ತಾಲೂಕಿನ ಕತ್ರಿಕೊಪ್ಪ ಗ್ರಾಮದಲ್ಲಿ ೨೦೨೫-೨೬ನೇ ಸಾಲಿನ ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿ ೫ ಲಕ್ಷ ರು. ವೆಚ್ಚದಲ್ಲಿ ಚೌಡೇಶ್ವರಿ ದೇವಸ್ಥಾನದ ಆವರಣದಲ್ಲಿ ನೂತನ ಸಭಾಭವನ ನಿರ್ಮಾಣ ಕಾಮಗಾರಿಗೆ ಇತ್ತೀಚಿಗೆ ಶಾಸಕ, ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಶ್ರೀನಿವಾಸ ಮಾನೆ ಭೂಮಿಪೂಜೆ ನೆರವೇರಿಸಿದರು.
ಚೌಡೇಶ್ವರಿ ದೇವಸ್ಥಾನದ ಸಭಾಭವನ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
ಕನ್ನಡಪ್ರಭ ವಾರ್ತೆ ಹಾನಗಲ್ಲತಾಲೂಕಿನ ಕತ್ರಿಕೊಪ್ಪ ಗ್ರಾಮದಲ್ಲಿ ೨೦೨೫-೨೬ನೇ ಸಾಲಿನ ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿ ೫ ಲಕ್ಷ ರು. ವೆಚ್ಚದಲ್ಲಿ ಚೌಡೇಶ್ವರಿ ದೇವಸ್ಥಾನದ ಆವರಣದಲ್ಲಿ ನೂತನ ಸಭಾಭವನ ನಿರ್ಮಾಣ ಕಾಮಗಾರಿಗೆ ಇತ್ತೀಚಿಗೆ ಶಾಸಕ, ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಶ್ರೀನಿವಾಸ ಮಾನೆ ಭೂಮಿಪೂಜೆ ನೆರವೇರಿಸಿದರು.
ದೇವಸ್ಥಾನಗಳು ಕೇವಲ ಧಾರ್ಮಿಕ ಕೇಂದ್ರಗಳಾಗಿರದೆ ಸಮಾಜದ ಜನರನ್ನು ಒಗ್ಗೂಡಿಸುವ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೆ ವೇದಿಕೆಯಾಗುವ ಪ್ರಮುಖ ಸ್ಥಳಗಳಾಗಿವೆ. ಸಭಾಭವನ ನಿರ್ಮಾಣದಿಂದ ಧಾರ್ಮಿಕ, ಸಾಮಾಜಿಕ ಹಾಗೂ ಸಮುದಾಯದ ವಿವಿಧ ಕಾರ್ಯಕ್ರಮಗಳನ್ನು ನಡೆಸಲು ಅನುಕೂಲವಾಗಲಿದೆ ಎಂದು ಈ ಸಂದರ್ಭದಲ್ಲಿ ತಿಳಿಸಿದ ಶಾಸಕ ಮಾನೆ, ಗ್ರಾಮದ ಅಭಿವೃದ್ಧಿಗೆ ಶೀಘ್ರ ಇನ್ನಷ್ಟು ಅನುದಾನ ದೊರಕಿಸುವ ಭರವಸೆ ನೀಡಿದರು.ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕಾಧ್ಯಕ್ಷ ವೀರಪ್ಪ ಬೈಲವಾಳ, ತಾಪಂ ಮಾಜಿ ಅಧ್ಯಕ್ಷ ಸಿದ್ದನಗೌಡ ಪಾಟೀಲ, ಕೆಪಿಸಿಸಿ ಸದಸ್ಯ ಟಾಕನಗೌಡ ಪಾಟೀಲ, ಜಿಪಂ ಕೆಡಿಪಿ ಸದಸ್ಯ ಶಿವಣ್ಣ ಗೊಲ್ಲರ, ಮುಖಂಡರಾದ ಫಕ್ಕೀರಪ್ಪ ಪೂಜಾರ, ರಾಜೂ ಯಾಧವ, ಮಂಜುನಾಥ ಗೊಲ್ಲರ, ಪರಶುರಾಮ ಗೊಲ್ಲರ, ಮಾಲತೇಶ ಗೊಲ್ಲರ, ವಿಜಯ ಗೊಲ್ಲರ, ನಾಗಪ್ಪ ಗೊಲ್ಲರ, ಶಿವಕುಮಾರ ಗೊಲ್ಲರ, ರಾಜಕುಮಾರ ಜೋಗಪ್ಪನವರ ಸೇರಿದಂತೆ ಇನ್ನೂ ಹಲವರು ಇದ್ದರು.