ಉಡುಪಿ ಕೃಷ್ಣಮಠಕ್ಕೆ ತೇಜಸ್ವಿ ಸೂರ್ಯ ಭೇಟಿ

| Published : Apr 29 2024, 01:34 AM IST

ಉಡುಪಿ ಕೃಷ್ಣಮಠಕ್ಕೆ ತೇಜಸ್ವಿ ಸೂರ್ಯ ಭೇಟಿ
Share this Article
  • FB
  • TW
  • Linkdin
  • Email

ಸಾರಾಂಶ

ಪುತ್ತಿಗೆ ಮಠದ ಗೀತಾಮಂದಿರದಲ್ಲಿ ಪರ್ಯಾಯ ಪುತ್ತಿಗೆ ಮಠದ ಹಿರಿಯ ಶ್ರೀ ಸುಗುಣೇಂದ್ರ ತೀರ್ಥ ಹಾಗೂ ಕಿರಿಯ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದರನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡರು.

ಉಡುಪಿ: ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ, ಸಂಸದ ತೇಜಸ್ವಿ ಸೂರ್ಯ ಅವರು ಉಡುಪಿ ಕೃಷ್ಣಮಠಕ್ಕೆ ಭೇಟಿ ನೀಡಿದ್ದು, ಇಲ್ಲಿನ ಪುತ್ತಿಗೆ ಮಠದ ಗೀತಾಮಂದಿರದಲ್ಲಿ ಪರ್ಯಾಯ ಪುತ್ತಿಗೆ ಮಠದ ಹಿರಿಯ ಶ್ರೀ ಸುಗುಣೇಂದ್ರ ತೀರ್ಥ ಹಾಗೂ ಕಿರಿಯ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದರನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡರು.

-------

ಬೈಂದೂರು ಬಿಜೆಪಿ ಯುವ ಮೋರ್ಚಾದಿಂದ ಶಕ್ತಿ ಸಮಾವೇಶ

ಬೈಂದೂರು: ಶಿವಮೊಗ್ಗ ಲೋಕಸಭಾ ಚುನಾವಣೆಯ ಸಂಬಂಧ ಬಿಜೆಪಿ ಯುವ ಮೋರ್ಚಾ ಬೈಂದೂರು ಮಂಡಲ ವತಿಯಿಂದ ಭಾನುವಾರ ಬೈಂದೂರುನಲ್ಲಿ ನಡೆದ ಯುವ ಕಾರ್ಯಕರ್ತರ ಯುವ ಶಕ್ತಿ ಸಮಾವೇಶದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ಬಿಜೆಪಿ ಅಭ್ಯರ್ಥಿ ಬಿ. ವೈ. ರಾಘವೇಂದ್ರ ಅವರನ್ನು ಬಹುಮತದಿಂದ ಗೆಲ್ಲಿಸುವಂತೆ ಮನವಿ ಮಾಡಿದರು.ಈ ಸಂದರ್ಭದಲ್ಲಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ರಾಜೇಶ್ ಜಿ.ವಿ., ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ, ಉಪಾಧ್ಯಕ್ಷ ಸದಾನಂದ ಉಪ್ಪಿನಕುದ್ರು, ಶಿವಮೊಗ್ಗ ಲೋಕಸಭಾ ಚುನಾವಣಾ ಪ್ರಭಾರಿಗಳಾದ ರಘುಪತಿ ಭಟ್, ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆ ಸಂಧ್ಯಾ ರಮೇಶ್, ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ವಿಜಯ್ ಕೊಡವೂರು, ಬೈಂದೂರು ಮಂಡಲ ಬಿಜೆಪಿ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಬೈಂದೂರು ಮಂಡಲ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಗಜೇಂದ್ರ ಹಾಗೂ ಪ್ರಮುಖರು ಉಪಸ್ಥಿತರಿದ್ದರು.