ಗ್ರಾಮದ ರಫೀಕ್ ಎಂಬುವರಿಗೆ ಸೇರಿದ ಮನೆಯಲ್ಲಿ ಈ ಅವಘಡ ಸಂಭವಿಸಿದ್ದು, ಸಿಡಿಲಿನ ಹೊಡೆತಕ್ಕೆ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲಿ ವ್ಯಾಪಿಸಿದೆ ಎನ್ನಲಾಗಿದೆ. ಬೆಂಕಿಯ ತೀವ್ರತೆಗೆ ಮನೆಯಲ್ಲಿದ್ದ ವಸ್ತುಗಳು ಹಾಗೂ ಅಪಾರ ಪ್ರಮಾಣದ ಆಸ್ತಿಪಾಸ್ತಿ ಬೆಂಕಿಗಾಹುತಿಯಾಗಿವೆ. ಘಟನೆಯಿಂದ ಕುಟುಂಬಕ್ಕೆ ಭಾರೀ ಆರ್ಥಿಕ ನಷ್ಟ ಉಂಟಾಗಿದೆ. ಗುರುವಾರ ಸಂಜೆ ತಾಲೂಕಿನ ಗ್ರಾಮೀಣ ಭಾಗದಲ್ಲಿ ಗುಡುಗು, ಸಿಡಿಲು ಸಹಿತ ಮಳೆ ಸುರಿದಿದ್ದು, ಕೆಲಕಾಲ ಜನಜೀವನ ಅಸ್ತವ್ಯಸ್ತಗೊಂಡಿತ್ತು. ಇದೇ ಸಂದರ್ಭದಲ್ಲಿ ಚಿಕ್ಕೂರು ಗ್ರಾಮದಲ್ಲಿ ಸಿಡಿಲು ಬಡಿದು ಬೆಂಕಿ ಕಾಣಿಸಿಕೊಂಡಿದೆ.

ಕನ್ನಡಪ್ರಭ ವಾರ್ತೆ ಅರಸೀಕೆರೆ

ಸಿಡಿಲು ಬಡಿದ ಪರಿಣಾಮ ಮನೆಗೆ ಬೆಂಕಿ ಹೊತ್ತಿಕೊಂಡು, ಮನೆಯಲ್ಲಿದ್ದ ₹ 10 ಲಕ್ಷ ನಗದು, ಚಿನ್ನಾಭರಣ ಸೇರಿದಂತೆ ಅಪಾರ ಪ್ರಮಾಣದ ಆಸ್ತಿಪಾಸ್ತಿ ಸುಟ್ಟು ಕರಕಲಾದ ಘಟನೆ ತಾಲೂಕಿನ ಚಿಕ್ಕೂರು ಗ್ರಾಮದಲ್ಲಿ ಗುರುವಾರ ಸಂಜೆ ನಡೆದಿದೆ.

ಗ್ರಾಮದ ರಫೀಕ್ ಎಂಬುವರಿಗೆ ಸೇರಿದ ಮನೆಯಲ್ಲಿ ಈ ಅವಘಡ ಸಂಭವಿಸಿದ್ದು, ಸಿಡಿಲಿನ ಹೊಡೆತಕ್ಕೆ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲಿ ವ್ಯಾಪಿಸಿದೆ ಎನ್ನಲಾಗಿದೆ. ಬೆಂಕಿಯ ತೀವ್ರತೆಗೆ ಮನೆಯಲ್ಲಿದ್ದ ವಸ್ತುಗಳು ಹಾಗೂ ಅಪಾರ ಪ್ರಮಾಣದ ಆಸ್ತಿಪಾಸ್ತಿ ಬೆಂಕಿಗಾಹುತಿಯಾಗಿವೆ. ಘಟನೆಯಿಂದ ಕುಟುಂಬಕ್ಕೆ ಭಾರೀ ಆರ್ಥಿಕ ನಷ್ಟ ಉಂಟಾಗಿದೆ. ಗುರುವಾರ ಸಂಜೆ ತಾಲೂಕಿನ ಗ್ರಾಮೀಣ ಭಾಗದಲ್ಲಿ ಗುಡುಗು, ಸಿಡಿಲು ಸಹಿತ ಮಳೆ ಸುರಿದಿದ್ದು, ಕೆಲಕಾಲ ಜನಜೀವನ ಅಸ್ತವ್ಯಸ್ತಗೊಂಡಿತ್ತು. ಇದೇ ಸಂದರ್ಭದಲ್ಲಿ ಚಿಕ್ಕೂರು ಗ್ರಾಮದಲ್ಲಿ ಸಿಡಿಲು ಬಡಿದು ಬೆಂಕಿ ಕಾಣಿಸಿಕೊಂಡಿದೆ.

ರಫೀಕ್ ಅವರು ಹಾಸಿಗೆ ವ್ಯಾಪಾರ ನಡೆಸುತ್ತಿದ್ದು, ಮನೆಯ ಪಕ್ಕದಲ್ಲಿದ್ದ ಶೆಡ್‌ನಲ್ಲಿ ವ್ಯಾಪಾರಕ್ಕೆ ಸಂಬಂಧಿಸಿದ ಉತ್ಪನ್ನಗಳನ್ನು ಸಂಗ್ರಹಿಸಿಟ್ಟಿದ್ದರು ಎನ್ನಲಾಗಿದೆ. ಬೆಂಕಿ ವೇಗವಾಗಿ ಹರಡಿದ್ದರಿಂದ ಮನೆ ಹಾಗೂ ಶೆಡ್‌ನಲ್ಲಿದ್ದ ವಸ್ತುಗಳನ್ನು ರಕ್ಷಿಸುವುದು ಕಷ್ಟವಾಗಿದೆ.

ಮಾಹಿತಿ ತಿಳಿದು ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಲು ಪ್ರಯತ್ನಿಸಿದರೂ, ಬೆಂಕಿಯ ತೀವ್ರತೆಯಿಂದಾಗಿ ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ಗ್ರಾಮಸ್ಥರು ಸಹ ಅಸಹಾಯಕತೆಯಿಂದ ಘಟನೆ ವೀಕ್ಷಿಸುವಂತಾಯಿತು. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ, ಮನೆಯಲ್ಲಿದ್ದ ನಗದು, ಚಿನ್ನಾಭರಣ ಹಾಗೂ ಇತರ ವಸ್ತುಗಳು ನಾಶವಾಗಿರುವುದರಿಂದ ಸಂತ್ರಸ್ತ ಕುಟುಂಬಕ್ಕೆ ದೊಡ್ಡ ಹೊಡೆತ ಬಿದ್ದಿದೆ. ನಷ್ಟದ ನಿಖರ ಪ್ರಮಾಣದ ಕುರಿತು ಅಧಿಕೃತ ಮಾಹಿತಿ ಲಭ್ಯವಾಗಬೇಕಿದೆ.