ತೆಂಕಮಿಜಾರು ಗ್ರಾ.ಪಂ. ವ್ಯಾಪ್ತಿಯಲ್ಲಿ ಮತದಾನ ಜಾಗೃತಿ ಅಭಿಯಾನ

| Published : Mar 29 2024, 12:48 AM IST

ಸಾರಾಂಶ

ಇಓ ವೆಂಕಟಾಚಲಪತಿ ಮತ್ತು ಪಿಡಿಒ ರೋಹಿಣಿ ಅವರು ಜಾಥಾಕ್ಕೆ ಚಾಲನೆ ನೀಡಿದರು. ನಂತರ ತೋಡಾರು ಜಂಕ್ಷನ್ ವರೆಗೆ ಜಾಥಾ ನಡೆಯಿತು.

ಮೂಡುಬಿದಿರೆ: ಭಾರತ ಚುನಾವಣಾ ಆಯೋಗ, ದಕ್ಷಿಣ ಕನ್ನಡ ಜಿಲ್ಲಾ ಸ್ವೀಪ್‌ ಸಮಿತಿ, ಸಾರ್ವತ್ರಿಕ ಲೋಕಸಭಾ ಚುನಾವಣೆ -2024 ಮೂಡುಬಿದಿರೆ ಸ್ವೀಪ್ ಸಮಿತಿ ವತಿಯಿಂದ ತೆಂಕಮಿಜಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ನೀರ್ಕೆರೆ ಎಂಬಲ್ಲಿ ಬುಧವಾರ ಕುಡುಬಿ ಜನಾಂಗದ ಕುಟುಂಬಗಳಿಗೆ ಹಾಗೂ ಗುರುವಾರ ತೋಡಾರಿನಲ್ಲಿ ಮತದಾನ ಜಾಗೃತಿ ಅಭಿಯಾನವನ್ನು ಕೈಗೊಳ್ಳಲಾಯಿತು.

ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಎಸ್.‌ವೆಂಕಟಾಚಲಪತಿ ಅವರು ಪ್ರತಿಜ್ಞಾವಿಧಿ ಬೋಧಿಸಿದರು. ಶಾಂತಿಗಿರಿ ಅಂಗನವಾಡಿ ಕೇಂದ್ರದಲ್ಲಿ ‘ಸಮೃದ್ಧಿ’ ಸಂಜೀವಿನಿ ಒಕ್ಕೂಟ ಸಭೆಯಲ್ಲಿ ಮತದಾನದ ಕುರಿತು ಜಾಗೃತಿ ಮೂಡಿಸಿದರು. ಇಓ ವೆಂಕಟಾಚಲಪತಿ ಮತ್ತು ಪಿಡಿಒ ರೋಹಿಣಿ ಅವರು ಜಾಥಾಕ್ಕೆ ಚಾಲನೆ ನೀಡಿದರು. ನಂತರ ತೋಡಾರು ಜಂಕ್ಷನ್ ವರೆಗೆ ಜಾಥಾ ನಡೆಯಿತು. ಸಹಾಯಕ ಚುನಾವಣಾಧಿಕಾರಿ ಕೆ.ರಾಜು, ಜಿಲ್ಲಾ ಸ್ವೀಪ್ ಸಮಿತಿ ಸದಸ್ಯರು, ತಾಲೂಕು ನರೇಗಾ ಐಇಸಿ ಸಂಯೋಜಕರು ಮತ್ತಿತರರು ಉಪಸ್ಥಿತರಿದ್ದರು.