ಸಾರಾಂಶ
ದೇಶದಲ್ಲಿ ಪೋಲಿಯೋ ಎಲ್ಲಿಯೂ ಕಂಡು ಬಂದಿಲ್ಲ. ಭಾರತ ಪೋಲಿಯೋ ಮುಕ್ತ ದೇಶವಾಗಿದೆ. ಹಲವು ದೇಶಗಳಲ್ಲಿ ಪೋಲಿಯೋ ಪತ್ತೆಯಾಗಿರುವುದರಿಂದ ಮತ್ತೊಮ್ಮೆ ಲಸಿಕೆ ಹಾಕಲಾಗುತ್ತಿದೆ. ಮನೆ, ಮನೆಗಳಿಗೆ ಆಶಾ ಕಾರ್ಯಕರ್ತೆಯರು, ಆರೋಗ್ಯ ಸಿಬ್ಬಂದಿ ಬರಲಿದ್ದಾರೆ. ಬಸ್ ನಿಲ್ದಾಣದಂತಹ ಪ್ರಮುಖ ಕೇಂದ್ರದಲ್ಲಿ ಲಸಿಕೆ ಕಾರ್ಯಕ್ರಮ ನಡೆಯಲಿದೆ.
ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ಆರೋಗ್ಯ ಇಲಾಖೆಯಿಂದ ನಾಲ್ಕು ದಿನಗಳ ಕಾಲ ನಡೆಯುವ ಪಲ್ಸ್ ಪೋಲಿಯೋ ಲಸಿಕಾ ಹನಿ ಹಾಕುವ ಕಾರ್ಯಕ್ರಮಕ್ಕೆ ತಹಸೀಲ್ದಾರ್ ನಿಸರ್ಗಪ್ರಿಯ ಚಾಲನೆ ನೀಡಿದರು.ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮಕ್ಕಳಿಗೆ ಪೊಲೀಯೊ ಹನಿ ಹಾಕುವ ಮೂಲಕ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿ, ಭಾರತ ಪೋಲಿಯೋ ಮುಕ್ತ ದೇಶವಾಗಿದೆ. ಆದರೆ, ಜಗತ್ತಿನ ಕೆಲವು ದೇಶಗಳಲ್ಲಿ ಪೋಲಿಯೋ ಇನ್ನೂ ಭೀತಿಯನ್ನುಂಟು ಮಾಡುತ್ತಿದೆ ಎಂದರು.
ಜಿಲ್ಲಾ ಆರೋಗ್ಯ ಸರ್ವೇಕ್ಷಣಾಧಿಕಾರಿ ಡಾ.ಕುಮಾರ್ ಮಾತನಾಡಿ, ತಾಲೂಕಿನಲ್ಲಿ 4 ದಿನದ ಲಸಿಕಾ ಅಭಿಯಾನದಲ್ಲಿ 15,435 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಗ್ರಾಮೀಣ ಭಾಗದಲ್ಲಿ 110 ಲಸಿಕಾ ಕೇಂದ್ರ, ಪಟ್ಟಣ ವ್ಯಾಪ್ತಿಯಲ್ಲಿ 6, ಪುರಸಭಾ ವ್ಯಾಪ್ತಿಗೆ ಸೇರಿದ ಹೊಸಹೊಳಲಿನಲ್ಲಿ 2 ಹಾಗೂ ಪಟ್ಟಣದ ಬಸ್ ನಿಲ್ದಾಣದಲ್ಲಿ ಒಂದು ವಿಶೇಷ ಲಸಿಕಾ ಕೇಂದ್ರನ್ನು ತೆರೆಯಲಾಗಿದೆ ಎಂದರು.ಈ ವೇಳೆ ತಾಲೂಕು ಆರೋಗ್ಯಾಧಿಕಾರಿ ಡಾ.ಅಜಿತ್, ಸಾರ್ವಜನಿಕ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ. ಶಶಿಧರ್, ಪುರಸಭಾ ಸದಸ್ಯ ಗಿರೀಶ್, ಶಿಕ್ಷಣ ಸಂಯೋಜಕಿ ನೀಲಾಮಣಿ, ಮುಖ್ಯ ಶುಶ್ರೋಷಕಿ ಬೇಬಿ, ತಾಲೂಕು ಕಸಾಪ ಮಾಜಿ ಅಧ್ಯಕ್ಷ ಎಂ.ಕೆ.ಹರಿಚರಣತಿಲಕ್, ಔಷದ ಉಗ್ರಾಣಾಧಿಕಾರಿ ಸತೀಶ್ ಬಾಬು, ಅಬ್ದುಲ್‌ಗಫಾರ್, ಹಿರಿಯ ಆರೋಗ್ಯ ಪರಿವೀಕ್ಷಣಾಧಿಕಾರಿ ಶೀಳನೆರೆ ಸತೀಶ್ ಸೇರಿದಂತೆ ಆಸ್ಪತ್ರೆಯ ಸಿಬ್ಬಂದಿ ಭಾಗವಹಿಸಿದ್ದರು.
