ಇಂದಿನ ಡಿಜಿಟಲ್‌ಯುಗದಲ್ಲಿ ಕೃತಕ ಬುದ್ಧಿಮತ್ತೆ ಮತ್ತು ಕೋಡಿಂಗ್ ಕೌಶಲ್ಯಗಳು ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ಅತ್ಯಂತ ಅಗತ್ಯವಾಗಿವೆ. ಇಂತಹ ನೂತನ ತಂತ್ರಜ್ಞಾನಗಳನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಳ್ಳಬೇಕು ಎಂದು ಮುಂಡ್ಕೂರು ವಿದ್ಯಾವರ್ಧಕ ಪದವಿಪೂರ್ವಕಾಲೇಜಿನ ಪ್ರಾಧ್ಯಾಪಕ ಪ್ರಕಾಶ್ ನಾಯ್ಕ ಹೇಳಿದರು.

ಮೂಡುಬಿದಿರೆ: ಇಂದಿನ ಡಿಜಿಟಲ್‌ಯುಗದಲ್ಲಿ ಕೃತಕ ಬುದ್ಧಿಮತ್ತೆ ಮತ್ತು ಕೋಡಿಂಗ್ ಕೌಶಲ್ಯಗಳು ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ಅತ್ಯಂತ ಅಗತ್ಯವಾಗಿವೆ. ಇಂತಹ ನೂತನ ತಂತ್ರಜ್ಞಾನಗಳನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಳ್ಳಬೇಕು ಎಂದು ಮುಂಡ್ಕೂರು ವಿದ್ಯಾವರ್ಧಕ ಪದವಿಪೂರ್ವಕಾಲೇಜಿನ ಪ್ರಾಧ್ಯಾಪಕ ಪ್ರಕಾಶ್ ನಾಯ್ಕ ಹೇಳಿದರು. ಶ್ರೀ ಮಹಾವೀರ ಕಾಲೇಜಿನಲ್ಲಿ ಒಂದು ವಾರದ ಎಐ ಮತ್ತು ಕೋಡಿಂಗ್ ಬೂಟ್‌ ಕ್ಯಾಂಪ್ ಹಾಗೂ ಶಿಕ್ಷಕರಿಗಾಗಿ ಎಐ ಕಾರ್ಯಾಗಾರದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.ಈ ಸಮಾರೋಪ ಕಾರ್ಯಕ್ರಮದ ಮುಖ್ಯಅತಿಥಿಯಾಗಿದ್ದ ಮಣಿಪಾಲ್ ಇನ್‌ಸ್ಟಿಟ್ಯೂಟ್ ಆಫ್‌ಟೆಕ್ನಾಲಜಿಯ ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಹಾಗೂ ಸಂಪನ್ಮೂಲ ವ್ಯಕ್ತಿ ಡಾ.ಅಶ್ವತ್ಥರಾವ್ ಮಾತನಾಡಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ತಂತ್ರಜ್ಞಾನವನ್ನು ಕೇವಲ ಬಳಕೆ ಮಾಡುವುದಲ್ಲದೆ, ಅದರ ಹಿಂದಿನ ತಾರ್ಕಿಕ ಚಿಂತನೆ ಹಾಗೂ ಕೋಡಿಂಗ್‌ ಕೌಶಲ್ಯವನ್ನು ಹೇಗೆ ಅಳವಡಿಸಿಕೊಳ್ಳಬೇಕು ಎಂಬುದರ ಕುರಿತು ಪ್ರಾಯೋಗಿಕ ಮಾಹಿತಿ ನೀಡಿದರು.

