ಅಪಘಾತದಲ್ಲಿ ಓರ್ವ ಯುವಕ, ಯುವತಿ ಮೃತಪಟ್ಟಿದ್ದು, ಗಾಯಾಳುವನ್ನು ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಬಳಿಕ ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.

ಗಜೇಂದ್ರಗಡ:

ಪಟ್ಟಣದ ರೋಣ ರಸ್ತೆಯ ರಾಜೂರು ಗ್ರಾಪಂ ಬಳಿ ಸಮೀಪ ಬೈಕ್ ಹಾಗೂ ಟೆಂಪೋ ವಾಹನದ ನಡುವೆ ಸೋಮವಾರ ನಡೆದ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಓರ್ವ ವ್ಯಕ್ತಿ ಗಾಯಗೊಂಡಿದ್ದಾರೆ.

ಅಪಘಾತದಲ್ಲಿ ಓರ್ವ ಯುವಕ, ಯುವತಿ ಮೃತಪಟ್ಟಿದ್ದು, ಗಾಯಾಳುವನ್ನು ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಬಳಿಕ ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ. ಘಟನೆ ಬಳಿಕ ಟೆಂಪೋ ಚಾಲಕ ವಾಹನ ಬಿಟ್ಟು ಪರಾರಿಯಾಗಿದ್ದು, ಮೃತಪಟ್ಟವರು ಹಾಗೂ ಗಾಯಗೊಂಡ ವ್ಯಕ್ತಿ ತಾಲೂಕಿನ ಗೋಗೇರಿ ಗ್ರಾಮದವರು ಎಂದು ತಿಳಿದು ಬಂದಿದ್ದು, ಘಟನೆ ಕುರಿತು ಗಜೇಂದ್ರಗಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಬಿಸಿಲಿನಿಂದ ರಕ್ಷಣೆ ಪಡೆಯಲು ಸಾರ್ವಜನಿಕರಿಗೆ ಸೂಚನೆ

ಗದಗ: ಬೇಸಿಗೆ ಕಾಲದ ಅವಧಿಯಲ್ಲಿ ರಾಜ್ಯದ ಬಹುತೇಕ ಭಾಗಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಹೆಚ್ಚಾಗಿರುವ ಸಾಧ್ಯತೆಯಿದೆ. 3ರಿಂದ 6 ದಿನಗಳ ವರೆಗೆ ಬಿಸಿಗಾಳಿಯ ಪ್ರಬಾವ ಕಂಡುಬರುವ ಸಾಧ್ಯತೆಯಿದೆ. ತೀವ್ರ ತಾಪಮಾನವು ಸಾರ್ವಜನಿಕರ ಆರೋಗ್ಯದ ಮೇಲೆ ವಿಶೇಷವಾಗಿ ಮಕ್ಕಳು, ವೃದ್ಧರು ಮತ್ತು ಅನಾರೋಗ್ಯ ಪೀಡಿತರ ಮೇಲೆ ಗಂಭೀರ ಪರಿಣಾಮ ಬೀರಬಹುದು. ಬಿಸಿಲಿನಿಂದ ಉಂಟಾಗುವ ಬಳಲಿಕೆ, ನಿರ್ಜಲೀಕರಣ ಮತ್ತು ಶಾಖಾಘಾತ ತಡೆಗಟ್ಟಲು ಮತ್ತು ತಗ್ಗಿಸಲು ಸಲಹೆ ಸೂಚನೆಗಳನ್ನು ಪಾಲಿಸಬೇಕೆಂದು ಜಿಲ್ಲಾಧಿಕಾರಿ ಸಿ.ಎನ್‌. ತಿಳಿಸಿದರು.ಈ ಕುರಿತು ಪ್ರಕಟಣೆ ನೀಡಿರುವ ಅವರು, ಸಾಧ್ಯವಾದಷ್ಟು ಮಟ್ಟಿಗೆ ವಿಶೇಷವಾಗಿ ಗರಿಷ್ಠ ತಾಪಮಾನದ ಅವಧಿಯಲ್ಲಿ ಬಿಸಿಲಿನಲ್ಲಿ ಹೋಗುವುದನ್ನು ತಪ್ಪಿಸುವುದು, ಬಾಯಾರಿಕೆ ಇಲ್ಲದಿದ್ದರೂ ಸಾಕಷ್ಟು ನೀರನ್ನು ಕುಡಿಯುವುದು. ಹಗುರವಾದ ತಿಳಿಬಣ್ಣದ ಸಡಿಲವಾದ ಮತ್ತು ಹತ್ತಿ ಬಟ್ಟೆಗಳನ್ನು ಧರಿಸುವುದು.ಬಿಸಿಲಿನಲ್ಲಿ ಹೋಗುವಾಗ ರಕ್ಷಣೆಗಾಗಿ ಕನ್ನಡಕಗಳು, ಛತ್ರಿ, ಟೋಪಿ, ಬೂಟುಗಳು ಅಥವಾ ಚಪ್ಪಲಿಗಳನ್ನು ಬಳಸಬೇಕು. ಹೊರಗಿನ ಉಷ್ಣತೆಯು ಅಧಿಕವಾಗಿರುವಾಗ ಶ್ರಮದಾಯಕ ಚಟುವಟಿಕೆಗಳನ್ನು ತಪ್ಪಿಸಬೇಕು. ಪೂರ್ವಾಹ್ನ 11ರಿಂದ ಸಂಜೆ 4ರ ಅವಧಿಯಲ್ಲಿ ಹೊರಾಂಗಣ ಸಭೆಗಳು, ಚಟುವಟಿಕೆಗಳು ನಡೆಯುವ ಪ್ರದೇಶದಲ್ಲಿ ಸಾರ್ವಜನಿಕರಿಗೆ ಬಿಸಿಲಿನಿಂದ ರಕ್ಷಣೆಯನ್ನು ನೀಡಲು ಅಗತ್ಯ ಶಾಮಿಯಾನ, ಪೆಂಡಾಲ್‌ನ ವ್ಯವಸ್ಥೆ ಮಾಡುವುದು, ಉತ್ತಮ ಗಾಳಿಯ ವ್ಯವಸ್ಥೆಯನ್ನು ಖಚಿತಪಡಿಸಿಕೊಳ್ಳುವುದು ಹಾಗೂ ಸಭಿಕರಿಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ಕಡ್ಡಾಯವಾಗಿ ಮಾಡಬೇಕು.

