ತಂತ್ರಜ್ಞಾನ ಆಧಾರಿತ ಗುಣಮಟ್ಟದ ಬೋಧನೆ ಅಗತ್ಯ

| Published : Apr 02 2024, 01:03 AM IST / Updated: Apr 02 2024, 01:04 AM IST

ಸಾರಾಂಶ

ದೊಡ್ಡಬಳ್ಳಾಪುರ: ಬದಲಾದ ಶೈಕ್ಷಣಿಕ ಕಾಲಘಟ್ಟದಲ್ಲಿ ಗುಣಮಟ್ಟ ಮತ್ತು ತಂತ್ರಜ್ಞಾನ ಆಧಾರಿತ ಬೋಧನೆಗೆ ಹೆಚ್ಚಿನ ಒತ್ತು ನೀಡುವುದು ಅಗತ್ಯ ಎಂದು ಸೇಂಟ್‌ ಕ್ಲಾರೆಟ್‌ ಕಾಲೇಜಿನ ಪ್ರಾಧ್ಯಾಪಕ ಡಾ.ಚಿನ್ಮಯ್ ದ್ಯಾಶ್ ಹೇಳಿದರು.

ದೊಡ್ಡಬಳ್ಳಾಪುರ: ಬದಲಾದ ಶೈಕ್ಷಣಿಕ ಕಾಲಘಟ್ಟದಲ್ಲಿ ಗುಣಮಟ್ಟ ಮತ್ತು ತಂತ್ರಜ್ಞಾನ ಆಧಾರಿತ ಬೋಧನೆಗೆ ಹೆಚ್ಚಿನ ಒತ್ತು ನೀಡುವುದು ಅಗತ್ಯ ಎಂದು ಸೇಂಟ್‌ ಕ್ಲಾರೆಟ್‌ ಕಾಲೇಜಿನ ಪ್ರಾಧ್ಯಾಪಕ ಡಾ.ಚಿನ್ಮಯ್ ದ್ಯಾಶ್ ಹೇಳಿದರು.

ಇಲ್ಲಿನ ದೇವರಾಜ ಅರಸು ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದಲ್ಲಿ ಆಂತರಿಕ ಗುಣಮಟ್ಟ ಮೌಲ್ಯಾಂಕನ ಕೋಶ-ಐಕ್ಯೂಎಸಿ ನೇತೃತ್ವದಲ್ಲಿ ನಡೆದ ನ್ಯಾಕ್‌ ಮಾನ್ಯತೆಯ ಕುರಿತ ಒಂದು ದಿನದ ಬೋಧಕರ ಅಭಿವೃದ್ದಿ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು.

ನ್ಯಾಕ್‌ ಮಾನ್ಯತೆ ಎಲ್ಲ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಅಗತ್ಯವಾಗಿದ್ದು, ಮೌಲ್ಯ ನಿರ್ಣಯ ಹಾಗೂ ಸವಲತ್ತುಗಳ ಮೌಲ್ಯಾಂಕನ ವಿವಿಧ ಹಂತಗಳಲ್ಲಿ ನಡೆಯುತ್ತದೆ. ಬೋಧಕರು ತಮ್ಮ ಪಾಠ-ಪ್ರವಚನಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಮತ್ತು ವ್ಯವಸ್ಥೆಯ ಸಹಾಯ ಪಡೆದು ಪರಿಣಾಮಕಾರಿಯಾಗಿ ಬೋಧಿಸುವುದು ಅಗತ್ಯವಾಗಿದೆ ಎಂದರು.

ಸೇಂಟ್‌ ಕ್ಲಾರೆಟ್ ಕಾಲೇಜಿನ ಸ್ನಾತಕೋತ್ತರ ವಾಣಿಜ್ಯ ವಿಭಾಗ ಮುಖ್ಯಸ್ಥ ಡಾ.ಸಫೀರ್‌ ಪಾಷಾ ಮಾತನಾಡಿ, ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಹಾಗೂ ಸಾಮಾಜಿಕ ಹಿತಾಸಕ್ತಿಯ ಕಾರ್ಯಯೋಜನೆಯೂ ಅಗತ್ಯ. ಶೈಕ್ಷಣಿಕ ಹಾಗೂ ಇತರ ಚಟುವಟಿಕೆಗಳ ದಾಖಲೀಕರಣಕ್ಕೂ ಅಗತ್ಯ ಆದ್ಯತೆ ನೀಡಬೇಕು ಎಂದರು.

ಕಾರ್ಯಕ್ರಮವನ್ನು ಲಯನ್ಸ್‌ ಕ್ಲಬ್‌ ಆಫ್‌ ದೊಡ್ಡಬಳ್ಳಾಪುರ ಆರ್.ಎಲ್.ಜಾಲಪ್ಪ ಇನ್ಸ್‌ಟಿಟ್ಯೂಷನ್ಸ್‌ ಉಪಾಧ್ಯಕ್ಷ ಜೆ.ಆರ್.ರಾಕೇಶ್, ಕಾಲೇಜಿನ ಆಡಳಿತಾಧಿಕಾರಿ ಐ.ಎಂ.ರಮೇಶ್‌ಕುಮಾರ್ ಉದ್ಘಾಟಿಸಿದರು. ಪ್ರಾಂಶುಪಾಲ ಡಾ.ನಾಗರಾಜ್ ಅಧ್ಯಕ್ಷತೆ ವಹಿಸಿದ್ದರು. ಆಂತರಿಕ ಗುಣಮಟ್ಟ ಮೌಲ್ಯಾಂಕನ ಕೋಶ-ಐಕ್ಯೂಎಸಿ ಸಂಯೋಜಕ ಪ್ರೊ.ಕೆ.ಆರ್.ರವಿಕಿರಣ್, ಉಪಪ್ರಾಂಶುಪಾಲ ಪ್ರೊ.ಕೆ.ದಕ್ಷಿಣಾಮೂರ್ತಿ, ಶೈಕ್ಷಣಿಕ ನಿರ್ದೇಶಕ ಡಾ.ಎಂ.ಶ್ರೀನಿವಾಸರೆಡ್ಡಿ, ವಿವಿಧ ವಿಭಾಗಗಳ ಮುಖ್ಯಸ್ಥರು ಉಪಸ್ಥಿತರಿದ್ದರು.ಫೋಟೋ- 1ಕೆಡಿಬಿಪಿ1-

ದೊಡ್ಡಬಳ್ಳಾಪುರದ ಶ್ರೀ ದೇವರಾಜ ಅರಸ್‌ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದಲ್ಲಿ ನ್ಯಾಕ್‌ ಮಾನ್ಯತೆ ಕುರಿತ ಒಂದು ದಿನದ ಕಾರ್ಯಾಗಾರ ನಡೆಯಿತು.