ಜಗತ್ತಿನಲ್ಲಿ ಶಿಕ್ಷಕ ವೃತ್ತಿ ಶ್ರೇಷ್ಠ ವೃತ್ತಿ: ಡಾ.ಮೋಹನ ಭಸ್ಮೆ

| Published : Sep 06 2024, 01:01 AM IST

ಜಗತ್ತಿನಲ್ಲಿ ಶಿಕ್ಷಕ ವೃತ್ತಿ ಶ್ರೇಷ್ಠ ವೃತ್ತಿ: ಡಾ.ಮೋಹನ ಭಸ್ಮೆ
Share this Article
  • FB
  • TW
  • Linkdin
  • Email

ಸಾರಾಂಶ

ಜಗತ್ತಿನಲ್ಲಿ ಶಿಕ್ಷಕ ವೃತ್ತಿ ಅತ್ಯಂತ ಶ್ರೇಷ್ಠವಾದುದು ಎಂದು ತಹಸೀಲ್ದಾರ್‌ ಡಾ.ಮೋಹನ ಭಸ್ಮೆ ಹೇಳಿದರು. ಗುರುವಾರ ನಗರದ ಮಹಾಲಕ್ಷ್ಮೀ ಸಭಾಭವನದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಗುರುವಾರ ಹಮ್ಮಿಕೊಂಡ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ 137ನೇ ಜನ್ಮದಿನಾಚರಣೆ ಸಮಾರಂಭದಲ್ಲಿ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಗೋಕಾಕ

ಜಗತ್ತಿನಲ್ಲಿ ಶಿಕ್ಷಕ ವೃತ್ತಿ ಅತ್ಯಂತ ಶ್ರೇಷ್ಠವಾದುದು ಎಂದು ತಹಸೀಲ್ದಾರ್‌ ಡಾ.ಮೋಹನ ಭಸ್ಮೆ ಹೇಳಿದರು.

ಗುರುವಾರ ನಗರದ ಮಹಾಲಕ್ಷ್ಮೀ ಸಭಾಭವನದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಗುರುವಾರ ಹಮ್ಮಿಕೊಂಡ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ 137ನೇ ಜನ್ಮದಿನಾಚರಣೆ ಸಮಾರಂಭದಲ್ಲಿ ಮಾತನಾಡಿದರು.

ಶಿಕ್ಷಕರು ರಾಷ್ಟ್ರನಿರ್ಮಾಣದ ಶಿಲ್ಪಿಗಳಾಗಿದ್ದಾರೆ. ಸಮಾಜದ ಅಂಧಕಾರ, ಮೌಢ್ಯಗಳನ್ನು ದೂರಮಾಡಿ ಸಂಸ್ಕಾರ, ಸಂಸ್ಕೃತಿಯ ಬೆಳಕನ್ನು ಬೆಳಗಿಸಬಲ್ಲ ಶಕ್ತಿ ಶಿಕ್ಷಕರಿಗೆ ಮಾತ್ರ ಇದೆ. ಮಕ್ಕಳಲ್ಲಿಯ ಅಜ್ಞಾನ ದೂರ ಮಾಡಿ ಅವರನ್ನು ಜ್ಞಾನದ ಬೆಳಕಿನತ್ತ ಕೊಂಡೊಯ್ದು ಸಮರ್ಥ ನಾಯಕತ್ವ ಗುಣ ಬೆಳೆಸಬಲ್ಲ ವ್ಯಕ್ತಿ ಗುರುವಿನಲ್ಲಿದ್ದು, ಅದಕ್ಕಾಗಿ ಆದರ್ಶ ಶಿಕ್ಷಕ ಡಾ. ಸರ್ವಪಲ್ಲಿ ರಾಧಾಕೃಷ್ಣನ್‌ ಅವರ ಜಯಂತಿಯನ್ನು ಶಿಕ್ಷಕರ ದಿನಾಚರಣೆಯನ್ನಾಗಿ ರಾಷ್ಟ್ರದಾದ್ಯಂತ ಆಚರಿಸುತ್ತಿರುವುದು ಹೆಮ್ಮೆಯ ವಿಷಯ ಎಂದರು.

ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಕಾರ್ಯಕ್ರಮ ಉದ್ಘಾಟಿಸಿದರು. ಬೆಳಗ್ಗೆ ಕ್ಷೇತ್ರಶಿಕ್ಷಣಾಧಿಕಾರಿಗಳ ಕಾರ್ಯಾಲಯದಲ್ಲಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್‌ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಬಸವೇಶ್ವರ ವೃತ್ತದ ಮೂಲಕ ಸಮಾರಂಭದ ವೇದಿಕೆಯವರೆಗೆ ಭಾವಚಿತ್ರದ ಮೆರವಣಿಗೆ ನಡೆಸಲಾಯಿತು. ನಿವೃತ್ತ ಶಿಕ್ಷಕರು ಹಾಗೂ ಕ್ರೀಯಾಶೀಲ ಶಿಕ್ಷಕರನ್ನು ಸನ್ಮಾನಿಸಿ ಗೌರವಿಸಲಾಯಿತು.

ನಗರಸಭೆ ಅಧ್ಯಕ್ಷ ಪ್ರಕಾಶ ಮುರಾರಿ, ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಬಿ. ಬಳಗಾರ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಪರಶುರಾಮ ಗಸ್ತಿ, ವಿವಿಧ ಇಲಾಖೆಯ ಅಧಿಕಾರಿಗಳಾದ ಎಸ್.ಬಿ. ಕುಡುಒಕ್ಕಲಿಗ, ಡಾ.ಮೋಹನ ಕಮತ, ಎ.ಬಿ. ಮಲಬನ್ನವರ, ಎಫ್.ಮೇಟಿ, ಎಂ.ಎಂ. ನದಾಫ್‌, ಬಸವರಾಜ ಮಾಲದಿನ್ನಿ, ಎಸ್.ವಿ. ಕುಲಕರ್ಣಿ, ಇಮ್ರಾನ್‌ಬೇಗ ಮುಲ್ಲಾ, ಬಸವರಾಜ ಮುರಗೋಡ, ಎಲ್‌.ಕೆ. ತೋರಣಗಟ್ಟಿ, ಜೀಯಾ ಸನದಿ, ಎಂ.ಎಂ. ಕುಡೋಲಿ, ಮಹಾದೇವಿ ಬಾಗೆನ್ನವರ, ಎನ್ ಎಸ್ ಬಾಗಡಿ ಇತರರು ಇದ್ದರು.