ಶನಿವಾರ ರಾತ್ರಿ ಕಳ್ಳತನ ನಡೆದಿದ್ದು, ಭಾನುವಾರ ಬೆಳಗ್ಗೆ ಪೂಜೆಗೆ ಬಂದ ಸ್ಥಳೀಯರು ಬಾಗಿಲು ಹಾಗೂ ಹುಂಡಿ ಒಡೆದಿರುವುದನ್ನು ಗಮನಿಸಿ ಮುಜರಾಯಿ ಅಧಿಕಾರಿಗಳು ಮತ್ತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಶಿಡ್ಲಘಟ್ಟ: ತಾಲೂಕಿನ ಚಿಕ್ಕದಾಸರಹಳ್ಳಿ ಬೆಟ್ಟದಲ್ಲಿರುವ ಇತಿಹಾಸ ಪ್ರಸಿದ್ಧ ಬ್ಯಾಟರಾಯಸ್ವಾಮಿ ದೇವಾಲಯದ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು, ಹುಂಡಿ ಒಡೆದು ಅದರಲ್ಲಿದ್ದ 50 ಸಾವಿರಕ್ಕೂ ಅಧಿಕ ಕಾಣಿಕೆ ಹಣ ದೋಚಿಕೊಂಡು ಪರಾರಿಯಾಗಿದ್ದಾರೆ.ಶನಿವಾರ ರಾತ್ರಿ ಕಳ್ಳತನ ನಡೆದಿದ್ದು, ಭಾನುವಾರ ಬೆಳಗ್ಗೆ ಪೂಜೆಗೆ ಬಂದ ಸ್ಥಳೀಯರು ಬಾಗಿಲು ಹಾಗೂ ಹುಂಡಿ ಒಡೆದಿರುವುದನ್ನು ಗಮನಿಸಿ ಮುಜರಾಯಿ ಅಧಿಕಾರಿಗಳು ಮತ್ತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಸ್ಥಳಕ್ಕೆ ಭೇಟಿ ನೀಡಿದ ತಹಸೀಲ್ದಾರ್ ಗಗನಸಿಂಧು ಹಾಗೂ ಶಿಡ್ಲಘಟ್ಟ ಗ್ರಾಮಾಂತರ ಠಾಣೆಯ ಪಿಎಸ್‌ಐ ಸುನೀಲ್ ಪರಿಶೀಲನೆ ನಡೆಸಿದರು. ದೇವಾಲಯದಲ್ಲಿ ಈ ಹಿಂದೆಯೂ ಹಲವು ಬಾರಿ ಕಳ್ಳತನ ನಡೆದಿದ್ದು, ಆರೋಪಿಗಳನ್ನು ಪತ್ತೆಹಚ್ಚಿ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ದೂರು ನೀಡಲಾಗಿದೆ ಎಂದು ತಹಸೀಲ್ದಾರ್ ತಿಳಿಸಿದ್ದಾರೆ.ಪದೇಪದೇ ಕಳ್ಳತನ ನಡೆಯುತ್ತಿದ್ದರೂ ಶಾಶ್ವತ ಭದ್ರತೆ ಕಲ್ಪಿಸದಿರುವುದಕ್ಕೆ ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದೇವಾಲಯದ ಆವರಣದಲ್ಲಿ ಸಿಸಿ ಕ್ಯಾಮೆರಾ ಅಳವಡಿಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಪ್ರಕರಣ ದಾಖಲಾಗಿದೆ.ಸುದ್ದಿ ಚಿತ್ರ ೧

ತಾಲ್ಲೂಕಿನ ಚಿಕ್ಕದಾಸರಹಳ್ಳಿ ಬ್ಯಾಟರಾಯಸ್ವಾಮಿ ದೇವಾಲಯದ ಹುಂಡಿ ಕಳ್ಳತನ ದ ಸ್ಥಳಕ್ಕೆ ಭೇಟಿ ನೀಡಿದ ತಹಶೀಲ್ದಾರ್ ಗಗನಸಿಂಧು ಹಾಗೂ ಶಿಡ್ಲಘಟ್ಟ ಗ್ರಾಮಾಂತರ ಠಾಣೆಯ ಪಿಎಸ್‌ಐ ಸುನೀಲ್ ಪರಿಶೀಲನೆ ನಡೆಸಿದರು