ಸಾರಾಂಶ
ಈ ಹಿಂದಿನ ಎಲ್ಲ ಚುನಾವಣೆಗಳ ಇತಿಹಾಸ ಅಳಿಸಿ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಅವರು ಅತ್ಯಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಶಾಸಕ ಯು.ಬಿ. ಬಣಕಾರ ವಿಶ್ವಾಸ ವ್ಯಕ್ತಪಡಿಸಿದರು.
ಹಿರೇಕೆರೂರು: ರಾಜ್ಯ ಸರ್ಕಾರದ ಸಾಧನೆಗಳನ್ನು ಕ್ಷೇತ್ರದ ಮತದಾರರ ಮನೆ ಮನೆ ಹೋಗಿ ತಿಳಿಸುವ ಮೂಲಕ ತಾಲೂಕಿನಿಂದ ಕಾಂಗ್ರೆಸ್‌ಗೆ ಅತಿ ಹೆಚ್ಚು ಮತ ಕೊಡಿಸಬೇಕು. ಈ ಹಿಂದಿನ ಎಲ್ಲ ಚುನಾವಣೆಗಳ ಇತಿಹಾಸ ಅಳಿಸಿ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಅವರು ಅತ್ಯಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಶಾಸಕ ಯು.ಬಿ. ಬಣಕಾರ ವಿಶ್ವಾಸ ವ್ಯಕ್ತಪಡಿಸಿದರು.
ತಾಲೂಕಿನ ಎಮ್ಮಿಗನೂರು ಗ್ರಾಮದಲ್ಲಿ ಗುರುವಾರ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ಕಾಂಗ್ರೆಸ್ ನುಡಿದಂತೆ ನಡೆದ ಪಕ್ಷವಾಗಿದೆ. ಈಗಾಗಲೇ ರಾಜ್ಯ ಸರ್ಕಾರ ಮಹಿಳೆಯರಿಗೆ ಶಕ್ತಿ ತುಂಬುವ ಕಾರ್ಯ ಮಾಡಿದೆ. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ದೇಶದಲ್ಲಿ ಕಾಂಗ್ರೆಸ್‌ಗೆ ಶಕ್ತಿ ತುಂಬುವ ಕಾರ್ಯ ಮಾಡುವ ಮೂಲಕ ಮಹಿಳೆಯರಿಗೆ, ರೈತರಿಗೆ ಮತ್ತಷ್ಟು ಶಕ್ತಿ ತುಂಬಲು ಕಾಂಗ್ರೆಸ್‌ಗೆ ಆಶೀರ್ವಾದ ಮಾಡಬೇಕು. ಈ ಬಾರಿ ಈ ಕ್ಷೇತ್ರದಲ್ಲಿ ಹೊಸ ಬಿರುಗಾಳಿ ಬೀಸುತ್ತದೆ, ಗ್ಯಾರಂಟಿ ಯೋಜನಗಳೇ ನಮಗೆ ಶ್ರೀರಕ್ಷೆಯಾಗಲಿವೆ ಎಂದರು.ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಮಡಿವಾಳರ, ಸಿದ್ದಣ್ಣವರ, ಹಂಪಣ್ಣನವರ, ದಾದಾಪೀರ್ ರಾಣಿಬೆನ್ನೂರು, ಷಣ್ಮುಖಯ್ಯ ಮಳಿಮಠ, ಶಿವರಾಜ ಹರಿಜನ, ಮಲ್ಲಿಕಾರ್ಜುನ ಬುರಡಿಕಟ್ಟಿ, ದತ್ತಾತ್ರೇಯ ರಾಯ್ಕರ್ ಹಾಗೂ ನಿಟ್ಟೂರ ಗ್ರಾಮದ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಇದ್ದರು.