ತಾಲೂಕಿಗೆ ಆಗಮಿಸಿದ ನೂತನ ಕ್ಷೇತ್ರ ಶಿಕ್ಷಣಾಧಿಕಾರಿ ಸುರೇಂದ್ರ ಕಾಂಬಳೆ ಅವರನ್ನು ಅವರ ಕಚೇರಿಯಲ್ಲಿ ಕರ್ನಾಟಕ ರಾಜ್ಯ(6–8) ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ತಾಲೂಕ ಘಟಕದಿಂದ ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ನೂತನ ಬಿಇಒಗೆ ಪದಾಧಿಕಾರಿಗಳು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಮನವಿ ಪತ್ರ ಸಲ್ಲಿಸಿದರು.

ಕನ್ನಡಪ್ರಭ ವಾರ್ತೆ ಇಂಡಿ

ತಾಲೂಕಿಗೆ ಆಗಮಿಸಿದ ನೂತನ ಕ್ಷೇತ್ರ ಶಿಕ್ಷಣಾಧಿಕಾರಿ ಸುರೇಂದ್ರ ಕಾಂಬಳೆ ಅವರನ್ನು ಅವರ ಕಚೇರಿಯಲ್ಲಿ ಕರ್ನಾಟಕ ರಾಜ್ಯ(6–8) ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ತಾಲೂಕ ಘಟಕದಿಂದ ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ನೂತನ ಬಿಇಒಗೆ ಪದಾಧಿಕಾರಿಗಳು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಮನವಿ ಪತ್ರ ಸಲ್ಲಿಸಿದರು.

ಜಿಪಿಟಿ ಶಿಕ್ಷಕರಿಗಾಗಿ ಒಂದು ದಿನದ ಗುರುಸ್ಪಂದನ ಕಾರ್ಯಕ್ರಮ ಆಯೋಜಿಸಿ, ಶಿಕ್ಷಕರಿಗೆ ತಮ್ಮ ಸೇವಾ ಪುಸ್ತಕ ಪರಿಶೀಲಿಸಲು ಹಾಗೂ ಸೇವಾ ದಾಖಲೆಗಳಲ್ಲಿನ ಸಮಸ್ಯೆ ಸರಿಪಡಿಸಿಕೊಳ್ಳಲು ಅವಕಾಶ ಕಲ್ಪಿಸಿಕೊಡುವದು, ಮತ್ತು ಬೇಸಿಗೆ ರಜಾ ಅವಧಿಯಲ್ಲಿ ಜನಗಣತಿ ಕಾರ್ಯ ನಿರ್ವಹಿಸಿದ ಶಿಕ್ಷಕರಿಗೆ ನಿಯಮಾನುಸಾರ ಗಳಿಕೆ ರಜೆ ಮಂಜೂರು ಮಾಡುವ ಪ್ರಕ್ರಿಯೆಯನ್ನು ಶೀಘ್ರವಾಗಿ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.

ಮನವಿ ಸ್ವೀಕರಿಸಿ ಮಾತನಾಡಿದ ಬಿಇಓ ಸುರೇಂದ್ರ ಕಾಂಬಳೆ, ಶಿಕ್ಷಕರ ಸಮಸ್ಯೆಗಳನ್ನು ಆದಷ್ಟು ಬೇಗ ಪರಿಹರಿಸಲು ಹಾಗೂ ಅರ್ಹ ಶಿಕ್ಷಕರಿಗೆ ದೊರೆಯಬೇಕಾದ ಸೇವಾ ಸೌಲಭ್ಯಗಳನ್ನು ವಿಳಂಬವಿಲ್ಲದೆ ಮಂಜೂರು ಮಾಡಲು ಕ್ರಮವಹಿಸುವುದಾಗಿ ತಿಳಿಸಿದರು. ಇಂಡಿ ತಾಲೂಕಿನ ಪ್ರಾಥಮಿಕ ಶಾಲೆಗಳ ಮಕ್ಕಳ ಶೈಕ್ಷಣಿಕ ಪ್ರಗತಿಯಲ್ಲಿ ಜಿಪಿಟಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಮಕ್ಕಳ ಶೈಕ್ಷಣಿಕ ಅಭಿವೃದ್ಧಿ ಹಾಗೂ ಇಲಾಖೆಯ ಎಲ್ಲಾ ಯೋಜನೆಗಳ ಯಶಸ್ವಿ ಅನುಷ್ಠಾನಕ್ಕೆ ಶಿಕ್ಷಕರು ಸದಾ ಸಹಕಾರ ನೀಡುವಂತೆ ತಿಳಿಸಿದರು.

ಶಿಕ್ಷಣ ಸಂಯೋಜಕ ಎ.ಸಿ.ಹುಣಸಗಿ, ಎ.ಜಿ.ಚೌಧರಿ, ಜಿಪಿಟಿ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಹಕಾರಿ, ಇಂಡಿ ತಾಲೂಕಾ ಎಸ್ಸಿ, ಎಸ್ಟಿ ನೌಕರರ ಸಂಘದ ಅಧ್ಯಕ್ಷ ಆರ್.ಸಿ.ವಠಾರ, ಜಿಪಿಟಿ ಸಂಘದ ತಾಲೂಕ ಪ್ರಧಾನ ಕಾರ್ಯದರ್ಶಿ ಪ್ರಭುಲಿಂಗ ಕವಟಗಿ, ಖಜಾಂಚಿ ಸಿದ್ದರಾಮ ದಾಬೆ, ಉಪಾಧ್ಯಕ್ಷ ಎನ್.ಸಿ.ಪುಟಾಣಿ, ಜಿಪಿಟಿ ಶಿಕ್ಷಕರ ಸೊಸೈಟಿಯ ಅಧ್ಯಕ್ಷ ಶಶಿಕುಮಾರ ವಡ್ಡರ, ಶಿಕ್ಷಕರಾದ ಸಂತೋಷ ಬಂಡೆ, ಪ್ರಭು ನಾದ, ಹನಮಂತರಾಯ ಪೂಜಾರಿ, ಎಚ್.ಸಿ.ಇಂಗಳಗಿ, ಅಕ್ಷಯ ಸೇಗಾವಿ, ಯುವರಾಜ ಪಡಗಾನವರ, ಪ್ರಶಾಂತ ಹದರಿ, ರಾಜಕುಮಾರ ಬೆಣ್ಣೆಸೂರ, ಪರಶುರಾಮ ತಳವಾರ, ಉಮೇಶ ಭಜಂತ್ರಿ, ಮಲಸಿದ್ದಪ್ಪ ತಡ್ಲಗಿ, ನೇತ್ರಾವತಿ ಖವಟಗಿ ಸೇರಿದಂತೆ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.