ಜೀವಾಮೃತ ಪೋಲಿಯೋ ಲಸಿಕೆ: ಡಾ. ಚಂದ್ರಶೇಖರ್ಕಿಕ್ಕೇರಿ:ಅಂಗವೈಕಲ್ಯತೆಯಂತಹ ಸಮಸ್ಯೆ ಬಾರದಂತೆ ಮಕ್ಕಳಿಗೆ ಜೀವಾಮೃತವಾಗಿ ಪೋಲಿಯೋ ಲಸಿಕೆ ಕೆಲಸ ಮಾಡುತ್ತದೆ ಎಂದು ಆಯುಷ್ ವೈದ್ಯಾಧಿಕಾರಿ ಡಾ.ಚಂದ್ರಶೇಖರ್ ತಿಳಿಸಿದರು.ಸಮೀಪದ ಮಂದಗೆರೆಯಲ್ಲಿ 5 ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕಿ ಮಾತನಾಡಿ, ದೇಶದಲ್ಲಿ ಪೋಲಿಯೋ ಎಲ್ಲಿಯೂ ಕಂಡು ಬಂದಿಲ್ಲ. ಭಾರತ ಪೋಲಿಯೋ ಮುಕ್ತ ದೇಶವಾಗಿದೆ. ಹಲವು ದೇಶಗಳಲ್ಲಿ ಪೋಲಿಯೋ ಪತ್ತೆಯಾಗಿರುವುದರಿಂದ ಮತ್ತೊಮ್ಮೆ ಲಸಿಕೆ ಹಾಕಲಾಗುತ್ತಿದೆ ಎಂದರು.ನಾಳೆಯಿಂದ ಮನೆ, ಮನೆಗಳಿಗೆ ಆಶಾ ಕಾರ್ಯಕರ್ತೆಯರು, ಆರೋಗ್ಯ ಸಿಬ್ಬಂದಿ ಬರಲಿದ್ದಾರೆ. ಬಸ್ ನಿಲ್ದಾಣದಂತಹ ಪ್ರಮುಖ ಕೇಂದ್ರದಲ್ಲಿ ಲಸಿಕೆ ಕಾರ್ಯಕ್ರಮ ನಡೆಯಲಿದೆ. ಕಬ್ಬುಕಟಾವು, ಕೂಲಿ ಕಾರ್ಮಿಕರು, ಕಟ್ಟಡಕಾರ್ಮಿಕರ ವಲಸಿಗ ಮಕ್ಕಳಿಗೆ ಲಸಿಕೆ ಹಾಕಲಾಗುವುದು ಎಂದರು. ಈ ವೇಳೆ ಅಂಗನವಾಡಿ, ಆಶಾ ಕಾರ್ಯಕರ್ತೆಯರು ಹಾಜರಿದ್ದರು.