ಸಮಾಜದ ಬದಲಾವಣೆಗೆ ಶ್ರಮಿಸಿದ ಮಹಾನ್ ಸಂತರು ಬಸವಣ್ಣ: ತಹಸೀಲ್ದಾರ್ ಸುರೇಂದ್ರ ಮೂರ್ತಿ

| Published : May 11 2024, 01:32 AM IST

ಸಮಾಜದ ಬದಲಾವಣೆಗೆ ಶ್ರಮಿಸಿದ ಮಹಾನ್ ಸಂತರು ಬಸವಣ್ಣ: ತಹಸೀಲ್ದಾರ್ ಸುರೇಂದ್ರ ಮೂರ್ತಿ
Share this Article
  • FB
  • TW
  • Linkdin
  • Email

ಸಾರಾಂಶ

ಸಮಾಜದಲ್ಲಿ ಆಚರಣೆಯಲ್ಲಿದ್ದ ಅಸ್ಪೃಶ್ಯತೆ ಹಾಗೂ ಸಾಮಾಜಿಕ ಪಿಡುಗುಗಳನ್ನು ಹೋಗಲಾಡಿಸುವ ಸಲುವಾಗಿ 12ನೇ ಶತಮಾನದಲ್ಲಿ ಬಸವಣ್ಣನವರು ಹೋರಾಟ ಮಾಡಿದರು,

ಕನ್ನಡಪ್ರಭ ವಾರ್ತೆ ಪಿರಿಯಾಪಟ್ಟಣ

ವಚನ ಸಾಹಿತ್ಯದ ಮೂಲಕ ಸಮಾಜದ ಬದಲಾವಣೆಗೆ ಶ್ರಮಿಸಿದ ಮಹಾನ್ ಸಂತರು ಬಸವಣ್ಣ ಅವರಾಗಿದ್ದರು ಎಂದು ತಹಸೀಲ್ದಾರ್ ಸುರೇಂದ್ರ ಮೂರ್ತಿ ಹೇಳಿದರು.

ಪಟ್ಟಣದ ತಾಲೂಕು ಆಡಳಿತ ಭವನದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿಯಿಂದ ನಡೆದ ವಿಶ್ವಗುರು ಬಸವಣ್ಣ ಅವರ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಮಾಜದಲ್ಲಿ ಆಚರಣೆಯಲ್ಲಿದ್ದ ಅಸ್ಪೃಶ್ಯತೆ ಹಾಗೂ ಸಾಮಾಜಿಕ ಪಿಡುಗುಗಳನ್ನು ಹೋಗಲಾಡಿಸುವ ಸಲುವಾಗಿ 12ನೇ ಶತಮಾನದಲ್ಲಿ ಬಸವಣ್ಣನವರು ಹೋರಾಟ ಮಾಡಿದರು, ಆದರೆ ಅದು ಇಂದಿಗೂ ನಿರಂತರವಾಗಿರುವುದು ಖಂಡನೀಯ, ಅವರನ್ನು ಒಂದು ಜಾತಿಗೆ ಸೀಮಿತ ಮಾಡದೆ ಪ್ರತಿಯೊಬ್ಬರ ಮನದಲ್ಲೂ ಅವರ ತತ್ವ ಸಿದ್ಧಾಂತ ರೂಪಿಸಿಕೊಳ್ಳಬೇಕು ಎಂದರು.

ಪ್ರೌಢಶಾಲಾ ಶಿಕ್ಷಕ ಎನ್.ಆರ್. ಕಾಂತರಾಜು ಮಾತನಾಡಿ, ಕಾಯಕ ಯೋಗಿ ಕ್ರಾಂತಿಕಾರಿ ಬಸವಣ್ಣನವರ ತತ್ವ ಆದರ್ಶವನ್ನು ಎಲ್ಲರೂ ಮೈಗೂಡಿಸಿಕೊಳ್ಳಬೇಕು,12ನೇ ಶತಮಾನದಲ್ಲಿನ ಮಹಾನ್ ಸಮಾಜ ಸುಧಾರಕ, ಕಾಯಕವೇ ಕೈಲಾಸ ಎಂಬ ವಚನ ಮೂಲಕ ಸಮಾಜಕ್ಕೆ ಮಾದರಿ ಸಂದೇಶ ನೀಡಿದ ವ್ಯಕ್ತಿ ಬಸವಣ್ಣನವರು, ತಮ್ಮ ವಚನ ಸಾಹಿತ್ಯ ಮೂಲಕ ಕಾಯಕವೇ ಕೈಲಾಸ, ದಯೆಯೇ ಧರ್ಮದ ಮೂಲವಯ್ಯ ಎಂದು ಸಾರುವ ಮೂಲಕ ಸಮಾಜಕ್ಕೆ ಅವರ ಕೊಡುಗೆ ಅಪಾರವಾದದ್ದು ಎಂದರು.

ಶಿರಸ್ತೇದಾರ್ ವಿನೋದ್ ಕುಮಾರ್, ಪಶುಸಂಗೋಪನ ಇಲಾಖೆ ಸಹಾಯಕ ನಿರ್ದೇಶಕ ಡಾ. ಸೋಮಯ್ಯ, ವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಅಧ್ಯಕ್ಷ ಚಂದ್ರಶೇಖರ್, ಬೆಟ್ಟದಪುರ ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಶಿವದೇವಪ್ಪ, ಪುರಸಭಾ ಸದಸ್ಯರಾದ ಮಂಜುನಾಥ್, ನಿರಂಜನ್, ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ನವೀನ್ ಕುಮಾರ್, ಶಿವಕುಮಾರ ಸ್ವಾಮೀಜಿ ಅಭಿಮಾನಿಗಳ ಸಂಘದ ಅಧ್ಯಕ್ಷ ಕೂರಗಲ್ಲು ಶಿವಕುಮಾರ್ ಇದ್ದರು.