ಮಡಿಕೇರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮಗ್ರ ಬುಡಕಟ್ಟು ಅಭಿವೃದ್ಧಿ ಇಲಾಖೆ, ವಿಶೇಷ ಮಕ್ಕಳ ಪೊಲೀಸ್ ಘಟಕ, ಅಕ್ಕಪಡೆ ಹಾಗೂ ಹಾಡಿ ಬುಡಕಟ್ಟು ಸಮುದಾಯದ ಮುಖಂಡರ ಸಹಯೋಗದಲ್ಲಿ ವಿವಿಧ ಇಲಾಖೆಗಳ ಸಿಬ್ಬಂದಿಗಳ ತಂಡವು ಕೆ.ಬಾಡಗ ಗ್ರಾಮ ಪಂಚಾಯಿತಿಯ ಹೊಸಕೊಲ್ಲಿ ಹಾಡಿಗೆ ಭೇಟಿ ನೀಡಿ, ಹಾಡಿ ಸಮುದಾಯದ ಜನರಲ್ಲಿ ಜಾಗೃತಿ ಮೂಡಿಸಿತು.
ಫೋಕ್ಸೋ ಕಾಯ್ದೆ, ಬಾಲ್ಯ ವಿವಾಹದಿಂದ ಉಂಟಾಗುವ ಪರಿಣಾಮಗಳು, ಮಹಿಳೆಯರ ಮೇಲಿನ ಕೌಟುಂಬಿಕ ದೌರ್ಜನ್ಯ ಸೇರಿದಂತೆ ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗೆ ಲಭ್ಯವಿರುವ ವಿವಿಧ ಸಹಾಯವಾಣಿ ಹಾಗೂ ಸೇವೆಗಳ ಕುರಿತು ಮಾಹಿತಿ ನೀಡಲಾಯಿತು. ಭೇಟಿಯ ಸಂದರ್ಭದಲ್ಲಿ ಹಾಡಿಯಲ್ಲಿ ಬಸ್ ವ್ಯವಸ್ಥೆಯ ಕೊರತೆಯಿಂದಾಗಿ ಕೆಲವು ಮಕ್ಕಳು ಶಾಲೆಯಿಂದ ಹೊರಗುಳಿದಿರುವುದು ಅಧಿಕಾರಿಗಳ ಗಮನಕ್ಕೆ ಬಂದಿತು. ಬಳಿಕ ಇಲಾಖೆಯ ಅಧಿಕಾರಿಗಳ ತಂಡವು ಸಮಗ್ರ ಬುಡಕಟ್ಟು ಅಭಿವೃದ್ಧಿ ಇಲಾಖೆಯ ಅಧಿಕಾರಿಗಳ ಸಹಯೋಗದೊಂದಿಗೆ ಮಕ್ಕಳನ್ನು ಆಶ್ರಮ ಶಾಲೆಗೆ ದಾಖಲಿಸುವ ಕ್ರಮ ಕೈಗೊಂಡಿತು. ಹಾಡಿಯ ಯುವತಿಯರು ಹಾಗೂ ಮಹಿಳೆಯರು ಕೌಶಲ್ಯಾಧಾರಿತ ತರಬೇತಿ ಪಡೆಯಲು ಆಸಕ್ತಿ ವ್ಯಕ್ತಪಡಿಸಿದರು. ಈ ಹಿನ್ನೆಲೆಯಲ್ಲಿ ಸಂಬಂಧಿಸಿದ ಇಲಾಖೆಗಳೊಂದಿಗೆ ಚರ್ಚಿಸಿ, ಅವರಿಗೆ ಅಗತ್ಯವಿರುವ ಕೌಶಲ್ಯಾಧಾರಿತ ತರಬೇತಿ ನೀಡಲು ಕ್ರಮ ಕೈಗೊಳ್ಳಲು ನಿರ್ಧರಿಸಲಾಯಿತು. ಅಂಬೇಡ್ಕರ್ ಸೇವಾ ಸಮಿತಿಯ ಕೊಡಗು ಜಿಲ್ಲಾ ಅಧ್ಯಕ್ಷ ಜಗದೀಶ್, ವಿಶೇಷ ಮಕ್ಕಳ ಪೊಲೀಸ್ ಘಟಕದ ಎಎಸ್‍ಐ ಸುಮತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಹಿಳಾ ಸಬಲೀಕರಣ ಘಟಕದ ಜೆಂಡರ್ ಸ್ಪೆಷಲಿಸ್ಟ್ ಕೇಶಿನಿ ಎಸ್.ಆರ್., ಆಶ್ರಮ ಶಾಲೆಯ ಶಿಕ್ಷಕ ಪ್ರಶಾಂತ್ ಹಾಗೂ ಅಕ್ಕಪಡೆ ತಂಡದ ಸಿಬ್ಬಂದಿ ಕುಮಾರಿ ಮತ್ತು ಪವಿತ್ರ ಉಪಸ್ಥಿತರಿದ್ದರು.ಹೊಸಕೊಲ್ಲಿ ಹಾಡಿಗೆ ವಿವಿಧ ಇಲಾಖೆಯ ತಂಡ ಭೇಟಿ
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮಗ್ರ ಬುಡಕಟ್ಟು ಅಭಿವೃದ್ಧಿ ಇಲಾಖೆ, ವಿಶೇಷ ಮಕ್ಕಳ ಪೊಲೀಸ್ ಘಟಕ, ಅಕ್ಕಪಡೆ ಹಾಗೂ ಹಾಡಿ ಬುಡಕಟ್ಟು ಸಮುದಾಯದ ಮುಖಂಡರ ಸಹಯೋಗದಲ್ಲಿ ವಿವಿಧ ಇಲಾಖೆಗಳ ಸಿಬ್ಬಂದಿಗಳ ತಂಡವು ಕೆ.ಬಾಡಗ ಗ್ರಾಮ ಪಂಚಾಯಿತಿಯ ಹೊಸಕೊಲ್ಲಿ ಹಾಡಿಗೆ ಭೇಟಿ ನೀಡಿ, ಹಾಡಿ ಸಮುದಾಯದ ಜನರಲ್ಲಿ ಜಾಗೃತಿ ಮೂಡಿಸಿತು.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.