ಸಾರಾಂಶ
ಪ್ರಸ್ತುತ ಕೃತಕ ಬುದ್ಧಿಮತ್ತೆಯ ತಂತ್ರಜ್ಞಾನ ವೇಗವಾಗಿ ಬೆಳವಣಿಗೆ ಕಾಣುತ್ತಿದೆ. ಹಲವಾರು ಕ್ಷೇತ್ರಗಳಲ್ಲಿ ಆ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಲಾಗುತ್ತಿದೆ.
ಕನ್ನಡಪ್ರಭ ವಾರ್ತೆ ಮಂಡ್ಯ
ತಾಂತ್ರಿಕ ಯುಗದಲ್ಲಿ ತಂತ್ರಜ್ಞಾನ ನಾಗಾಲೋಟದಲ್ಲಿ ಬೆಳವಣಿಗೆ ಕಾಣುತ್ತಿದೆ. ಅದಕ್ಕೆ ಪೂರಕವಾಗಿ ವಿದ್ಯಾರ್ಥಿಗಳು ತಂತ್ರಜ್ಞಾನ ಆಧಾರಿತ ಶಿಕ್ಷಣದ ಕಡೆಗೆ ಹೆಚ್ಚಿನ ಆಸಕ್ತಿ ಬೆಳೆಸಿಕೊಳ್ಳುವಂತೆ ನಿವೃತ್ತ ಐಎಎಸ್ ಅಧಿಕಾರಿ ಟಿ.ತಿಮ್ಮೇಗೌಡ ಮಂಗಲ ಸಲಹೆ ನೀಡಿದರು.ನಗರದ ಕೆ.ವಿ.ಶಂಕರಗೌಡ ಶತಮಾನೋತ್ಸವ ಭವನದಲ್ಲಿ ಕನ್ನಿಕಶಿಲ್ಪ ನವೋದಯ ಎಜುಕೇಷನ್ ಟ್ರಸ್ಟ್ ಮತ್ತು ಮಂಗಲ ಟಿ.ತಿಮ್ಮೇಗೌಡ ಐಎಎಸ್ ಪ್ರತಿಷ್ಠಾನ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಮತ್ತು ಅಭಿಯಂತರ ದಿನಾಚರಣೆ ಪ್ರಯುಕ್ತ ಸಾಧಕರಿಗೆ ವಿಶೇಷ ಅಭಿನಂದನೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪ್ರಸ್ತುತ ಕೃತಕ ಬುದ್ಧಿಮತ್ತೆಯ ತಂತ್ರಜ್ಞಾನ ವೇಗವಾಗಿ ಬೆಳವಣಿಗೆ ಕಾಣುತ್ತಿದೆ. ಹಲವಾರು ಕ್ಷೇತ್ರಗಳಲ್ಲಿ ಆ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಲಾಗುತ್ತಿದೆ. ಶಿಕ್ಷಣ ಮತ್ತು ನೀರಾವರಿ ಕ್ಷೇತ್ರದಲ್ಲಿಯೂ ಅತ್ಯಾಧುನಿಕ ತಂತ್ರಜ್ಞಾನ ಬಳಕೆಯಾಗುತ್ತಿದೆ. ತಾಂತ್ರಿಕ ಶಿಕ್ಷಣದಲ್ಲಿ ಎಷ್ಟು ಕೌಶಲ್ಯವನ್ನು ಸಾಧಿಸುತ್ತೇವೆಯೋ ಅಷ್ಟು ಅವಕಾಶಗಳ ಬಾಗಿಲುಗಳು ತೆರೆದುಕೊಳ್ಳುತ್ತವೆ. ಇದರಿಂದ ಭವಿಷ್ಯವೂ ಉಜ್ವಲವಾಗಲಿದೆ ಎಂದರು.ಕಾರ್ಯಕ್ರಮದಲ್ಲಿ ವಿವಿಧ ಶಾಲೆಗಳ ಶಿಕ್ಷಕರಿಗೆ ಮತ್ತು ಇಂಜನಿಯರ್‌ಗಳನ್ನು ಗಣ್ಯರು ಗೌರವಿಸಿ ಪುರಸ್ಕರಿಸಿದರು.
ವೇದಿಕೆಯಲ್ಲಿ ವಿಶ್ರಾಂತ ಪ್ರಾಧ್ಯಾಪಕ ಬಿ.ಎಸ್.ಬೋರೇಗೌಡ, ಮಂಡ್ಯ ವಿವಿ ಉಪಕುಲಸಚಿವ ಡಾ.ಎಂ.ವೈ.ಶಿವರಾಮು, ಕನ್ನಿಕ ಶಿಲ್ಪ ನವೋದಯ ತರಬೇತಿ ಕೇಂದ್ರದ ಮುಖ್ಯಸ್ಥೆ ಕನ್ನಿಕಾ ಶಿಲ್ಪ, ಶಿಕ್ಷಕ ಕೆ.ಎಸ್.ಮಧುಸೂಧನ್, ಅಭಿಯಂತರ ಎಚ್.ಎಂ.ಮಹದೇವಪ್ಪ, ಕೆ.ಕಿಶೋರ್‌ಕುಮಾರ್, ಎಚ್.ಬಿ.ರಾಮಕೃಷ್ಣ, ಶಿವಣ್ಣಮಂಗಲ, ಉಪನ್ಯಾಸಕ ರಾಮಾರಾಧ್ಯ ಮತ್ತಿತರರಿದ್ದರು.2ಕೆಎಂಎನ್‌ಡಿ-3
ಮಂಡ್ಯದ ಕರ್ನಾಟಕ ಸಂಘದ ಕೆ.ವಿ.ಶಂಕರಗೌಡ ಶತಮಾನೋತ್ಸವ ಭವನದಲ್ಲಿ ಶಿಕ್ಷಕರ ದಿನಾಚರಣೆ ಮತ್ತು ಅಭಿಯಂತರ ದಿನಾಚರಣೆ ಪ್ರಯುಕ್ತ ಸಾಧಕರಿಗೆ ವಿಶೇಷ ಅಭಿನಂದನೆ ಕಾರ್ಯಕ್ರಮ ನಡೆಯಿತು.