ಕನ್ನಡಪ್ರಭ ವಾರ್ತೆ, ತುಮಕೂರುದೇಶದ , ರಾಜ್ಯದ ಆರ್ಥಿಕ ಅಭಿವೃದ್ಧಿಯಲ್ಲಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಆರ್ಥಿಕ ವ್ಯವಸ್ಥೆಗೆ ಸುಮಾರು ಶೇ.30 ರಷ್ಟು ಕೊಡುಗೆ ಸಣ್ಣ ಕೈಗಾರಿಕೆಗಳಿಂದಲೇ ಸಿಗುತ್ತಿದ್ದು, ಈ ಕ್ಷೇತ್ರವನ್ನು ಮತ್ತಷ್ಟು ಬಲಪಡಿಸಲು ತಂತ್ರಜ್ಞಾನ ಅಳವಡಿಕೆ ಅನಿವಾರ್ಯ ಎಂದು ಗೃಹ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ. ಪರಮೇಶ್ವರ ಅಭಿಪ್ರಾಯಪಟ್ಟರು.ನಗರದ ಅಮಾನಿಕೆರೆಯ ಗಾಜಿನ ಮನೆಯಲ್ಲಿ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ ಆಶ್ರಯದಲ್ಲಿ ಶುಕ್ರವಾರ ಆಯೋಜಿಸಿದ್ದ ದಕ್ಷಿಣ ಭಾರತ ಎಂಎಸ್ಎಂಇ ಸಮಾವೇಶದಲ್ಲಿ ಮಾತನಾಡಿದ ಅವರು, ಕೈಗಾರಿಕಾ ಕ್ಷೇತ್ರದಲ್ಲಿ ಸ್ಪರ್ಧಾತ್ಮಕತೆ ಹೆಚ್ಚಿಸಲು ನವೀನ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುವುದು ಅವಶ್ಯಕವಾಗಿದೆ. ಸಣ್ಣ ಕೈಗಾರಿಕೆಗಳು ತಂತ್ರಜ್ಞಾನ ಬಳಕೆಯಿಂದ ಉತ್ಪಾದನಾ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳುವುದರ ಜೊತೆಗೆ ಜಾಗತಿಕ ಮಾರುಕಟ್ಟೆಯಲ್ಲಿ ತಮ್ಮ ಸ್ಥಾನವನ್ನು ಗಟ್ಟಿಗೊಳಿಸಬಹುದು ಎಂದು ಅವರು ತಿಳಿಸಿದರು.
ತುಮಕೂರು ಜಿಲ್ಲೆಯಲ್ಲಿ ಕೈಗಾರಿಕಾ ಬೆಳವಣಿಗೆಗೆ ಸಾಕಷ್ಟು ಅವಕಾಶಗಳಿದ್ದು, ಅಂತರಸನಹಳ್ಳಿ ಕೈಗಾರಿಕಾ ಪ್ರದೇಶ ಮತ್ತು ವಸಂತ ನರಸಾಪುರ ಕೈಗಾರಿಕಾ ಹಬ್ ಅನ್ನು ಇನ್ನಷ್ಟು ಅಭಿವೃದ್ಧಿಪಡಿಸುವ ಅಗತ್ಯವಿದೆ ಎಂದು ಹೇಳಿದರು. ಮುಂದಿನ ವರ್ಷಗಳಲ್ಲಿ ತುಮಕೂರಿನಲ್ಲಿ ಹೆಲಿಕಾಪ್ಟರ್ ತಯಾರಿಕಾ ಘಟಕ ಆರಂಭವಾಗುವ ಸಾಧ್ಯತೆ ಇದ್ದು, ಇದರಿಂದ ಜಿಲ್ಲೆಗೆ ಹೊಸ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಎಂಎಸ್‌ಎಂಇಗಳುದೆ ಹೆಚ್ಚಳವಾದಷ್ಟು ಸ್ಥಳೀಯ ಉದ್ಯೋಗಗಳು ಹೆಚ್ಚುತ್ತವೆ. ಇದರಿಂದಾಗಿ ಸ್ಥಳೀಯವಾಗಿ ಉತ್ಪಾದನೆಯಾಗುವ ಕಚ್ಚಾ ವಸ್ತುಗಳಿಗೆ ಮಾರುಕಟ್ಟೆ ದೊರೆಯುತ್ತವೆ. ಇದನ್ನು ಉಪಯೋಗಿಸಿಕೊಂಡು ಬೆಳೆಯುವ ಸಣ್ಣ ಕೈಗಾರಿಕೆಗಳು ದೊಡ್ಡ ಕೈಗಾರಿಕೆಗಳಿಗೆ ಬೇಕಾಗುವ ವಸ್ತುಗಳನ್ನು ರವಾನಿಸಿ ಬೃಹತ್ ಕೈಗಾರಿಕೆಗಳಿಗೂ ಸಹ ಮತ್ತಷ್ಟು ಉತ್ತೇಜನ ದೊರೆತು ಅಲ್ಲಿಯೂ ಸಹ ಉದ್ಯೋಗಗಳು