ಪ್ರತಿಭೆ ಹೊರತರುವ ನಿಟ್ಟಿನಲ್ಲಿ ಶಿಕ್ಷಕರು ಪ್ರಾಮಾಣಿಕವಾಗಿ ಪ್ರಯತ್ನಿಸಿ: ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್

| Published : Jul 24 2024, 12:24 AM IST

ಪ್ರತಿಭೆ ಹೊರತರುವ ನಿಟ್ಟಿನಲ್ಲಿ ಶಿಕ್ಷಕರು ಪ್ರಾಮಾಣಿಕವಾಗಿ ಪ್ರಯತ್ನಿಸಿ: ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್
Share this Article
  • FB
  • TW
  • Linkdin
  • Email

ಸಾರಾಂಶ

ಶೈಕ್ಷಣಿಕ ವಲಯದಲ್ಲಿ ದೈಹಿಕ ಶಿಕ್ಷಕರ ಕೊರತೆಯಿದ್ದರೂ ನಮ್ಮ ವಲಯದ ವಿದ್ಯಾರ್ಥಿಗಳು ರಾಜ್ಯಮಟ್ಟದಲ್ಲಿ ಪ್ರಶಸ್ತಿ ಪಡೆಯುತ್ತಿರುವುದು ಶ್ಲಾಘನೀಯ ಎಂದು ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್ ಮೆಚ್ಚುಗೆ ವ್ಯಕ್ತಪಡಿಸಿದರು. ಹನೂರಿನಲ್ಲಿ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.

ಹನೂರು: ಶೈಕ್ಷಣಿಕ ವಲಯದಲ್ಲಿ ದೈಹಿಕ ಶಿಕ್ಷಕರ ಕೊರತೆಯಿದ್ದರೂ ನಮ್ಮ ವಲಯದ ವಿದ್ಯಾರ್ಥಿಗಳು ರಾಜ್ಯಮಟ್ಟದಲ್ಲಿ ಪ್ರಶಸ್ತಿ ಪಡೆಯುತ್ತಿರುವುದು ಶ್ಲಾಘನೀಯ ಎಂದು ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್ ಮೆಚ್ಚುಗೆ ವ್ಯಕ್ತಪಡಿಸಿದರು.

ಹನೂರು ಪಟ್ಟಣದ ಶ್ರೀ ಮಹದೇಶ್ವರ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ 14 ವರ್ಷದೊಳಗಿನ ಹೋಬಳಿ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.ಹನೂರು ಶೈಕ್ಷಣಿಕ ವಲಯದ ವಿದ್ಯಾರ್ಥಿಗಳಲ್ಲಿ ಹಲವಾರು ಪ್ರತಿಭೆಗಳಿವೆ, ಆ ಪ್ರತಿಭೆಯನ್ನು ಹೊರ ತರುವ ನಿಟ್ಟಿನಲ್ಲಿ ಶಿಕ್ಷಕರು ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಪ್ರತಿಯೊಬ್ಬ ಶಿಕ್ಷಕರು ವಿದ್ಯಾರ್ಥಿಗಳು ಯಾವ ಕ್ರೀಡೆಯಲ್ಲಿ ಆಸಕ್ತಿ ವಹಿಸುತ್ತಾರೆ. ಆ ಕ್ರೀಡೆಗೆ ಅವರಿಗೆ ಹೆಚ್ಚಿನ ತರಬೇತಿ ನೀಡಿ ಕ್ರೀಡಾಕೂಟಕ್ಕೆ ಸಿದ್ಧಪಡಿಸಬೇಕು. ನಮ್ಮ ವಲಯದಲ್ಲಿ ವಿದ್ಯಾರ್ಥಿಗಳು ಸದೃಢವಾಗಿರುವುದರಿಂದ ತಾಲೂಕು ಜಿಲ್ಲೆ ಹಾಗೂ ರಾಜ್ಯ ಮಟ್ಟದಲ್ಲಿ ಪ್ರಶಸ್ತಿ ಪಡೆಯುತ್ತಿದ್ದಾರೆ. ಈ ವರ್ಷವೂ ಸಹ ನಮ್ಮ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡುತ್ತಾರೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

ಕ್ರೀಡೆಯಲ್ಲಿ ಸೋಲು ಗೆಲುವು ಸಾಮಾನ್ಯ. ಅದೇ ರೀತಿ ವಿದ್ಯಾರ್ಥಿಗಳು ಸೋತಾಗ ಕುಗ್ಗದೆ ಗೆದ್ದಾಗ ಹಿಗ್ಗದೆ ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮೂಲಕ ಕ್ರೀಡಾ ಮನೋಭಾವನೆ ಬೆಳೆಸಿಕೊಳ್ಳಬೇಕು. ಕ್ರೀಡಾಧಿಕಾರಿಗಳು ಎಲ್ಲಾ ವಿದ್ಯಾರ್ಥಿಗಳು ನಮ್ಮವರೇ ಎಂದು ತೀರ್ಪು ನೀಡಬೇಕು, ಕ್ರೀಡಾಕೂಟಕ್ಕೆ ವಿದ್ಯಾರ್ಥಿಗಳನ್ನು ಕರೆತಂದಿರುವ ಶಿಕ್ಷಕರು ಸುರಕ್ಷಿತವಾಗಿ ಶಾಲೆಗೆ ಬಿಡಬೇಕು ಎಂದು ಸೂಚನೆ ನೀಡಿದರು.

ಈ ವೇಳೆ ದೈಹಿಕ ಶಿಕ್ಷಣ ಪರಿವೀಕ್ಷಕ ಮಹಾದೇವ್, ಇಸಿಒಗಳಾದ ಕಿರಣ್, ಮಹೇಶ್, ಚಿನ್ನಪಯ್ಯ ಕಂದ ಮೇಲು ಸೇರಿದಂತೆ ದೈಹಿಕ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.