ಗಣತಿ ಕಾರ್ಯಕ್ಕೆ ಅಡ್ಡಿಯಾದ ತಾಂತ್ರಿಕ ಸಮಸ್ಯೆ

| Published : Sep 27 2025, 12:00 AM IST

ಗಣತಿ ಕಾರ್ಯಕ್ಕೆ ಅಡ್ಡಿಯಾದ ತಾಂತ್ರಿಕ ಸಮಸ್ಯೆ
Share this Article
  • FB
  • TW
  • Linkdin
  • Email

ಸಾರಾಂಶ

ಶೈಕ್ಷಣಿಕ ಮತ್ತು ಆರ್ಥಿಕ ಗಣತಿ ಕಾರ್ಯ ತಾಂತ್ರಿಕ ಸಮಸ್ಯೆಗಳಿಂದ ಸರಿಯಾಗಿ ನeಡಯುತ್ತಿಲ್ಲ ಎಂದು ಶಿಕ್ಷಕರ ಸಂಘದ ಪ್ರತಿನಿಧಿಗಳು ಈ ಬಗ್ಗೆ ತಹಸೀಲ್ದಾರರನ್ನು ಭೇಟಿ ಮಾಡಿ ಅಹವಾಲು ಸಲ್ಲಿಸಿದರು. ಅಲ್ಲದೇ ಶಿಕ್ಷಕರನ್ನು ತಮ್ಮ ಕರ್ತವ್ಯ ಪ್ರದೇಶದಲ್ಲಿಲ್ಲದೆ ದೂರದ ಹಳ್ಳಿಗಳಿಗೆ ನಿಯೋಜಿಸಿರುವುದು ಇನ್ನೊಂದು ಅಸಮಾಧಾನಕ್ಕೆ ಕಾರಣವಾಗಿದೆ. ನಿವೃತ್ತಿ ಅಂಚಿನಲ್ಲಿರುವವರು, ಗರ್ಭಿಣಿಯರು ಹಾಗೂ ರೋಗಿಗಳಿಗೂ ಗಣತಿ ಕಾರ್ಯವನ್ನು ಹಂಚಿರುವುದು ಶಿಕ್ಷಕರಲ್ಲಿ ತೀವ್ರ ಅಸಮಾಧಾನ ಮೂಡಿಸಿದೆ ಎಂದು ವಿವರಿಸಿದರು.

ಅರಸೀಕೆರೆ: ತಾಲೂಕಿನಲ್ಲಿ ನಡೆಯುತ್ತಿರುವ ಶೈಕ್ಷಣಿಕ ಮತ್ತು ಆರ್ಥಿಕ ಗಣತಿ ಕಾರ್ಯ ತಾಂತ್ರಿಕ ಸಮಸ್ಯೆಗಳಿಂದ ಸರಿಯಾಗಿ ನeಡಯುತ್ತಿಲ್ಲ ಎಂದು ಶಿಕ್ಷಕರ ಸಂಘದ ಪ್ರತಿನಿಧಿಗಳು ಈ ಬಗ್ಗೆ ತಹಸೀಲ್ದಾರರನ್ನು ಭೇಟಿ ಮಾಡಿ ಅಹವಾಲು ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಬಸವರಾಜ್, ಗಣತಿ ಕಾರ್ಯದಲ್ಲಿ ಹಲವು ತಾಂತ್ರಿಕ ಅಡಚಣೆಗಳು ಎದುರಾಗುತ್ತಿವೆ. ಮನೆ ಮನೆಗೆ ಅಂಟಿಸಲಾದ ಚೆಸ್ಕಾಂ ಚೀಟಿಗಳ ಅನುಸಾರ ಹೋದರೂ ಕ್ರಮವಾಗಿ ಮನೆಗಳನ್ನು ಪತ್ತೆಹಚ್ಚುವುದು ಕಷ್ಟವಾಗುತ್ತಿದೆ. ಸರ್ವರ್ ಸಮಸ್ಯೆಯಿಂದಾಗಿ ಗಣತಿ ಕಾರ್ಯ ನಿಧಾನಗತಿಯಲ್ಲಿ ಸಾಗುತ್ತಿದೆ. ಜೊತೆಗೆ, ಶಿಕ್ಷಕರನ್ನು ತಮ್ಮ ಕರ್ತವ್ಯ ಪ್ರದೇಶದಲ್ಲಿಲ್ಲದೆ ದೂರದ ಹಳ್ಳಿಗಳಿಗೆ ನಿಯೋಜಿಸಿರುವುದು ಇನ್ನೊಂದು ಅಸಮಾಧಾನಕ್ಕೆ ಕಾರಣವಾಗಿದೆ. ನಿವೃತ್ತಿ ಅಂಚಿನಲ್ಲಿರುವವರು, ಗರ್ಭಿಣಿಯರು ಹಾಗೂ ರೋಗಿಗಳಿಗೂ ಗಣತಿ ಕಾರ್ಯವನ್ನು ಹಂಚಿರುವುದು ಶಿಕ್ಷಕರಲ್ಲಿ ತೀವ್ರ ಅಸಮಾಧಾನ ಮೂಡಿಸಿದೆ ಎಂದು ವಿವರಿಸಿದರು.

ತಾಲೂಕಿನಲ್ಲಿ ಒಟ್ಟು 87 ಸಾವಿರಕ್ಕೂ ಹೆಚ್ಚು ಕುಟುಂಬಗಳಿದ್ದು, 816 ಗಣತಿದಾರರು ಕಾರ್ಯನಿರ್ವಹಿಸಲಿದ್ದಾರೆ. ಮನೆಗೆ ಬರುವ ಗಣತಿದಾರರಿಗೆ ಸಾರ್ವಜನಿಕರು ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ ಮತ್ತು ರೇಷನ್ ಕಾರ್ಡ್ ಹಾಜರುಪಡಿಸಿ ಸಹಕರಿಸಬೇಕೆಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.ಈ ಸಂದರ್ಭದಲ್ಲಿ ತಾಲೂಕು ಶಿಕ್ಷಕರ ಸಂಘದ ಅಧ್ಯಕ್ಷ ಸದಾನಂದಮೂರ್ತಿ ಹಾಗೂ ಶಿಕ್ಷಕರ ಸಂಘದ ಉಪಾಧ್ಯಕ್ಷ ಹಾಲಪ್ಪ ಹಾಗೂ ಶಿಕ್ಷಕರು ಪಾಲ್ಗೊಂಡಿದ್ದರು.