಂಶದ ವೃದ್ಧಿಗೆ ಶಿಕ್ಷಕರು ಹೆಚ್ಚಿನ ಗಮನ ಹರಿಸಬೇಕು. ವಿಶೇಷ ತರಗತಿ ತೆಗೆದುಕೊಳ್ಳಬೇಕಲ್ಲದೆ ಗುಂಪು ಚರ್ಚೆ, ಶಾಲಾ ಅವಧಿಯ ಮೊದಲು ಮತ್ತು ನಂತರ ಒಂದು ಗಂಟೆ ವಿಶೇಷ ತರಗತಿಗಾಗಿ ಮುಖ್ಯ ಶಿಕ್ಷಕರು ವಿಷಯವಾರು ವೇಳಾಪಟ್ಟಿ ರಚಿಸಬೇಕು. ಶಿಕ್ಷಕರು ಪ್ರತಿ ವಿದ್ಯಾರ್ಥಿಯ ವೈಯಕ್ತಿಕ ಕಡತ ನಿರ್ವಹಣೆ ಮಾಡಬೇಕು. ಕಿರು ಪರೀಕ್ಷೆ ನಡೆಸಬೇಕಲ್ಲದೆ. ಕಲಿಕೆಯಲ್ಲಿ ಹಿಂದುಳಿದ ಮಕ್ಕಳನ್ನು ಗುರುತಿಸಿ ಅವರಿಗೆ ವಿಶೇಷ ಗಮನಹರಿಸಬೇಕು. ಎಲ್ಲಾ ವಿಷಯದ ಶಿಕ್ಷಕರು ಅಧ್ಯಾಯ ಮಾಹಿತಿ ನಂತರ ಪ್ರಶ್ನೆಗಳ ಕೋರಿ ತಯಾರಿಸಿ ಮಕ್ಕಳನ್ನು ಸಜ್ಜುಗೊಳಿಸಬೇಕು. ಇಲಾಖೆ ಆಗಾಗ್ಗೆ ನೀಡುತ್ತಿರುವ ತರಬೇತಿಯಲ್ಲಿ ಪಡೆದ ಹೊಸ ತಂತ್ರಾಂಶಗಳನ್ನು ತರಗತಿಯಲ್ಲಿ ಬಳಸಬೇಕು ಎಂದು ಸಲಹೆ ನೀಡಿದರು.ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಜಿ.ಕೆ. ಪುಟ್ಟರಾಜು ಮಾತನಾಡಿದರು. ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಪುಟ್ಟಾನಾಯ್ಕ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು, ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರು ಹಾಜರಿದ್ದರು.

20 ಕೆಸಿಕೆಎಂ 2ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಶೇಕಡವಾರು 100 ರಷ್ಟು ಫಲಿತಾಂಶ ಬರಲು ಕಾರ್ಯಯೋಜನೆ ರೂಪಿಸಿಸುವ ಪ್ರೌಢ ಶಾಲಾ ಶಿಕ್ಷಕರ ಪೂರ್ವ ಸಿದ್ಧತಾ ಸಭೆ ನಡೆಯಿತು.