ಪ್ರಯಾಣ ಮಾಡುವಾಗ ನೀರನ್ನು ಜತೆ ಒಯ್ಯುಬೇಕು. ದೇಹವನ್ನು ನಿರ್ಜಲೀಕರಣಗೊಳಿಸುವ ಅಲ್ಕೋಹಾಲ್, ಚಹಾ, ಕಾಫಿ ಮತ್ತು ಕಾರ್ಬೋನೇಟೆಡ್ ತಂಪು ಪಾನೀಯಗಳನ್ನು ತಪ್ಪಿಸುವುದು. ಸಾಧ್ಯವಾದಷ್ಟು ಬಿಸಿ ಆಹಾರವನ್ನು ಸೇವಿಸುವುದು. ನಿಲ್ಲಿಸಿದ ವಾಹನಗಳಲ್ಲಿ ಮಕ್ಕಳನ್ನು ಅಥವಾ ಸಾಕುಪ್ರಾಣಿಗಳನ್ನು ಬಿಡದಿರುವುದು.ಮೂರ್ಚೆ ಅಥವಾ ಅನಾರೋಗ್ಯ ಎನಿಸಿದರೆ, ತಕ್ಷಣ ವೈಧ್ಯರನ್ನು ಭೇಟಿ ಮಾಡುವುದು. ನಿಂಬೆನೀರು, ಮಜ್ಜಿಗೆ ಮುಂತಾದ ಮನೆಯಲ್ಲಿ ತಯಾರಿಸಿದ ಪಾನೀಯಗಳನ್ನು ಮತ್ತು ಒಆರ್‌ಎಸ್‌ ಪೌಡರ್ ಬಳಸಬೇಕು. ಈ ಋತುಮಾನದಲ್ಲಿ ಲಭ್ಯವಿರುವ ಹಾಗೂ ಹೆಚ್ಚಿನ ನೀರಿನ ಅಂಶವನ್ನು ಹೊಂದಿರುವ ಹಣ್ಣು ಹಾಗೂ ತರಕಾರಿಗಳಾದ ಕಲ್ಲಂಗಡಿ, ಕರಬೂಜ ಕಿತ್ತಳೆ, ದ್ರಾಕ್ಷಿ, ಅನಾನಸ್, ಸೌತೆಕಾಯಿ, ತರಕಾರಿ ಸೊಪ್ಪು, ಎಳೆನೀರುಗಳನ್ನು ಹೆಚ್ಚಾಗಿ ಸೇವಿಸಬೇಕು ಎಂದು ತಿಳಿಸಿದ್ದಾರೆ.