ತೆಂಕನಿಡಿಯೂರು ಕಾಲೇಜು: ನಾಡಹಬ್ಬ ದಸರಾ ಆಚರಣೆ

| Published : Sep 30 2025, 12:01 AM IST

ಸಾರಾಂಶ

ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತರ ಅಧ್ಯಯನ ಕೇಂದ್ರದಲ್ಲಿ ಐಕ್ಯೂಎಸಿ ಹಾಗೂ ವಿದ್ಯಾರ್ಥಿ ಕ್ಷೇಮ ಪಾಲನಾ ಸಮಿತಿ ಆಶ್ರಯದಲ್ಲಿ ನಾಡಹಬ್ಬ ದಸರಾ ಆಚರಿಸಲಾಯಿತು.

ಕನ್ನಡಪ್ರಭ ವಾರ್ತೆ ಉಡುಪಿ

ಇಲ್ಲಿನ ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತರ ಅಧ್ಯಯನ ಕೇಂದ್ರದಲ್ಲಿ ಐಕ್ಯೂಎಸಿ ಹಾಗೂ ವಿದ್ಯಾರ್ಥಿ ಕ್ಷೇಮ ಪಾಲನಾ ಸಮಿತಿ ಆಶ್ರಯದಲ್ಲಿ ನಾಡಹಬ್ಬ ದಸರಾ ಆಚರಿಸಲಾಯಿತು.ಕಾರ್ಯಕ್ರಮ ಉದ್ಘಾಟಿಸಿದ ಪ್ರಾಂಶುಪಾಲ ನಿತ್ಯಾನಂದ ವಿ. ಗಾಂವ್ಕರ್, ಕನ್ನಡ ನಾಡು, ನುಡಿ, ಸಂಸ್ಕೃತಿಯ ಹಾಗೂ ಅಭಿಮಾನದ ಸಂಕೇತವಾಗಿರುವ ದಸರಾ ಆಚರಣೆ ನಡೆಸುತ್ತಿರುವ ವಿದ್ಯಾರ್ಥಿಗಳನ್ನು ಅಭಿನಂದಿಸುತ್ತಾ ನಮ್ಮ ಮಾತೃಭಾಷೆ ಸಂಸ್ಕೃತಿಯ ಅರಿವು ಯುವ ಜನತೆಯಲ್ಲಿ ಅವಶ್ಯಕ ಎಂದರು.ಇದೇ ಸಂದರ್ಭದಲ್ಲಿ ಅತಿಥಿಗಳಾಗಿ ಭಾಗವಹಿಸಿದ್ದ ಸಮಾಜ ಸೇವಕ ರವಿ ಕಟಪಾಡಿ ಹಾಗೂ ಭರತನಾಟ್ಯದಲ್ಲಿ ಸತತ ೨೧೬ ಗಂಟೆಗಳ ಕಾಲ ನತ್ಯ ಪ್ರದರ್ಶಿಸಿ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ಗೆ ಸೇರ್ಪಡೆಗೊಂಡ ವಿದುಷಿ ದೀಕ್ಷಾ ವಿ. ಕಾರ್ಯಕ್ರಮಕ್ಕೆ ಶುಭಹಾರೈಸಿದರು.ಐಕ್ಯೂಎಸಿ ಸಂಚಾಲಕ ಡಾ.ವಿಷ್ಣುಮೂರ್ತಿ ಪ್ರಭು, ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿಗಳಾದ ಸಂದೇಶ್, ರಾಜ್ ಕುಮಾರ್, ಶೈಕ್ಷಣಿಕ ಸಲಹೆಗಾರ ಡಾ. ಶ್ರೀಧರ್ ಭಟ್, ದೈಹಿಕ ಶಿಕ್ಷಣ ನಿರ್ದೇಶಕ ರೋಷನ್ ಕುಮಾರ್ ಶೆಟ್ಟಿ, ಕಾರ್ಯಕ್ರಮ ಸಂಘಟಿಸಿದ ಸಾಂಸ್ಕೃತಿಕ ಸಂಘ ಸಂಚಾಲಕ ಕೃಷ್ಣ ಸಾಸ್ತಾನ, ಬೋಧಕ - ಬೋಧಕೇತರ ವೃಂದದವರು ಉಪಸ್ಥಿತರಿದ್ದರು.ದೀಕ್ಷಾ ಸ್ವಾಗತಿಸಿದರು. ಯಕ್ಷ ವಂದಿಸಿದರು. ಶ್ರೀನಿಧಿ ಮತ್ತು ಅಶ್ಮಿತಾ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿಗಳಿಂದ ಕನ್ನಡ ಭಾಷೆ - ಸಂಸ್ಕೃತಿಯನ್ನು ಪ್ರತಿನಿಧಿಸುವ ವಿವಿಧ ಶಾಸ್ತ್ರೀಯ ಹಾಗೂ ಜನಪದ ನೃತ್ಯ ವೈಭವ ಜರುಗಿತು.