ಸಾರಾಂಶ
ಸೋಂಕು ತಡೆಗೆ ಆಸ್ಪತ್ರೆಯಲ್ಲಿ ಅಗತ್ಯ ಆಕ್ಸಿಜನ್ ಬೆಡ್, ಐಸಿಯು ಬೆಡ್, ವೆಂಟಿಲೆಟರ್ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಹೊಂದಬೇಕು.
ಕನ್ನಡಪ್ರಭ ವಾರ್ತೆ ಹುಕ್ಕೇರಿ ತಾಲೂಕಿನಲ್ಲಿ ಕೋವಿಡ್-19 ರೂಪಾಂತರಿ ತಳಿಯ ಸೋಂಕು ಪಸರಿಸದಂತೆ ಅಗತ್ಯ ಮುನ್ನಚ್ಚರಿಕೆ ಕ್ರಮಗಳನ್ನು ವಹಿಸಬೇಕು ಎಂದು ತಹಸೀಲ್ದಾರ್ ಮಂಜುಳಾ ನಾಯಕ ಹೇಳಿದರು.
ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಸ್ಥಾಪಿಸಲಾದ ಆಕ್ಸಿಜನ್ ಘಟಕ ಪರಿಶೀಲಿಸಿದ ಬಳಿಕ ವೈದ್ಯರೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಕೊರೋನಾ ರೂಪಾಂತರಿ ತಳಿಯ ಬಗ್ಗೆ ಆತಂಕ ಪಡದೇ ಮುಂಜಾಗೃತಾ ಕ್ರಮ ವಹಿಸಬೇಕು. ಈ ಸೋಂಕು ತಡೆಗೆ ಆಸ್ಪತ್ರೆಯಲ್ಲಿ ಅಗತ್ಯ ಆಕ್ಸಿಜನ್ ಬೆಡ್, ಐಸಿಯು ಬೆಡ್, ವೆಂಟಿಲೆಟರ್ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಹೊಂದಬೇಕು. ಶಂಕಿತ ರೋಗಿಗಳ ರಕ್ತ ತಪಾಸಣಾ ಮಾಡಬೇಕು. ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ವಿವಿಧ ಇಲಾಖೆಗಳು ಆರೋಗ್ಯ ಇಲಾಖೆಯೊಂದಿಗೆ ಕೈ ಜೋಡಿಸುವ ಮೂಲಕ ಸೋಂಕು ನಿಯಂತ್ರಣದಲ್ಲಿ ಮಹತ್ವದ ಪಾತ್ರ ನಿಭಾಯಿಬೇಕು ಎಂದು ಹೇಳಿದರು.ತಾಲೂಕು ಆರೋಗ್ಯ ಅಧಿಕಾರಿ ಡಾ.ಉದಯ ಕುಡಚಿ, ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ.ಎಂ.ಎಂ.ನರಸನ್ನವರ, ವೈದಾಧಿಕಾರಿ ಡಾ.ಎಸ್.ಸಿ.ವಿಜಾಪುರ, ಡಾ.ರಿಯಾಜ್ ಮಕಾನದಾರ, ವಿನಯ ಬಾರ್ಕಿ ಮತ್ತಿತರರು ಇದ್ದರು.
.