ಸಾರಾಂಶ
ಹೊಳೆನರಸೀಪುರ ಪಟ್ಟಣದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಸಮೀಪದ ರೈಲ್ವೆ ಟ್ರ್ಯಾಕ್ ಪಕ್ಕದ ಜಾಗದಲ್ಲಿ ದೇವಾಲಯದ ಹುಂಡಿಯೊಂದು ಪತ್ತೆಯಾಗಿದೆ. ಶುಕ್ರವಾರ ಬೆಳಗ್ಗೆ ಹುಂಡಿಯನ್ನು ಕಂಡ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕಳ್ಳರು ದೇವಾಲಯದಲ್ಲಿ ಕದ್ದ ಹುಂಡಿಯಲ್ಲಿದ್ದ ಹಣವನ್ನು ದೋಚಿ, ನಂತರ ಹುಂಡಿಯನ್ನು ಬಿಸಾಡಿ ಹೋಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಹೊಳೆನರಸೀಪುರ
ಪಟ್ಟಣದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಸಮೀಪದ ರೈಲ್ವೆ ಟ್ರ್ಯಾಕ್ ಪಕ್ಕದ ಜಾಗದಲ್ಲಿ ದೇವಾಲಯದ ಹುಂಡಿಯೊಂದು ಪತ್ತೆಯಾಗಿದೆ. ಶುಕ್ರವಾರ ಬೆಳಗ್ಗೆ ಹುಂಡಿಯನ್ನು ಕಂಡ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕಳ್ಳರು ದೇವಾಲಯದಲ್ಲಿ ಕದ್ದ ಹುಂಡಿಯಲ್ಲಿದ್ದ ಹಣವನ್ನು ದೋಚಿ, ನಂತರ ಹುಂಡಿಯನ್ನು ಬಿಸಾಡಿ ಹೋಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.ನಗರ ಠಾಣೆ ಪಿಎಸ್ಸೈ ಅರುಣ್ ಅವರ ಸೂಚನೆ ಮೇರೆಗೆ ಪಿಸಿ ಪ್ರಕಾಶ್ ಅವರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಪರಿಶೀಲನೆ ಸಂದರ್ಭದಲ್ಲಿ ಒಂದು ಬೀಗ ಸಹ ಪತ್ತೆಯಾಗಿದೆ. ಹುಂಡಿ ಹಾಗೂ ಬೀಗವನ್ನು ವಶಕ್ಕೆ ಪಡೆದ ಪೊಲೀಸರು, ಮುಂದಿನ ಕ್ರಮ ಕೈಗೊಂಡಿದ್ದಾರೆ.