ಸಾರಾಂಶ
ತಾಲೂಕಿನ ಹುಣಶ್ಯಾಳ ಪಿಬಿ ಗ್ರಾಮದ ಬಡಾವಣೆಯ ಸರ್ಕಾರಿ ಹಿರಿಯ ಕನ್ನಡ ಗಂಡು ಮಕ್ಕಳ ಪ್ರಾಥಮಿಕ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಶಿಕ್ಷಕಿ ಎ.ಎಂ.ಸಗರನಾಳ ಅವರು ಸೇವಾ ನಿವೃತ್ತಿ ಹೊಂದಿದ ಪ್ರಯುಕ್ತ ಜರುಗಿದ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.
ಬಸವನಬಾಗೇವಾಡಿ:
ತಾಲೂಕಿನ ಹುಣಶ್ಯಾಳ ಪಿಬಿ ಗ್ರಾಮದ ಬಡಾವಣೆಯ ಸರ್ಕಾರಿ ಹಿರಿಯ ಕನ್ನಡ ಗಂಡು ಮಕ್ಕಳ ಪ್ರಾಥಮಿಕ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಶಿಕ್ಷಕಿ ಎ.ಎಂ.ಸಗರನಾಳ ಅವರು ಸೇವಾ ನಿವೃತ್ತಿ ಹೊಂದಿದ ಪ್ರಯುಕ್ತ ಜರುಗಿದ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಮಲ್ಲಿಕಾರ್ಜುನ ರಾಜನಾಳ ಮಾತನಾಡಿದ ಅವರು, ಸಮಾಜದಲ್ಲಿ ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾದದ್ದು. ಇಂತಹ ವೃತ್ತಿಯಲ್ಲಿ ಪ್ರಾಮಾಣಿಕ ಸೇವೆ ಸಲ್ಲಿಸಿ ಮಕ್ಕಳಿಗೆ ಒಳ್ಳೆಯ ಶಿಕ್ಷಣ ನೀಡಿ ತಮ್ಮ ಸೇವೆಯನ್ನು ನಿಷ್ಠೆಯಿಂದ ಸೇವೆ ಸಲ್ಲಿಸಿ ಮಕ್ಕಳ ಬದುಕಿಗೆ ಎ.ಎಂ ಸಗರನಾಳ ಅವರು ಬೆಳಕು ಚೆಲ್ಲಿದ್ದಾರೆ. ಅವರ ಸೇವೆ ಮಾದರಿಯಾಗಿದೆ ಎಂದು ತಿಳಿಸಿದರು.
ಎಚ್.ಬಿ.ಬಾರಿಕಾಯಿ ಮಾತನಾಡಿ, ಸೇವಾ ನಿವೃತ್ತಿ ಹೊಂದಿದ ಗುರುಮಾತೆ ಅಮರಾವತಿ ಸಗರನಾಳ ಅವರು 35 ವರ್ಷ ಈ ಶಾಲೆಯಲ್ಲಿ ಮಕ್ಕಳಿಗೆ ಶಿಕ್ಷಣ ನೀಡುವುದರೊಂದಿಗೆ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಮಕ್ಕಳು ಪಾಲ್ಗೊಳ್ಳಲು ಪ್ರೋತ್ಸಾಹಿಸಿ ಉತ್ತಮ ಶಿಕ್ಷಕರಾಗಿ ಕಾರ್ಯ ನಿರ್ವಹಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.ಸನ್ಮಾನ ಸ್ವೀಕರಿಸಿದ ಸೇವಾ ನಿವೃತ್ತಿ ಹೊಂದಿದ ಎ.ಎಂ.ಸಗರನಾಳ ಮಾತನಾಡಿದರು. ಶಿಕ್ಷಣ ಇಲಾಖೆಯ ತನಿಖಾಧಿಕಾರಿ ಈರಣ್ಣ ಜುಳು ಜುಳೆ, ಪ್ರವಚನಕಾರ ಗುಂಡಪ್ಪ ಶಾಸ್ತ್ರಿ ಆಲೂರು, ಪ್ರವಚನಕಾರ ಶಿವಪುತ್ರ ಹೆಬ್ಬಾಳ, ಶರಣಪ್ಪ ಮಾದರ, ಲಕ್ಷ್ಮಿ ಗಾಳೆಪ್ಪಗೊಳ, ಡಾ.ಬಸವರಾಜ ಹಡಪದ, ಎಂ.ಬಿ.ಪತ್ತಾರ, ಡಾ.ಅಮರೇಶ ಮಿಣಜಗಿ, ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷರು, ಪದಾಧಿಕಾರಿಗಳು ಊರಿನ ಹಿರಿಯರು ಶಿಕ್ಷಣ ಪ್ರೇಮಿಗಳು ಶಾಲೆಯ ಮುಖ್ಯಗುರು ಮಾತೆಯರು, ಸಿಬ್ಬಂದಿ ವರ್ಗ ಮತ್ತು ಮಕ್ಕಳು ,ಪಾಲಕರು, ಪೋಷಕರು ಕಾರ್ಯಕ್ರಮದಲ್ಲಿ ಇದ್ದರು.
ಇದೇ ಶಾಲೆಯಲ್ಲಿ ಕಲಿತು ಇದೇ ಗುರುಮಾತೆಯರಿಂದ ಶಿಕ್ಷಣ ಪಡೆದ ಡಾ.ಬಸವರಾಜ ಹಡಪದ ವಿದ್ಯಾರ್ಥಿಯು ಡಾಕ್ಟರೇಟ್ ಪದವಿ ಪಡೆದು ಶಾಲೆಗೆ ಕೀರ್ತಿ ತಂದು ಗುರುಮಾತೆಯರ ಪ್ರೀತಿಗೆ ಪಾತ್ರರಾಗಿದ್ದಾರೆ. ಇದೇ ಸಂದರ್ಭದಲ್ಲಿ ಅವರನ್ನು ಸನ್ಮಾನಿಸಲಾಯಿತು.;Resize=(128,128))
;Resize=(128,128))
;Resize=(128,128))
;Resize=(128,128))