ಅಧಿಕಾರ ದುರುಪಯೋಗ ಹಾಗೂ ನಿಯಮ ಉಲ್ಲಂಘನೆ ಸೇರಿದಂತೆ ಯಾವುದೇ ಅಕ್ರಮ ನಡೆದಿದೆಯೇ ಎಂಬುದನ್ನು ಸಮಗ್ರವಾಗಿ ಪರಿಶೀಲಿಸಲು ಚಿಕ್ಕಬಳ್ಳಾಪುರ ಉಪವಿಭಾಗಾಧಿಕಾರಿ ಡಿ.ಎಚ್.ಅಶ್ವಿನ್ ರ ಅಧ್ಯಕ್ಷತೆಯಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಎ.ಎಸ್.ಮಂಜುನಾಥ್ ಮತ್ತು ಚಿಕ್ಕಬಳ್ಳಾಪುರ ನಗರ ಯೋಜನಾ ಪ್ರಾಧಿಕಾರದ ಆಯುಕ್ತೆ ಶಿಲ್ಪದೇಸಾಯಿ ರವರನ್ನು ಸದಸ್ಯರನ್ನಾಗಿ ನೇಮಿಸಿ ತ್ರಿಸದಸ್ಯರ ತನಿಖಾ ತಂಡವನ್ನು ಜಿಲ್ಲಾಧಿಕಾರಿಗಳು ರಚಿಸಿದ್ದಾರೆ. ಸದರಿ ತಂಡವು ಪ್ರಕರಣದ ಕುರಿತು ಕೂಲಂಕಷವಾಗಿ ತನಿಖೆ ನಡೆಸಿ 24 ಗಂಟೆಗಳ ಒಳಗಾಗಿ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ.
ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ಚಿಕ್ಕಬಳ್ಳಾಪುರ ತಾಲೂಕಿನ ಪಟ್ರೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಅಣಕನೂರು ಗ್ರಾಮದ ಸುಮಾರು 24 ಎಕರೆ ಜಮೀನಿಗೆ, ನಗರಸಭೆ ವ್ಯಾಪ್ತಿಗೆ ಸೇರದಿದ್ದರೂ ಚಿಕ್ಕಬಳ್ಳಾಪುರ ನಗರಸಭೆಯ ಆಸ್ತಿ ಸಂಖ್ಯೆ 820/755 ಎಂದು ನಮೂದಿಸಿ ಇ-ಖಾತೆ ಮಾಡಿರುವ ವಿಷಯವು ಮಾಧ್ಯಮಗಳ ವರದಿ ಹಾಗೂ ನಗರಸಭೆ ಮಾಜಿ ಸದಸ್ಯ ಅಮೀರ್ ಮೊಹಮದ್ ಸಾಧಿಕ್ ರವರ ದೂರು ಅರ್ಜಿಯ ಮೂಲಕ ಜಿಲ್ಲಾಡಳಿತದ ಗಮನಕ್ಕೆ ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಭೂ ಕಬಳಿಕೆ, ಕರ್ತವ್ಯ ಲೋಪ, ಅಧಿಕಾರ ದುರುಪಯೋಗ ಹಾಗೂ ನಿಯಮ ಉಲ್ಲಂಘನೆ ಸೇರಿದಂತೆ ಯಾವುದೇ ಅಕ್ರಮ ನಡೆದಿದೆಯೇ ಎಂಬುದನ್ನು ಸಮಗ್ರವಾಗಿ ಪರಿಶೀಲಿಸಲು ಚಿಕ್ಕಬಳ್ಳಾಪುರ ಉಪವಿಭಾಗಾಧಿಕಾರಿ ಡಿ.ಎಚ್.ಅಶ್ವಿನ್ ರ ಅಧ್ಯಕ್ಷತೆಯಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಎ.ಎಸ್.ಮಂಜುನಾಥ್ ಮತ್ತು ಚಿಕ್ಕಬಳ್ಳಾಪುರ ನಗರ ಯೋಜನಾ ಪ್ರಾಧಿಕಾರದ ಆಯುಕ್ತೆ ಶಿಲ್ಪದೇಸಾಯಿ ರವರನ್ನು ಸದಸ್ಯರನ್ನಾಗಿ ನೇಮಿಸಿ ತ್ರಿಸದಸ್ಯರ ತನಿಖಾ ತಂಡವನ್ನು ಜಿಲ್ಲಾಧಿಕಾರಿಗಳು ರಚಿಸಿದ್ದಾರೆ. ಸದರಿ ತಂಡವು ಪ್ರಕರಣದ ಕುರಿತು ಕೂಲಂಕಷವಾಗಿ ತನಿಖೆ ನಡೆಸಿ 24 ಗಂಟೆಗಳ ಒಳಗಾಗಿ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ.