ಸಾರಾಂಶ
ದಾಬಸ್‍ಪೇಟೆ: ವೀರಶೈವ ಲಿಂಗಾಯತ ಸಮುದಾಯದವರು ಹಿಂದಿನ ಆಚರಣೆಗಳನ್ನು ಮತ್ತೆ ಜಾರಿಗೆ ತಂದು ಮುಂದಿನ ಪೀಳಿಗೆಗೆ ಇಷ್ಟಲಿಂಗ ಪೂಜೆಯ ಮಹತ್ವ ಕುರಿತು ತಿಳಿಸಬೇಕು ಎಂದು ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ತಿಳಿಸಿದರು.
ಪಟ್ಟಣದ ವಿ ಕೇರ್ ಶಾಲೆಯಲ್ಲಿ ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘ ಹಮ್ಮಿಕೊಂಡಿದ್ದ ವೀರಶೈವ ಲಿಂಗಾಯತ ನೌಕರರ ಸಮಾವೇಶ ಹಾಗೂ ಗುರುವಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶ್ರೀಗಳು,ಸಂಘಟನೆಯಲ್ಲಿ ಐಕ್ಯತೆ ಕಾಣಬೇಕು, ಆಚರಣೆಗಳನ್ನು ಗೌರವಿಸಬೇಕು ಎಂದು ಹೇಳಿದರು.ಶಾಸಕ ಎನ್.ಶ್ರೀನಿವಾಸ್ ಮಾತನಾಡಿ, ವೀರಶೈವ ಲಿಂಗಾಯತ ಸಮಾಜದ ಆಶೀರ್ವಾದದಿಂದ ನಾನು ಶಾಸಕನಾಗಿ ಆಯ್ಕೆಯಾಗಿದ್ದೇನೆ. ಕ್ಷೇತ್ರದಲ್ಲಿ ಸರ್ಕಾರಿ ನೌಕರರ ಜೊತೆ ಸದಾ ಇರುತ್ತೇನೆ. ನನ್ನ ಗೆಲುವಿಗೆ ಈ ಸಮಾಜ ಪ್ರಮುಖ ಪಾತ್ರ ವಹಿಸಿದೆ. ಕ್ಷೇತ್ರದಲ್ಲಿರುವ ಮಠಗಳ ಅಭಿವೃದ್ಧಿಗೆ ಸಹಕರಿಸುತ್ತೇನೆ. ನಮ್ಮ ಪಕ್ಷದಲ್ಲಿ ಇಲ್ಲದಿದ್ದರೂ ಸಹ, ನನಗೆ ಮತ ನೀಡದೇ ಇದ್ದರೂ ನೆಲಮಂಗಲ ನಗರಸಭೆಗೆ ಈ ಸಮಾಜದ ಹೆಣ್ಣು ಮಗಳನ್ನು ನಗರಸಭೆ ಅಧ್ಯಕ್ಷೆಯನ್ನಾಗಿ ಮಾಡಿದ್ದೇನೆ. ಬೇರೆ ಬೇರೆ ಅಧಿಕಾರಿಗಳನ್ನು ನಿಯೋಜಿಸಿದ್ದೇನೆ. ಮುಂದಿನ ದಿನಗಳಲ್ಲಿ ಅಧಿಕಾರ ಹಾಗೂ ಪಕ್ಷದಲ್ಲಿ ಸಮಾಜದ ಮುಖಂಡರಿಗೆ ಉತ್ತಮ ಸ್ಥಾನಮಾನ ನೀಡಿ ವೀರಶೈವ ಲಿಂಗಾಯತ ಸಮಾಜದ ಋಣ ತೀರಿಸುತ್ತೇನೆ ಎಂದರು.
ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಕ್ಷರಿ ಮಾತನಾಡಿ, ವೀರಶೈವ ನೌಕರರ ಕ್ಷೇಮಾಭಿವೃದ್ಧಿ ಸಂಘವನ್ನು 20 ವರ್ಷದ ಹಿಂದೆಯೇ ಪ್ರಾರಂಭಿಸಿದ್ದೇವೆ, ಸಮುದಾಯದ ನೌಕರರಿಗೆ ಆತ್ಮ ಸ್ಥೆರ್ಯ ತುಂಬಲು ಈ ಸಂಘ ಪ್ರಾರಂಭಿಸಿದ್ದೇವೆ, 5.12 ಲಕ್ಷ ಸರ್ಕಾರಿ ನೌಕರರಲ್ಲಿ ಹೆಚ್ಚಿನವರು ನಮ್ಮ ಸಮುದಾಯದವರೇ ಇದ್ದಾರೆ. ಸಂಘ ಮತ್ತು ಸಂಘಟನೆಗಳು ರಚನಾತ್ಮಕ, ಕ್ರಿಯಾಶೀಲವಾಗಿ, ಚಲನಾತ್ಮಕವಾಗಿರಬೇಕು, ರಾಜ್ಯ ಸರ್ಕಾರಿ ನೌಕರರ ಸಂಘ 104 ವರ್ಷ ತುಂಬಿದ ಹಳೆಯ ಸಂಘ, ಫಲಾಪೇಕ್ಷೆಯಿಲ್ಲಿದೆ ಸಂಘಟನೆ ಕೆಲಸ ಮಾಡಬೇಕು ಎಂದರು.ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಕೇಂದ್ರ ಘಟಕದ ಉಪಾಧ್ಯಕ್ಷ ಬಿ.ಎಸ್.