ದೇವಾಲಯಗಳು ನಮ್ಮ ಸಂಸ್ಕೃತಿಯ ಪ್ರತಿಬಿಂಬ: ಶಾಸಕ ಎಚ್.ಟಿ.ಮಂಜು

| Published : Feb 25 2025, 12:46 AM IST

ದೇವಾಲಯಗಳು ನಮ್ಮ ಸಂಸ್ಕೃತಿಯ ಪ್ರತಿಬಿಂಬ: ಶಾಸಕ ಎಚ್.ಟಿ.ಮಂಜು
Share this Article
  • FB
  • TW
  • Linkdin
  • Email

ಸಾರಾಂಶ

ಇಂದಿನ ಒತ್ತಡದ ಜೀವನದಲ್ಲಿ ಮಾನವರಾದ ನಾವು ದೇವರು ಮತ್ತು ಧರ್ಮದ ಮಾರ್ಗದಲ್ಲಿ ಸಾಗಿದರೆ ಮನಸ್ಸಿಗೆ ಶಾಂತಿ ನೆಮ್ಮದಿಯನ್ನು ಸುಲಭವಾಗಿ ಪಡೆಯಬಹುದು. ಗ್ರಾಮಗಳಲ್ಲಿ ದೇವರ ವಿಚಾರದಲ್ಲಿ ರಾಜಕಾರಣ ಬೆರಸಬಾರದು. ಚುನಾವಣಾ ವೇಳೆ ರಾಜಕೀಯ ಮಾಡಿ ನಂತರ ಗ್ರಾಮದ ಶ್ರೇಯೋಭಿವೃದ್ಧಿಗೆ ಎಲ್ಲರೂ ಪಕ್ಷಾತೀತವಾಗಿ ದುಡಿಯಬೇಕು.

ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ

ದೇವಾಲಯಗಳು ಶಾಂತಿ ನೆಮ್ಮದಿ, ಸಂತೋಷ ನೀಡುವ ತಾಣಗಳು. ದೇವಾಲಯಗಳ ಸಂರಕ್ಷಣೆ ಎಲ್ಲರ ಹೊಣೆಯಾಗಿದೆ ಎಂದು ಶಾಸಕ ಎಚ್.ಟಿ.ಮಂಜು ತಿಳಿಸಿದರು.

ತಾಲೂಕಿನ ಬ್ಯಾಲದಕೆರೆ ಗ್ರಾಮದ ಅಮೃತೇಶ್ವರ ಹಾಗೂ ಭೈರವೇಶ್ವರ ದೇವಸ್ಥಾನಗಳ ಪುನರ್ ಜೀರ್ಣೋದ್ಧಾರ ಪ್ರತಿಷ್ಠಾಪನಾ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿ, ದೇವಾಲಯಗಳು ನಮ್ಮ ಸಂಸ್ಕೃತಿ ಪ್ರತಿಬಿಂಬಿಸುವ ಪರಂಪರೆ ಹೊಂದಿವೆ. ಶಾಂತಿ, ನೆಮ್ಮದಿಯನ್ನು ನೀಡುವ ಜೊತೆಗೆ ನಮ್ಮ ಇತಿಹಾಸದ ಮೇಲೆ ಬೆಳಕು ಚೆಲ್ಲುವ ದೇವಾಲಯಗಳ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದರು.

ಅಮೃತೇಶ್ವರ ಹಾಗೂ ಭೈರವೇಶ್ವರ ಭಗವಂತನ ಕೃಪೆ ಎಲ್ಲರ ಮೇಲೆ ಇರಲಿ. ನಾಡಿಗೆ ಸಮಯಕ್ಕೆ ಸರಿಯಾಗಿ ಮಳೆ ಬೆಳೆ ಆಗಿ ರೈತಾಪಿ ವರ್ಗ ಹಾಗೂ ಜನತೆ ಸಮೃದ್ಧಿಯ ಜೀವನ ನಡೆಸಲು ಅನುಗ್ರಹ ಕರುಣಿಸಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದರು.

