ಸಾರಾಂಶ
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ: ಡೋಣಿ ನದಿ ಪ್ರವಾಹದಿಂದ ರೈತರಿಗೆ ಉಂಟಾಗಿರುವ ಬೆಳೆ ಹಾನಿ ಪರಿಹಾರ ಒದಗಿಸುವ ಸಂಬಂಧ ತಾಲೂಕಿನ ಡೋಣಿ ನದಿ ತೀರಿದ ವಿವಿಧ ಗ್ರಾಮಗಳಿಗೆ ತಹಸೀಲ್ದಾರ್ ಪ್ರಕಾಶ ಸಿಂದಗಿ ಭೇಟಿ ನೀಡಿ ಪರಿಶೀಲಿಸಿದರು. ತಾಲೂಕಿನ ಸಾತಿಹಾಳ, ಯಾಳವಾರ, ಕೊಂಡಗೂಳಿ ಸೇರಿದಂತೆ ಹಲವು ಬೆಳೆ ಹಾನಿಯಾದ ಸ್ಥಳಗಳಿಗೆ ಶುಕ್ರವಾರ ಭೇಟಿ ನೀಡಿ ವೀಕ್ಷಿಸಿದರು.

ಈ ವೇಳೆ ಸುದ್ದಿಗಾರರ ಜೊತೆ ಮಾತನಾಡಿ, ಇತ್ತೀಚೆಗೆ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಡೋಣಿ ನದಿ ಪ್ರವಾಹದಿಂದ ರೈತರು ನಾಟಿ ಮಾಡಿದ ತೊಗರಿ, ಹತ್ತಿ ಸೇರಿದಂತೆ ಹಲವು ಬೆಳೆಗಳು ನಾಶವಾಗಿವೆ. ಈ ಕುರಿತು ಶಾಸಕರಾದ ರಾಜುಗೌಡ ಪಾಟೀಲ ಕುದುರಿಸಾಲವಾಡಗಿ ಹಾಗೂ ನೋಡಲ್ ಅಧಿಕಾರಿಗಳು ಕೃಷಿ ಕಂದಾಯ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳಿಂದ ಜಂಟಿ ಸರ್ವೇ ಮಾಡಲು ತಿಳಿಸಿದ್ದರು. ಇಂದು ಡೋಣಿ ನದಿ ಪ್ರವಾಹದಿಂದ ಬೆಳೆ ಹಾನಿಯಾದ ಪ್ರದೇಶಗಳಿಗೆ ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾಹಿತಿ ಪಡೆದಿದ್ದೇನೆ. ಜಮೀನುಗಳಲ್ಲಿ ಇನ್ನು ನೀರು ಇದೆ. ಈ ಸಂಬಂಧ ರೈತರು ಸೂಕ್ತ ದಾಖಲಾತಿಗಳನ್ನು ಒದಗಿಸಿದರೆ ಸರ್ಕಾರದಿಂದ ನೀಡುವ ಬೆಳೆ ಪರಿಹಾರ ಒದಗಿಸಿಕೊಡಲು ಸಹಕಾರಿಯಾಗುತ್ತದೆ. ಬೆಳೆ ಹಾನಿಗೊಳಗಾಗಿರುವ ರೈತರು, ಗ್ರಾಮ ಆಡಳಿತ ಅಧಿಕಾರಿಗಳ ಮೂಲಕ ಮಾಹಿತಿ ನೀಡುವಂತೆ ಮನವಿ ಮಾಡಿದರು.ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ಎಚ್.ಕೆ.ಪಾಟೀಲ, ಕಂದಾಯ ನಿರೀಕ್ಷಕ ಸಂಗಮೇಶ ಗ್ವಾಳೇದ, ಗ್ರಾಮ ಆಡಳಿತ ಅಧಿಕಾರಿ ಅನಿಲ ರಾಠೋಡ ಸೇರಿ ರೈತರು ಉಪಸ್ಥಿತರಿದ್ದರು.