ದೇವಾಲಯಗಳು ಸಂಸ್ಕೃತಿ ಪರಂಪರೆಯ ಪ್ರತೀಕ

| Published : Nov 03 2025, 01:15 AM IST

ದೇವಾಲಯಗಳು ಸಂಸ್ಕೃತಿ ಪರಂಪರೆಯ ಪ್ರತೀಕ
Share this Article
  • FB
  • TW
  • Linkdin
  • Email

ಸಾರಾಂಶ

ತಾಲೂಕಿನ ಹೊಸಕೆರೆ ಗ್ರಾಮದ ಶ್ರೀ ಮಾರಮ್ಮ ದೇವಿಯ ನೂತನ ವಿಮಾನ ಗೋಪುರ ಕಳಸ ಸ್ಥಾಪನೆ ಹಾಗೂ ಕುಂಭಾಭಿಷೇಕ ಮಹೋತ್ಸವಕ್ಕೆ ಕೇಂದ್ರ ಸಚಿವ ಹಾಗೂ ರೈಲ್ವೆ ಖಾತೆ ಸಚಿವ ವಿ ಸೋಮಣ್ಣ ಭೇಟಿ ನೀಡಿ ಶ್ರೀ ಮಾರಮ್ಮ ದೇವಾಲಯಕ್ಕೆ ಭಾನುವಾರ ಭೇಟಿ ನೀಡಿ ಅಮ್ಮನವರ ದರ್ಶನ ಪಡೆದರು.

ಕನ್ನಡಪ್ರಭ ವಾರ್ತೆ ಗುಬ್ಬಿ

ತಾಲೂಕಿನ ಹೊಸಕೆರೆ ಗ್ರಾಮದ ಶ್ರೀ ಮಾರಮ್ಮ ದೇವಿಯ ನೂತನ ವಿಮಾನ ಗೋಪುರ ಕಳಸ ಸ್ಥಾಪನೆ ಹಾಗೂ ಕುಂಭಾಭಿಷೇಕ ಮಹೋತ್ಸವಕ್ಕೆ ಕೇಂದ್ರ ಸಚಿವ ಹಾಗೂ ರೈಲ್ವೆ ಖಾತೆ ಸಚಿವ ವಿ ಸೋಮಣ್ಣ ಭೇಟಿ ನೀಡಿ ಶ್ರೀ ಮಾರಮ್ಮ ದೇವಾಲಯಕ್ಕೆ ಭಾನುವಾರ ಭೇಟಿ ನೀಡಿ ಅಮ್ಮನವರ ದರ್ಶನ ಪಡೆದರು.ಇದೇ ಸಂದರ್ಭದಲ್ಲಿ ಮಾತನಾಡಿದ ಕೇಂದ್ರ ಸಚಿವ ವಿ ಸೋಮಣ್ಣ ದೇಶದ ಸನಾತನ ಸಂಸ್ಕೃತಿ ಪರಂಪರೆಯ ಮೇಲೆ ಬೆಳಕು ಚೆಲ್ಲುವಲ್ಲಿ ದೇವಾಲಯಗಳ ಪಾತ್ರ ಮಹತ್ವದ್ದಾಗಿದೆ. ದೇವಾಲಯ ನಿರ್ಮಾಣ ಮಾಡುವುದರಿಂದ ಗ್ರಾಮಗಳಲ್ಲಿ ಶಾಂತಿ ಸೌಹಾರ್ದತೆಯನ್ನು ಕಾಪಾಡುತ್ತದೆ. ಇದರಿಂದ ದೇವಾಲಯಗಳು ಅವಶ್ಯಕತೆ ಗ್ರಾಮೀಣ ಭಾಗಕ್ಕೆ ಹೆಚ್ಚು ಇದೆ. ಶ್ರೀ ಮಾರಮ್ಮ ದೇವಾಲಯಕ್ಕೆ ನನ್ನ ಸಹಕಾರ ಇದ್ದೇ ಇರುತ್ತದೆ ಎಂದರು. ಈ ಭಾಗದಲ್ಲಿ ಸಾಕಷ್ವು ರಸ್ತೆಗಳು ನೀರಾವರಿಗೆ ಹೆಚ್ಚು ಆದ್ಯತೆ ನೀಡಲಾಗಿದೆ. ಗುಬ್ಬಿ ತಾಲೂಕಿನಲ್ಲಿ ಸಾಕಷ್ಟು ರಸ್ತೆಗಳು ಇಲ್ಲ. ರಸ್ತೆ ಮಾಡಿಕೊಡಿ ಎಂದು ಅರ್ಜಿಗಳು ಬಂದಿದೆ. ಸರ್ಕಾರಕ್ಕೆ ಕಳುಹಿಸಿದ್ದೇನೆ.ಸ ರ್ಕಾರದಿಂದ ಅನುದಾನ ಬಂದ ತಕ್ಷಣ ರಸ್ತೆಗಳನ್ನು ನಿರ್ಮಾಣ ಮಾಡಿಕೊಡುತ್ತೇನೆ ಎಂದು ತಿಳಿಸಿದರು.ಇದೇ ಸಂಧರ್ಭದಲ್ಲಿ ಶಾಸಕ ಎಸ್.ಆರ್.ಶ್ರೀನಿವಾಸ್ , ಮುಖಂಡರಾದ ಚಂದ್ರಶೇಖರ್ ಬಾಬು , ಎಸ್.ಡಿ.ದಿಲೀಪ್ ಕುಮಾರ್ , ವಿಜಯ್ ಕುಮಾರ್ , ಟಿ.ಆರ್. ಎ. ದಕ್ಷಿಣಾಮೂರ್ತಿ, ಹೆಬ್ಬಾಕ ರವಿಶಂಕರ್ , ಎಕೆಪಿರಾಜು , ನಟೇಶ್ , ಮಹಾರುದ್ರಸ್ವಾಮಿ, ಗುರುರೇಣುಕರಾಧ್ಯ, ರಂಗನಾಥ್, ಬಾಬು, ಅಂಬರಿಶ್ , ಸೋಮಣ್ಣ , ನಾರಾಯಣಮೂರ್ತಿ ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.