ಪಾಂಡವಪುರ ಉಪ ವಿಭಾಗಾಧಿಕಾರಿ ಶ್ರೀನಿವಾಸ್ ಮಾತನಾಡಿ, ಇಂದಿನ ಒತ್ತಡದ ಜೀವನದಲ್ಲಿ ಮಾನವರಾದ ನಾವು ದೇವರು ಮತ್ತು ಧರ್ಮದ ಮಾರ್ಗದಲ್ಲಿ ಸಾಗಿದರೆ ಮನಸ್ಸಿಗೆ ಶಾಂತಿ ನೆಮ್ಮದಿಯನ್ನು ಸುಲಭವಾಗಿ ಪಡೆಯಬಹುದು. ಗ್ರಾಮಗಳಲ್ಲಿ ದೇವರ ವಿಚಾರದಲ್ಲಿ ರಾಜಕಾರಣ ಬೆರಸಬಾರದು. ಚುನಾವಣಾ ವೇಳೆ ರಾಜಕೀಯ ಮಾಡಿ ನಂತರ ಗ್ರಾಮದ ಶ್ರೇಯೋಭಿವೃದ್ಧಿಗೆ ಎಲ್ಲರೂ ಪಕ್ಷಾತೀತವಾಗಿ ದುಡಿಯಬೇಕೆಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿದ್ದ ತೆಂಡೇಕೆರೆ ಬಾಳೆ ಹೊನ್ನೂರು ಶಾಖಾ ಮಠದ ಗಂಗಾಧರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ದೇವಾಲಯಗಳಿಗೆ ಹೋಗುವುದರಿಂದ ಮನಸ್ಸಿಗೆ ಶಾಂತಿ ಮತ್ತು ನೆಮ್ಮದಿ ದೊರಕುತ್ತದೆ. ದೇಗುಲಗಳು ನಮ್ಮನ್ನು ಸದಾ ಧರ್ಮ ಮಾರ್ಗದಲ್ಲಿ ಸಾಗುವಂತೆ ನಿರ್ದೇಶಿಸುತ್ತವೆ ಎಂದರು.

ಗ್ರಾಮದ ಹಿರಿಯ ಮುಖಂಡ, ಜಿಪಂ ಮಾಜಿ ಉಪಾಧ್ಯಕ್ಷ ಪಾಪೇಗೌಡ, ರಾಜ್ಯ ಸಹಕಾರ ಮಾರಾಟ ಮಹಾಮಂಡಲಿ ನಿರ್ದೇಶಕ ಶೀಳನೆರೆ ಮೋಹನ್, ಟಿಎಪಿಸಿಎಂಎಸ್ ಮಾಜಿ ನಿರ್ದೇಶಕ ಎಚ್.ಟಿ.ಲೋಕೇಶ್, ತಾಲೂಕು ನಯನಜ ಕ್ಷತ್ರೀಯ ಸಮಾಜದ ಅಧ್ಯಕ್ಷ ಕೆ.ಎಂ.ಶಿವಪ್ಪ, ಎಪಿಎಂಸಿ ಮಾಜಿ ಅಧ್ಯಕ್ಷ ಐನೋರಹಳ್ಳಿ ಮಲ್ಲೇಶ್, ಚಂದ್ರಹಾಸ್, ಪಿಎಲ್‌ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಬಸವೇಗೌಡ, ಗ್ರಾಪಂ ಅಧ್ಯಕ್ಷ ಅಶೋಕ್, ಶಾಸಕ ಆಪ್ತ ಸಹಾಯಕ ಅರಳಕುಪ್ಪೆ ಪ್ರತಾಪ್ ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು. ನಂತರ ಭಕ್ತರಿಗೆ ಅನ್ನಸಂತರ್ಪಣೆ ನಡೆಯಿತು.