ಸಾರಾಂಶ
ಪುರೋಹಿತರ ನೇತೃತ್ವದಲ್ಲಿ ತೆನೆಯನ್ನು ದೇವಾಲಯದ ಒಳಗೆ ತೆಗೆದುಕೊಂಡು ಹೋಗಿ ದೇವರ ಮುಂದೆ ಇಟ್ಟು ಪೂಜೆ ಮಾಡಲಾಯಿತು. ವಿಶೇಷ ಪೂಜೆಗಳು ನಡೆದು ನಂತರ ಅದನ್ನು ಭಕ್ತರಿಗೆ ವಿತರಿಸಲಾಯಿತು.
ಬಂಟ್ವಾಳ: ಪೊಳಲಿ ಶ್ರೀ ರಾಜರಾಜೇಶ್ವರಿ ಕ್ಷೇತ್ರದಲ್ಲಿ ತೆನೆ ಹಬ್ಬವನ್ನು ಬುಧವಾರ ಆಚರಿಸಲಾಯಿತು, ಕುರಲ್ ಪರ್ಬ ಎಂದು ಕರೆಯಲ್ಪಡುವ ಈ ಹಬ್ಬವನ್ನು ಪ್ರತಿ ವರ್ಷವೂ ಗಣೇಶ ಚತುರ್ಥಿಯ ಎರಡು ದಿನದ ಮೊದಲು ಆಚರಿಸಲಾಗುತ್ತದೆ . ಈ ವೇಳೆ ಸಾವಿರ ಸೀಮೆಯ ಒಡತಿ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಿಯ ಮುಂದೆ ಈ ಕುರಲ್ನ್ನು ಇಟ್ಟು, ಇಡಿ ಊರಿಗೆ ಒಳ್ಳೆಯದನ್ನು ಮಾಡಿ, ಸುಖ ಸಂತೋಷವನ್ನು ನೀಡಿ. ಮಳೆ ಬೆಳೆ ಒಳ್ಳೆಯ ರೀತಿಯಲ್ಲಿ ಆಗಲಿ ಎಂದು ಪ್ರಾರ್ಥನೆ ಮಾಡಲಾಗುತ್ತದೆ.
ತೆನೆಯನ್ನು ದೇವಾಲಯದ ಧ್ವಜಸ್ತಂಬದ ಮುಂಭಾಗದಲ್ಲಿ ಪ್ರಾರ್ಥನೆ ಮಾಡಿ, ಪುರೋಹಿತರ ನೇತೃತ್ವದಲ್ಲಿ ತೆನೆಯನ್ನು ದೇವಾಲಯದ ಒಳಗೆ ತೆಗೆದುಕೊಂಡು ಹೋಗಿ ದೇವರ ಮುಂದೆ ಇಟ್ಟು ಪೂಜೆ ಮಾಡಲಾಯಿತು. ವಿಶೇಷ ಪೂಜೆಗಳು ನಡೆದು ನಂತರ ಅದನ್ನು ಭಕ್ತರಿಗೆ ವಿತರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಕ್ಷೇತ್ರದ ಪ್ರಧಾನ ಅರ್ಚಕ ಮಾಧವ ಭಟ್ ಪೊಳಲಿ, ಅನುವಂಶಿಕ ಮೊಕ್ತೇಸರರಾದ ಡಾ. ಮಂಜಯ್ಯ ಶೆಟ್ಟಿ ಅಮ್ಮುಂಜೆಗುತ್ತು, ದೇವಾಲಯದ ಅರ್ಚಕ ನಾರಾಯಣ ಭಟ್, ರಾಮ್ ಭಟ್, ಪರಮೇಶ್ವರ ಭಟ್ ಕಾರ್ಯನಿರ್ವಹಣಾಧಿಕಾರಿ ಪ್ರವೀಣ್ ಹಾಗೂ ಕೃಷ್ಣಕುಮಾರ್ ಪೂಂಜ ಮೊದಲಾದವರು ಇದ್ದರು.