ದೇವಸ್ಥಾನಗಳು ಮನಶಾಂತಿ ನೀಡುವ ಕೇಂದ್ರಗಳಾಗಿದ್ದು, ಪ್ರತಿನಿತ್ಯ ದೇವಸ್ಥಾನಗಳಿಗೆ ಭೇಟಿ ನೀಡುವುದರಿಂದ ಉತ್ತಮ ಆಲೋಚನೆಗಳ ಜೊತೆಗೆ ಮಾನಸಿಕ ನೆಮ್ಮದಿ ದೊರೆಯುತ್ತದೆ. ಭಕ್ತರು ದೇವಸ್ಥಾನಗಳ ಅಭಿವೃದ್ಧಿಗೆ ದೇಣಿಗೆ ನೀಡುವುದರ ಜೊತೆಗೆ ಸ್ವಚ್ಛತೆ ಕಾಪಾಡಬೇಕು ಎಂದು ಮುಜರಾಯಿ, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಮತ್ತು ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಬಸವಂತಪ್ಪ ಹೇಳಿದ್ದಾರೆ.
- ಗುಡಾಳು ಗ್ರಾಮದಲ್ಲಿ ಶ್ರೀ ಗಣೇಶ ದೇವಸ್ಥಾನ ಉದ್ಘಾಟನೆ
- - -ದಾವಣಗೆರೆ: ದೇವಸ್ಥಾನಗಳು ಮನಶಾಂತಿ ನೀಡುವ ಕೇಂದ್ರಗಳಾಗಿದ್ದು, ಪ್ರತಿನಿತ್ಯ ದೇವಸ್ಥಾನಗಳಿಗೆ ಭೇಟಿ ನೀಡುವುದರಿಂದ ಉತ್ತಮ ಆಲೋಚನೆಗಳ ಜೊತೆಗೆ ಮಾನಸಿಕ ನೆಮ್ಮದಿ ದೊರೆಯುತ್ತದೆ. ಭಕ್ತರು ದೇವಸ್ಥಾನಗಳ ಅಭಿವೃದ್ಧಿಗೆ ದೇಣಿಗೆ ನೀಡುವುದರ ಜೊತೆಗೆ ಸ್ವಚ್ಛತೆ ಕಾಪಾಡಬೇಕು ಎಂದು ಮುಜರಾಯಿ, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಮತ್ತು ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಬಸವಂತಪ್ಪ ಹೇಳಿದರು.
ತಾಲೂಕಿನ ಗುಡಾಳು ಗ್ರಾಮದಲ್ಲಿ ಶುಕ್ರವಾರ ಶ್ರೀ ಗಣೇಶ ದೇವಸ್ಥಾನದ ಉದ್ಘಾಟನೆ ಹಾಗೂ ಕಳಸಾರೋಹಣ ಮತ್ತು ಶ್ರೀ ಆಂಜನೇಯ ಸ್ವಾಮಿ ಆರಾಧನಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. 30 ವರ್ಷಗಳಿಂದ ಗುಡಾಳು ಗ್ರಾಮದ ಜನರೊಂದಿಗೆ ಒಡನಾಟ ಹೊಂದಿದ್ದು, ತಮ್ಮನ್ನು ಗ್ರಾಮದ ಮನೆ ಮಗನಂತೆ ಕಾಣುತ್ತಿದ್ದಾರೆ. ಗ್ರಾಮಸ್ಥರ ಆಶೀರ್ವಾದ ಹಾಗೂ ಮತದಾರರು ನೀಡಿದ ಬೆಂಬಲದಿಂದ ಜಿಲ್ಲಾ ಪಂಚಾಯಿತಿ ಸದಸ್ಯ, ಶಾಸಕ ಹಾಗೂ ಸಚಿವನಾಗಿ ಜನರ ಮುಂದೆ ನಿಲ್ಲಲು ಸಾಧ್ಯವಾಗಿದೆ. ಇದಕ್ಕಾಗಿ ಗ್ರಾಮಸ್ಥರಿಗೆ ಕೃತಜ್ಞತೆ ಸಲ್ಲಿಸುವುದಾಗಿ ಹೇಳಿದರು.ಮುಖ್ಯಮಂತ್ರಿಗಳು ತಮ್ಮ ಮೇಲೆ ವಿಶ್ವಾಸವಿಟ್ಟು ಮುಜರಾಯಿ, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಖಾತೆಗಳನ್ನು ನೀಡಿದ್ದಾರೆ. ಈ ಜವಾಬ್ದಾರಿಗಳನ್ನು ಸಮರ್ಥವಾಗಿ ನಿರ್ವಹಿಸುವ ಮೂಲಕ ಗ್ರಾಮ, ಕ್ಷೇತ್ರ ಹಾಗೂ ರಾಜ್ಯದ ಅಭಿವೃದ್ಧಿಗೆ ಶ್ರಮಿಸುತ್ತೇನೆ. ತಮ್ಮ ಇಲಾಖೆಗಳ ಮೂಲಕ ದೊರೆಯುವ ವಿವಿಧ ಸೌಲಭ್ಯಗಳನ್ನು ಅರ್ಹ ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುವುದಾಗಿ ಸಚಿವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಕಲ್ಲೇಶ್, ಶಂಬಣ್ಣ, ವೆಂಕಟೇಶ್, ರಾಜಣ್ಣ, ಮಲ್ಲಿಕಾರ್ಜುನ್, ಚಂದ್ರಪ್ಪ ಸೇರಿದಂತೆ ಗ್ರಾಮಸ್ಥರು ಹಾಗೂ ಭಕ್ತರು ಉಪಸ್ಥಿತರಿದ್ದರು.- - -
-28ಕೆಡಿವಿಜಿ34, 35:ದಾವಣಗೆರೆ ತಾಲೂಕಿನ ಗುಡಾಳು ಗ್ರಾಮದಲ್ಲಿ ಸಚಿವ ಕೆ.ಎಸ್.ಬಸವಂತಪ್ಪ ಶ್ರೀ ಗಣೇಶ ದೇವಸ್ಥಾನ ಉದ್ಘಾಟಿಸಿದರು.