ಸಚ್ಚಿದಾನಂದಮೂರ್ತಿ ಮಾತನಾಡಿ, ವೀರಶೈವ ಲಿಂಗಾಯತ ಸಮುದಾಯದ ಸಂಘಟನೆಗೆ ಪ್ರತಿಯೊಬ್ಬರು ಶ್ರಮಿಸಬೇಕು. ಸಮಾಜದ ಅಭಿವೃದ್ದಿಗೆ ಶ್ರಮಿಸಬೇಕೆಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಗದ್ದುಗೆ ಮಠದ ಮಹಂತ ಸ್ವಾಮೀಜಿ, ಬಸವಣ್ಣದೇವರ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ, ಹಿರೇಮಠದ ಡಾ.ಶ್ರೀ ಶಿವಾನಂದ ಶಿವಾಚಾರ್ಯ ಸ್ವಾಮೀಜಿ, ಮೇಲಣಗವಿ ಮಠದ ಡಾ.ಶ್ರೀ ಮಲಯ ಶಾಂತಮುನಿ ದೇಶೀಕೇಂದ್ರ ಸ್ವಾಮೀಜಿ, ಹೊನ್ನಮ್ಮಗವಿ ಮಠದ ಶ್ರೀ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ, ಸೋಂಪುರ ಕೈಗಾರಿಕಾ ಒಕ್ಕೂಟದ ಅಧ್ಯಕ್ಷ ಕಂಠಪ್ಪ, ಜಿಲ್ಲಾ ಉಸ್ತುವಾರಿ ಹರೀಶ್ ಆರಾಧ್ಯ ಮಾತನಾಡಿದರು.ಕಾರ್ಯಕ್ರಮದಲ್ಲಿ ಕಂಬಾಳು ಮಠದ ಶ್ರೀ ಚನ್ನವೀರ ಶಿವಾಚಾರ್ಯ ಸ್ವಾಮೀಜಿ, ಕಂಚುಗಲ್ ಬಂಡೆಮಠದ ಶ್ರೀ ಮಹಾಲಿಂಗ ಸ್ವಾಮೀಜಿ, ಜಗ್ಗಯ್ಯನಮಠದ ಚನ್ನಬಸವ ಸ್ವಾಮೀಜಿ, ವನಕಲ್ಲು ಮಠದ ಡಾ.ಶ್ರೀ ಬಸವರಮಾನಂದ ಸ್ವಾಮೀಜಿ, ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ದಿ ಸಂಘದ ರಾಜ್ಯಾಧ್ಯಕ್ಷ ಸೋಮಶೇಖರ್, ಬಿಇಒ ರಮೇಶ್, ವಲಯ ಅರಣ್ಯಾಧಿಕಾರಿ ಮಂಜುನಾಥ್, ಸಾಹಿತಿ ಬಿದಲೂರು ಸೋಮಶೇಖರ್, ಗ್ರಾಪಂ ಮಾಜಿ ಅಧ್ಯಕ್ಷ ರುದ್ರಯ್ಯ, ಉದ್ಯಮಿ ಅಂಚೆಮನೆ ರಾಜಶೇಖರ್, ನಿವೃತ್ತ ಆಯುಕ್ತ ಪ್ರಕಾಶ್ ಕುಮಾರ್, ನಗರಸಭೆ ಸದಸ್ಯರಾದ ಪ್ರದೀಪ್ ಕುಮಾರ್, ಪೂರ್ಣೀಮಾ, ಲೋಲಾಕ್ಷಿ, ಮುಖಂಡ ತಟ್ಟೆಕೆರೆ ನಾಗರುದ್ರ ಶರ್ಮಾ, ಗ್ರಾಪಂಮಾಜಿ ಅಧ್ಯಕ್ಷ ಶಿವಕುಮಾರ್, ಮಹಾಸಭಾದ ಜಿಲ್ಲಾಧ್ಯಕ್ಷ ರೇವಣಸಿದ್ದಯ್ಯ, ತಾಲ್ಲೂಕು ಅಧ್ಯಕ್ಷ ರಾಜಶೇಖರ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ರಾಜಮ್ಮ, ತಾಲ್ಲೂಕು ಅಧ್ಯಕ್ಷೆ ವೇದಾವತಿ, ಸಂಘಟನೆಯ ಗೌರವಾಧ್ಯಕ್ಷ ಹೊನ್ನಸ್ವಾಮಿ, ಅಧ್ಯಕ್ಷ ಅದರಂಗಿ ಪರಮೇಶ್, ಪದಾಧಿಕಾರಿಗಳು ಉಪಸ್ಥಿತರಿದ್ದರು.
ಪೋಟೋ 4 :ದಾಬಸ್‍ಪೇಟೆ ವಿ ಕೇರ್ ಶಾಲೆಯಲ್ಲಿ ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘ ಹಮ್ಮಿಕೊಂಡಿದ್ದ ವೀರಶೈವ ಲಿಂಗಾಯತ ನೌಕರರ ಸಮಾವೇಶ ಹಾಗೂ ಗುರುವಂದನಾ ಕಾರ್ಯಕ್ರಮದಲ್ಲಿ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ, ಶಾಸಕ ಶ್ರೀನಿವಾಸ್, ಹರಗುರು ಚರಮೂರ್ತಿಗಳು ಭಾಗವಹಿಸಿದ್ದರು.