ಹೆಚ್ಚುವುದರಿಂದಾಗಿ ಯುವಕರು ಕೆಲಸಕ್ಕೆ ಅಲೆಯುವುದು ತಪ್ಪುವ ಜೊತೆಗೆ ಆರ್ಥಿಕವಾಗಿಯೂ ದೇಶ ಹಾಗೂ ರಾಜ್ಯಕ್ಕೆ ಸಾಕಷ್ಟು ಪ್ರಮಾಣದಲ್ಲಿ ಆದಾಯ ಬರುತ್ತದೆ ಎಂದು ವಿವರಿಸಿದರು. ಜಿಲ್ಲೆಯಲ್ಲಿ ಕೈಗಾರಿಕೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ಸುಮಾರು 300 ಎಕರೆ ಭೂಮಿಯನ್ನು ಸರ್ಕಾರ ಮೀಸಲಿಡಲು ಸಿದ್ಧವಾಗಿದೆ. ಕೆಎಸ್‌ಸಿಎ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕಾಗಿ 42 ಎಕರೆ ಭೂಮಿಯನ್ನು ಈಗಾಗಲೇ ನೀಡಲಾಗಿದೆ. ಈ ರೀತಿಯ ಅಭಿವೃದ್ಧಿ ಯೋಜನೆಗಳು ತುಮಕೂರಿನ ಸಮಗ್ರ ಬೆಳವಣಿಗೆಗೆ ಪೂರಕವಾಗಲಿವೆ ಎಂದು ಹೇಳಿದರು. ತುಮಕೂರನ್ನು ಕೈಗಾರಿಕೆ, ಶಿಕ್ಷಣ ಮತ್ತು ಮೂಲಸೌಕರ್ಯ ಕ್ಷೇತ್ರಗಳಲ್ಲಿ ಮುನ್ನಡೆಸುವತ್ತ ಸರ್ಕಾರ ಬದ್ಧವಾಗಿದೆ. ಹೇಮಾವತಿ ಯೋಜನೆಯಡಿ 18 ರಿಂದ 20 ಟಿಎಂಸಿ ನೀರನ್ನು ಜಿಲ್ಲೆಗೆ ಒದಗಿಸಲಾಗುತ್ತಿದ್ದು, ಕೃಷಿ ಮತ್ತು ಕೈಗಾರಿಕಾ ಚಟುವಟಿಕೆಗಳಿಗೆ ಇದು ನೆರವಾಗಲಿದೆ ಎಂದು ಅವರು ಹೇಳಿದರು.ತುಮಕೂರು ಜಿಲ್ಲೆ ಭವಿಷ್ಯದಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳುವ ಸಾಮರ್ಥ್ಯ ಹೊಂದಿದ್ದು, ಸರ್ಕಾರದ ಯೋಜನೆಗಳು ಹಾಗೂ ಹೂಡಿಕೆಗಳಿಂದ ಜಿಲ್ಲೆಯ ಪ್ರಗತಿ ವೇಗ ಪಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಕಾರ್ಯಕ್ರಮದಲ್ಲಿ ತುಮಕೂರು ನಗರ ಶಾಸಕ ಜ್ಯೋತಿ ಗಣೇಶ್, ತುಮಕೂರು ವಿಶ್ವವಿದ್ಯಾನಿಲಯದ ಕುಲಸಚಿವರಾದ ಎಂ. ವೆಂಕಟೇಶ್ವರಲು ಹಾಗೂ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.ಕೈಗಾರಿಕಾ ಬೆಳವಣಿಗೆಗೆ ತಂತ್ರಜ್ಞಾನ ಅಗತ್ಯ
ದೇಶದ , ರಾಜ್ಯದ ಆರ್ಥಿಕ ಅಭಿವೃದ್ಧಿಯಲ್ಲಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಆರ್ಥಿಕ ವ್ಯವಸ್ಥೆಗೆ ಸುಮಾರು ಶೇ.30 ರಷ್ಟು ಕೊಡುಗೆ ಸಣ್ಣ ಕೈಗಾರಿಕೆಗಳಿಂದಲೇ ಸಿಗುತ್ತಿದ್ದು, ಈ ಕ್ಷೇತ್ರವನ್ನು ಮತ್ತಷ್ಟು ಬಲಪಡಿಸಲು ತಂತ್ರಜ್ಞಾನ ಅಳವಡಿಕೆ ಅನಿವಾರ್ಯ ಎಂದು ಗೃಹ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ. ಪರಮೇಶ್ವರ ಅಭಿಪ್ರಾಯಪಟ್ಟರು.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.