ಮಣಿಪಾಲ್ ಇನ್‌ಸ್ಟಿಟ್ಯೂಟ್ ಆಫ್‌ಟೆಕ್ನಾಲಜಿ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಿತು.ಶ್ರೀ ಮಹಾವೀರ ಪದವಿಪೂರ್ವಕಾಲೇಜಿನ ಪ್ರಾಂಶುಪಾಲೆ ಲೆಫ್ಟಿನೆಂಟ್ ವಿಜಯಲಕ್ಷ್ಮೀ ಅವರು ಇಂದಿನ ವಿದ್ಯಾರ್ಥಿ ಸಮುದಾಯಕ್ಕೆ ಹಾಗೂ ಶಿಕ್ಷಕರಿಗೆ ಇಂತಹತರಬೇತಿ ಕಾರ್ಯಾಗಾರಗಳು ಅತ್ಯಂತ ಪ್ರಯೋಜನಕಾರಿಯಾಗಿದ್ದು, ಭವಿಷ್ಯದ ಸ್ಪರ್ಧಾತ್ಮಕಜಗತ್ತನ್ನುಎದುರಿಸಲು ಇವು ಬುನಾದಿಯಾಗಲಿವೆ ಎಂದರು.

ಶಾಲಾ ಹಂತದಲ್ಲಿ ತಂತ್ರಜ್ಞಾನ ಅರಿವು: ಅಧ್ಯಕ್ಷತೆ ವಹಿಸಿದ್ದ ಶ್ರೀ ಮಹಾವೀರ ಪದವಿ ಕಾಲೇಜಿನ ಪ್ರಾಂಶುಪಾಲ ಡಾ.ರಾಧಾಕೃಷ್ಣ ಮಾತನಾಡಿ, ತಂತ್ರಜ್ಞಾನವು ವೇಗವಾಗಿ ಬೆಳೆಯುತ್ತಿದ್ದು, ವಿದ್ಯಾರ್ಥಿಗಳು ಶಾಲಾ-ಕಾಲೇಜು ಹಂತದಲ್ಲೇ ಎಐ ನಂತಹ ತಂತ್ರಜ್ಞಾನಗಳ ಅರಿವು ಮೂಡಿಸಿಕೊಳ್ಳುವುದು ಪ್ರಸ್ತುತಕಾಲದ ಅಗತ್ಯವಾಗಿದೆ ಎಂದು ಹೇಳಿದರು.ಇದೇ ಸಂದರ್ಭದಲ್ಲಿ ಕಾಲೇಜಿನ ಹೆಮ್ಮೆಯ ಹಳೆ ವಿದ್ಯಾರ್ಥಿ ಹಾಗೂ ಮೈಂಡ್‌ಫುಲ್‌ಕನ್ಸಲ್ಟಿಂಗ್‌ನ ಎಂಡಿ ಸಂಜಯ್ ಭಟ್‌ಅವರು ಪ್ರಾಯೋಜಿಸಿದ್ದ ವಿಶೇಷ ಬಹುಮಾನವನ್ನು ಪ್ರಣವ್ ಎಂಬ ವಿದ್ಯಾರ್ಥಿಗೆ ಪ್ರಾಂಶುಪಾಲರು ವಿತರಿಸಿದರು.

ಶಿಬಿರದಲ್ಲಿ ಪಾಲ್ಗೊಂಡಎಲ್ಲಾ ಪ್ರೌಢಶಾಲೆ ಹಾಗೂ ಪದವಿಪೂರ್ವಕಾಲೇಜಿನ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ಪ್ರಮಾಣಪತ್ರಗಳನ್ನು ನೀಡಲಾಯಿತು.ಕಾಲೇಜಿನ ವಿದ್ಯಾರ್ಥಿಕ್ಷೇಮಪಾಲನಾಧಿಕಾರಿ ಪ್ರೊ. ಹರೀಶ್, ಉಪಸ್ಥಿತರಿದ್ದರು. ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥೆ ಕೀರ್ತಳ ಸ್ವಾಗತಿಸಿದರು, ಕೋಡಿಂಗ್‌ಕ್ಲಬ್ ವಿದ್ಯಾರ್ಥಿ ಸಂಯೋಜಕ ನಟರಾಜ್ ಹೆಬ್ಬಾರ್ ವಂದಿಸಿದರು, ಹಾಗೂ ಕಾರ್ಯಕ್ರಮವನ್ನು ಪ್ರಥಮ ಬಿ.ಸಿ.ಎ. ವಿದ್ಯಾರ್ಥಿನಿ ಭವ್ಯಶ್ರೀ ನಿರೂಪಿಸಿದರು.