ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದಲ್ಲಿ ‘ಟೆಕ್ನೋ 25’

| Published : Mar 11 2025, 12:48 AM IST

ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದಲ್ಲಿ ‘ಟೆಕ್ನೋ 25’
Share this Article
  • FB
  • TW
  • Linkdin
  • Email

ಸಾರಾಂಶ

ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಎಂ.ಸಿ.ಎ ವಿಭಾಗವು ಉಡುಪಿಯ ಥಾಟ್ ಗ್ರೈನ್ಸ್ ಸೊಲ್ಯೂಶನ್ಸ್ ಸಹಯೋಗದಲ್ಲಿ ಇತ್ತೀಚೆಗೆ ಇಂಟರ್‌ ಕಾಲೇಜಿಯಟ್ ಟೆಕ್ನಿಕಲ್ ಸ್ಪರ್ಧಾ ಕಾರ್ಯಕ್ರಮ ‘ಟೆಕ್-ನೋ ೨೫’ ಆಯೋಜಿಸಿತ್ತು.

ಕನ್ನಡಪ್ರಭ ವಾರ್ತೆ ಕಾರ್ಕಳ

ತಂತ್ರಜ್ಞಾನ ಕ್ಷೇತ್ರದಲ್ಲಿ ಹೊಸ ಅವಕಾಶಗಳನ್ನು ಹೇಗೆ ಬಾಚಿಕೊಳ್ಳಬೇಕು ಎಂಬುದನ್ನು ವಿದ್ಯಾರ್ಥಿಗಳು ಅಭ್ಯಸಿಸಬೇಕು. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ, ವಿದ್ಯಾಲಯಕ್ಕೆ ಹಾಗೂ ವಿವಿಧ ಕಂಪನಿಗಳಿಗೆ ಪ್ರಯೋಜನಕಾರಿ ಯೋಜನೆ ರೂಪಿಸುವ ಚಿಂತನೆ ನಡೆಸಲಾಗುತ್ತಿದೆ ಎಂದು ಥಾಟ್ ಗ್ರೈನ್ಸ್ ಸೊಲ್ಯೂಶನ್ಸ್ ಉಡುಪಿ ಸಂಸ್ಥೆಯ ಸಹಸ್ಥಾಪಕ ಹಾಗೂ ಸಿಇಒ ಅರುಣಾಚಲ ಶೆಟ್ಟಿ ಹೇಳಿದ್ದಾರೆ.

ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಎಂ.ಸಿ.ಎ ವಿಭಾಗವು ಉಡುಪಿಯ ಥಾಟ್ ಗ್ರೈನ್ಸ್ ಸೊಲ್ಯೂಶನ್ಸ್ ಸಹಯೋಗದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಇಂಟರ್‌ ಕಾಲೇಜಿಯಟ್ ಟೆಕ್ನಿಕಲ್ ಸ್ಪರ್ಧಾ ಕಾರ್ಯಕ್ರಮ ‘ಟೆಕ್-ನೋ ೨೫’ ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಪಠ್ಯಕ್ರಮದಾಚೆಗೆ ಚಿಂತನೆ ಮಾಡುವುದು ಹಾಗೂ ತಂತ್ರಜ್ಞಾನ ಅಭಿವೃದ್ಧಿಗೆ ಹೊಂದಿಕೆಯಾಗುವ ನವೀನ ದಾರಿ ಹುಡುಕುವುದು ಮಹತ್ವದ ವಿಷಯ ಎಂದು ಅವರು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ನಿರಂಜನ್ ಎನ್. ಚಿಪ್ಲುಂಕರ್ ಅವರು, ಮಹಾವಿದ್ಯಾಲಯವು ವಿದ್ಯಾರ್ಥಿಗಳ ತಾಂತ್ರಿಕ ಪ್ರಗತಿಗಾಗಿ ನೀಡುತ್ತಿರುವ ಅನೇಕ ಅವಕಾಶಗಳ ಬಗ್ಗೆ ವಿವರಿಸಿದರು.

ಎಂ.ಸಿ.ಎ ವಿಭಾಗದ ಮುಖ್ಯಸ್ಥೆ ಡಾ. ಮಮತಾ ಬಾಲಿಪ ಸ್ವಾಗತಿಸಿ ಕಾರ್ಯಕ್ರಮದ ಮಹತ್ವವನ್ನು ವಿವರಿಸಿದರು. ಸಂಯೋಜಕಿ ಡಾ. ಸ್ಪೂರ್ತಿ ಬಿ. ಶೆಟ್ಟಿ ಅತಿಥಿಯನ್ನು ಪರಿಚಯಿಸಿದರು. ಇನ್ನೋರ್ವ ಸಂಯೋಜಕಿ ಡಾ. ಮಂಗಳಾ ಶೆಟ್ಟಿ ವಂದಿಸಿದರು.

ಉದ್ಘಾಟನೆಯ ನಂತರ, ವಿವಿಧ ಕಾಲೇಜುಗಳಿಂದ ಆಗಮಿಸಿದ ಬಿ.ಸಿ.ಎ, ಬಿ.ಎಸ್ಸಿ, ಬಿಬಿಎ ಹಾಗೂ ಬಿಕಾಂ ವಿದ್ಯಾರ್ಥಿಗಳಿಗೆ ವಿವಿಧ ತಾಂತ್ರಿಕ ಸ್ಪರ್ಧೆಗಳು ನಡೆದವು.